Kichcha Sudeep released the trailer of 'Anavarana'

`ಅನಾವರಣ’ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಕಿಚ್ಚ ಸುದೀಪ್ - CineNewsKannada.com

`ಅನಾವರಣ’ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಕಿಚ್ಚ ಸುದೀಪ್

“ಅನಾವರಣ” ಸಿನಿಮಾದ ಹಾಡುಗಳು ಈಗಾಗಲೇ ಭಾರೀ ಸದ್ದು ಮಾಡುತ್ತಿದ್ದು, ಇದೀಗ ಮೊದಲ ನೋಟ ಬಿಡುಗಡೆಯಾಗಿದೆ. ಪ್ರೀತಿ, ಕೊಲೆ ಕುಟುಂಬ, ಎಮೋಷನ್ ಜೊತೆಗೆ ಸಸ್ಪೆನ್ಸ್ ಅಂಶಗಳಿಂದ ಕೂಡಿರುವ ಚಿತ್ರದ ಟ್ರೇಲರ್ ನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿ ಶುಭಾಶಯ ಕೋರಿದ್ದಾರೆ.

ಕಿಚ್ಚ ಸುದೀಪ್ ಮಾತನಾಡಿ, ರಾಮಚಂದ್ರ, ಅದ್ವೈತ್ ಪ್ರಭಾಕರ್ ನಿರ್ಮಾಣ ಮಾಡಿರುವ, ಮೊದಲ ಬಾರಿಗೆ ಮಂಜು ಹರಿ ನಿರ್ದೇಶನ ಮಾಡಿರುವ, ಅರ್ಜುನ್ ಯೋಗಿ ನಟನೆಯ ಅನಾವರಣ ಸಿನಿಮಾದ ಟ್ರೇಲರ್ ನೋಡಿದೆ. ಅವರ ತಂಡಕ್ಕೆ ಅವರ ಪರಿಶ್ರಮಕ್ಕೆ ಒಳ್ಳೆದಾಗಲಿ. ಡಿಸೆಂಬರ್ 1ಕ್ಕೆ ಸಿನಿಮಾ ಬಿಡುಗಡೆಯಾಗ್ತಿದೆ. ಟ್ರೇಲರ್ ನೋಡ್ತಾ ಇರಬೇಕಾದ್ರೆ ಬಹಳ ಪರಿಚಯಸ್ಥರು ತುಂಬ ಜನ ಸಿನಿಮಾದಲ್ಲಿದ್ದಾರೆ. ಎಲ್ಲರಿಗೂ ಒಳ್ಳೆದಾಗಲಿ ಎಂದರು.

ಫ್ಯಾಮಿಲಿ ಡ್ರಾಮಾ ಜೊತೆಗೆ ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಅನಾವರಣ ಸಿನಿಮಾ ಡಿಸೆಂಬರ್ 1ಕ್ಕೆ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಹರೀಶ್ ಕುಮಾರ್ ಹಾಗೂ ಮಂಜುನಾಥ್ ಪಿಳ್ಳಪ್ಪ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

ರಂಗ ಕಲಾವಿದರು ನಿರ್ದೇಶಕರು ಆಗಿರುವ ಹರೀಶ್ ಕುಮಾರ್ ಹಾಗೂ ಮಂಜುನಾಥ್ ಪಿಳ್ಳಪ್ಪ ಇಬ್ಬರು ಅನಾವರಣ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ 40ಕ್ಕೂ ಹೆಚ್ಚು ಕಿರು ಚಿತ್ರಗಳನ್ನು ಮಾಡಿರುವ ಅನುಭವ ಈ ಇಬ್ಬರು ನಿರ್ದೇಶಕರಿಗಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin