Kichcha Sudeep Care Foundation for Social Service: Logo Released

ಸಮಾಜಸೇವೆಗೆ ಕಿಚ್ಚ ಸುದೀಪ್ ಕೇರ್ ಫೌಂಡೇಶನ್ : ಲೋಗೋ ಬಿಡುಗಡೆ - CineNewsKannada.com

ಸಮಾಜಸೇವೆಗೆ ಕಿಚ್ಚ ಸುದೀಪ್ ಕೇರ್ ಫೌಂಡೇಶನ್ : ಲೋಗೋ ಬಿಡುಗಡೆ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕಲಾಸೇವೆ ಮಾತ್ರವಲ್ಲದೇ ಸಮಾಜಮುಖಿ ಕೆಲಸಗಳಲ್ಲಿಯೂ ಗುರುತಿಸಿಕೊಂಡಿದ್ದಾರೆ. ಸಿನಿಮಾಗಳಲ್ಲಿ ಬ್ಯುಸಿ ಆಗಿರುವ ಅವರು ಸದ್ದಿಲ್ಲದೇ ಸಮಾಜಸೇವೆ ಕೆಲಸಗಳಲ್ಲಿ ತೊಡಗಿಸಿಕೊಂಡು ಮಾದರಿಯಾಗಿದ್ದಾರೆ.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕಲಾಸೇವೆ ಮಾತ್ರವಲ್ಲದೇ ಸಮಾಜಮುಖಿ ಕೆಲಸಗಳಲ್ಲಿಯೂ ಗುರುತಿಸಿಕೊಂಡಿದ್ದಾರೆ. ಸಿನಿಮಾಗಳಲ್ಲಿ ಬ್ಯುಸಿ ಆಗಿರುವ ಅವರು ಸದ್ದಿಲ್ಲದೇ ಸಮಾಜಸೇವೆ ಕೆಲಸಗಳಲ್ಲಿ ತೊಡಗಿಸಿಕೊಂಡು ಮಾದರಿಯಾಗಿದ್ದಾರೆ.

ಇದೀಗ ಕಿಚ್ಚ ಸುದೀಪ್ ಕೇರ್ ಫೌಂಡೇಶನ್ ಎಂಬ ಹೊಸ ಚಾರಿಟೇಬಲ್ ಟ್ರಸ್ಟ್ ಪ್ರಾರಂಭಿಸಲಾಗಿದೆ. ಜೂನಿಯರ್ ಕಿಚ್ಚ ಉರೂಫ್ ಸಂಚಿತ್ ಸಂಜೀವ್ ಫೌಂಡೇಶನ್ ಲೋಗೋ ಹಾಗೂ ಟೀ ಶರ್ಟ್ ಬಿಡುಗಡೆ ಮಾಡಿದರು.

ಕಿಚ್ಚ ಸುದೀಪ್ ಕೇರ್ ಫೌಂಡೇಶನ್ ಅನೇಕ ಸಮಾಜಮುಖಿ ಕೆಲಸಗಳಿಗೆ ಮುಂದಾಗಿದೆ. ಆ ಪೈಕಿ ಶಿಕ್ಷಣ ಹಾಗೂ ವೈದ್ಯಕೀಯ ಸೇವೆ ಒದಗಿಸುವ ಮಹತ್ ಕಾರ್ಯಕ್ಕೆ ಮುಂದಾಗಿದೆ.

ಈಗಾಗಲೇ ಕಿಚ್ಚ ಸರ್ಕಾರಿ ಶಾಲೆಗಳನ್ನು ದತ್ತುಪಡೆದು ಅಭಿವೃದ್ಧಿಪಡಿಸಿದ್ದಾರೆ. ಅದರ ಮುಂದುವರೆದ ಭಾಗವೆಂಬಂತೆ ಕಿಚ್ಚ ಸುದೀಪ್ ಕೇರ್ ಫೌಂಡೇಶನ್ ಸಂಸ್ಥಾಪಿಸಿ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಲು ಮುಂದಾಗಿದ್ದಾರೆ.

ಮ್ಯಾಕ್ಸ್ ಸಿನಿಮಾ ಬೆಳ್ಳಿತೆರೆಯಲ್ಲಿ ಮ್ಯಾಜಿಕ್ ಮಾಡ್ತಿರುವ ಮೂವೆಂಟ್ ನಲ್ಲಿ ಕಿಚ್ಚನ ಈ ಸಮಾಜಮುಖಿ ಕೆಲಸಕ್ಕೆ ಮುಂದಾಗಿರುವ ನಡೆ ಕಂಡು ಅಭಿಮಾನಿಗಳು ಸಂತಸಪಡುತ್ತಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin