ಕಿಚ್ಚ ಸುದೀಪ್‍ಗೆ ಆರ್ . ಚಂದ್ರು ನಿರ್ದೇಶನ : ವಿಜಯೇಂದ್ರ ಪ್ರಸಾದ್ ಸಾಥ್, ನಿರೀಕ್ಷೆ ಹೆಚ್ಚಳ

ಭಾರತೀಯ ಚಿತ್ರರಂಗದಲ್ಲಿ ಕೆಲವು ಸ್ಟಾರ್‍ಗಳು, ಸ್ಟಾರ್ ಮೇಕರ್‍ಗಳು, ಸ್ಟಾರ್ ಕಥೆಗಾರರು ಜೊತೆಯಾದರೆ ಸಾಕು ಚಿತ್ರದ ಬಗ್ಗೆ ನಿರೀಕ್ಷೆ, ಚಿತ್ರದಲ್ಲಿ ಏನೆಲ್ಲಾ ಇರಬಹುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮಿಲಿಯನ್ ಡಾಲರ್ ಪ್ರಶ್ನೆಯಾಗಿ ಕಡುತ್ತಿದೆ. ಅದಕ್ಕೆ ಪೂರಕ ಎನ್ನುವಂತೆ ಇದೀಗ ತ್ರಿವೇಣಿ ಸಂಗಮ , ನಿರೀಕ್ಷೆ ಗರಿಗೆದರುವಂತೆ ಮಾಡಿದೆ.

ಯಾರಿವರು ಅಂತೀರಾ. ಭಾರತೀಯ ಚಿತ್ರರಂಗದಲ್ಲಿ ಅನೇಕ ಬ್ಲಾಕ್ ಬಸ್ಟರ್ ಚಿತ್ರ ನೀಡಿರುವ ಕಥೆಗಾದ ವಿಜೇಯೇಂದ್ರ ಪ್ರಸಾದ್, ಕನ್ನಡ ನಾಡಿನ ಕೀರ್ತಿ ಪತಾಕೆಯನ್ನು ಭಾರತದಾಚೆ ಪಸರಿಸಿದ ಮೇರು ನಟ ಕಿಚ್ಚ ಸುದೀಪ್ ಹಾಗು ಕಬ್ಜ ಚಿತ್ರದ ಮೂಲಕ ಭಾರತೀಯ ಚಿತ್ರರಂಗವನ್ನು ಕನ್ನಡ ಚಿತ್ರರಂಗದತ್ತ ಸೆಳೆಯುವಂತೆ ಮಾಡಿದ ನಿರ್ದೇಶಕ, ನಿರ್ಮಾಪಕ ಆರ್. ಚಂದ್ರು ಜೊತೆಯಾಗಿ ಕೆಲಸ ಮಾಡುವತ್ತಿರುವ ಹೊಸ ಚಿತ್ರ ಪ್ರಕಟವಾಗಿದೆ.

ಪ್ಯಾನ್ ಇಂಡಿಯಾ ಸ್ಟಾರ್, ಸ್ಟೈಲಿಶ್ ಹೀರೋ, ಮಿ. ಪರ್ಫೆಕ್ಟ್ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಸಂಧರ್ಭದಲ್ಲಿ ಭಾರತೀಯ ಚಿತ್ರರಂಗದ ಪ್ರೇಕ್ಷಕರಿಗೆ ಸಿಹಿ ಸುದ್ದಿ ಹೊರಬಿದ್ದಿದೆ. ಈ ಚಿತ್ರದ ಮೂಲಕ ಆರ್ .ಚಂದ್ರು , ಆರ್ ಸಿ ಸ್ಟುಡಿಯೋ ಎನ್ನುವ ಹೊಸ ಬ್ಯಾನರ್ ಮೂಲಕ ಇಡೀ ಜಗತ್ತು ತಿರುಗಿ ನೋಡುವ ಸಿನಿಮಾ ಮಾಡಲು ಮುಂದಾಗಿದ್ದಾರೆ

ಮಗಧೀರ, ಬಾಹುಬಲಿ, ಆರ್ ಆರ್ ಆರ್ ದಂತಹ ಹಿಟ್ ಚಿತ್ರಗಳ ಕಥೆಗಾರ ವಿ .ವಿಜಯೇಂದ್ರ ಪ್ರಸಾದ್ , ಪ್ಯಾನ್ ಇಂಡಿಯಾ ಎಂಬ ಪರಿಕಲ್ಪನೆ ಹುಟ್ಟುಹಾಕಿದ ಎಸ್ ಎಸ್ ರಾಜಮೌಳಿಯ ಎಲ್ಲಾ ಚಿತ್ರಗಳಿಗೆ ಸ್ಕ್ರಿಪ್ಟ್ ರೈಟರ್ ಆದ ವಿಜಯೇಂದ್ರ ಪ್ರಸಾದ್ ಅವರು ಕನ್ನಡದ ಪ್ರತಿಷ್ಠಿತ ಆರ್ ಸಿ ಸ್ಟುಡಿಯೋಸ್ ಸಂಸ್ಥೆಯ ಚೊಚ್ಚಲ ಚಿತ್ರಕ್ಕೆ ಸ್ಕ್ರಿಪ್ಟ್ ಸೂಪರ್ ವೈಸ್ ಮಾಡಿದ್ದು, ಈ ಚಿತ್ರದಲ್ಲಿ ಪ್ಯಾನ್ ಇಂಡಿಯಾ ಸ್ಟಾರ್ ಕಿಚ್ಚ ಸುದೀಪ್ ಅವರು ನಟಿಸುತ್ತಿದ್ದು ಆರ್ ಚಂದ್ರು ಅವರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ.

ಈ ಮೂವರು ದಿಗ್ಗಜರು ಒಂದಾಗಿ ಮಾಡುತ್ತಿರುವ ಈ ಚಿತ್ರಕ್ಕೆ ಇಡೀ ಭಾರತವೇ ಕಾತುರದಿಂದ ಎದುರು ನೋಡುತ್ತಿದ್ದು, ಈ ವರ್ಷದ ಮೆಗಾ ಹಿಟ್ ಚಿತ್ರವಾಗಲಿದೆ.

5 ದೊಡ್ಡ ದೊಡ್ಡ ಚಿತ್ರಗಳಿಗೆ ಚಾಲನೆ:

ಆರ್ ಸಿ ಸ್ಟುಡಿಯೋಸ್ ಕರ್ನಾಟಕದ ಪ್ರತಿಷ್ಠಿತ ಸಂಸ್ಥೆಯಾಗಿದ್ದು, 5 ದೊಡ್ಡ ದೊಡ್ಡ ಚಿತ್ರಗಳಿಗೆ ಈ ವರ್ಷ ಚಾಲನೆ ದೊರೆಯಲಿದೆ. ಆರ್ ಚಂದ್ರು ಅವರು ಏನೇ ಮಾಡಿದರು ವಿಶೇಷವಾಗಿರಲಿದ್ದು ಈ ಚಿತ್ರವೂ ಕೂಡ ಹಲವು ವಿಶೇಷತೆಗಳಿಂದ ಕೂಡಿರಲಿದೆ. ಆ ವಿಶೇಷತೆಗಳಿಗೆ ಚಿತ್ರರಂಗ ಕಾಯುತ್ತಿದೆ.

ಆರ್ ಸಿ ಸ್ಟುಡಿಯೋಸ್ ಈ ಚಿತ್ರದ ಶೀರ್ಷಿಕೆ ಬಿಡುಗಡೆಗೊಳಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಕಿಚ್ಚನ ಹುಟ್ಟುಹಬ್ಬವಾದ ಇಂದು (ಸೆಪ್ಟೆಂಬರ್ 2 ) ಅಧಿಕೃತವಾಗಿ ಘೋಷಣೆ

ವಿಜಯೇಂದ್ರ ಪ್ರಸಾದ್ ಸ್ಕ್ರಿಪ್ಟ್ ಸೂಪರ್ ವೈಸಿಂಗ್, ಕಿಚ್ಚ ಸುದೀಪ್ ಅವರ ನಟನೆ ಮತ್ತು ಆರ್ ಚಂದ್ರು ಅವರ ನಿರ್ದೇಶನಕ್ಕೆ ಇಡೀ ಚಿತ್ರರಂಗವೇ ಕಾಯುತ್ತಿದ್ದು, ಭಾರತೀಯ ಚಿತ್ರರಂಗದ ಮೋಸ್ಟ್ ಎಕ್ಸ್ ಪೆಕ್ ಟೆಡ್ ಚಿತ್ರವಾಗಿದೆ.

ವಿಜಯೇಂದ್ರ ಪ್ರಸಾದ್ ಅವರು 25ಕ್ಕೂ ಹೆಚ್ಚು ಚಿತ್ರಗಳಿಗೆ ಕಥೆ ಬರೆದಿದ್ದು, ಎಲ್ಲಾ ಚಿತ್ರಗಳು ಕೂಡ ಕಮರ್ಷಿಯಲ್ ಸಕ್ಸಸ್ ಕಂಡಿವೆ. ಆಂಧ್ರದ ಪ್ರತಿಷ್ಠಿತ ನಂದಿ ಮತ್ತು ಫಿಲಂ ಫೇರ್ ಪ್ರಶಸ್ತಿಗೂ ಭಾಜನರಾಗಿದ್ದಾರೆ.

ಆರ್ ಸಿ ಸ್ಟುಡಿಯೋಸ್ ಸಂಸ್ಥೆಯು ಬಹುಕೋಟಿ ವೆಚ್ಚದಲ್ಲಿ ಈ ಚಿತ್ರಕ್ಕೆ ಬಂಡವಾಳ ಹೂಡಲಿದ್ದು, ಪ್ಯಾನ್ ಇಂಡಿಯಾ ಕಾನ್ಸೆಪ್ಟ್ ಮುರಿದು ಗ್ಲೋಬಲ್ ಮೂವಿ ಕಾನ್ಸೆಪ್ಟ್ ನೊಂದಿಗೆ ಇಂಡಿಯನ್ ಹ್ಯೂಜ್ ಬಜೆಟ್ ಚಿತ್ರವಾಗಲಿದೆ.

ಈ ಮೂಲಕ ಆರ್ ಸಿ ಸ್ಟುಡಿಯೋಸ್ ಸಂಸ್ಥೆ ಕೂಡ ಗ್ಲೋಬಲ್ ಸಂಸ್ಥೆಯಾಗಿ ಯುವ, ಪ್ರತಿಭಾವಂತ ಮತ್ತು ಉದಯೋನ್ಮುಖ ಅವಕಾಶ ಕಲ್ಪಿಸಲಾಗುತ್ತಿದೆ. ಈ ಮೂವರು ದಿಗ್ಗಜರ ಸಮಾಗಮವು ಮುಂದಿನ ಚಿತ್ರರಂಗದ ಬೆಳವಣಿಗೆಗೆ ಸಹಕಾರಿಯಾಗಲಿದೆ.ಕಿಚ್ಚನ ಹುಟ್ಟುಹಬ್ಬಕ್ಕೆ ಆರ್ ಸಿ ಸ್ಟುಡಿಯೋಸ್ ಸಿನಿಮಾ ನಿರ್ಮಾಣ ಮಾಡುತ್ತಿರುವುದು ಪಕ್ಕಾ ಆಗಿದೆ.

Related Posts

ಸತ್ಯ ಸನ್ ಆಫ್ ಹರಿಶ್ಚಂದ್ರ’ ಚಿತ್ರದ ಗಾ ಗರಗ’ ಹಾಡು ಬಿಡುಗಡೆ

ನಟ ನಿರೂಪ್ ಭಂಡಾರಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ಸತ್ಯ ಸನ್ ಆಫ್ ಹರಿಶ್ಚಂದ್ರ’ ಚಿತ್ರದ ಗಾ ಗರಗ’ ಭಾವನಾತ್ಮಕ ಹಾಗೂ ಅರ್ಥಪೂರ್ಣ ಗೀತೆ ಅಧಿಕೃತವಾಗಿ ಬಿಡುಗಡೆಯಾಗಿದೆ. ಸಂಗೀತ ನಿರ್ದೇಶಕ ಸಚಿನ್ ಬಸ್ರೂರ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಹಾಡಿಗೆ ಬಾಲಿವುಡ್‍ನ ಜನಪ್ರಿಯ ಗಾಯಕ…

57ನೇ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ಭಾರತೀಯ ಪನೋರಮಾಗೆ ತುಳು ಚಿತ್ರ `ಪಿಲಿ ಚನ್ನೆ’ ಆಯ್ಕೆ

`ನಡುಬೆಟ್ಟು ಅಪ್ಪಣ್ಣ’ ನಂತರ ಅನುಪಮ ಶರಧಿ ನಿರ್ದೇಶನದ ಎರಡನೇ ಚಿತ್ರಕ್ಕೆ ರಾಷ್ಟ್ರಮಟ್ಟದ ಗೌರವ ಒಂದೇ ಚಿತ್ರದಲ್ಲಿ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿದ ಬಹುಮುಖ ಪ್ರತಿಭೆ ಎನ್ನುವ ಹಿರಿಮೆಗೆ ಪಾತ್ರರಾಗಿದ್ಧಾರೆ ಭಾರತೀಯ ಚಿತ್ರರಂಗದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಒಂದಾದ 57ನೇ ಭಾರತೀಯ ಅಂತರಾಷ್ಟ್ರೀಯ ಚಿತ್ರೀತ್ಸೋತ್ಸ ಗೋವಾದಲ್ಲಿ…

Leave a Reply

Your email address will not be published. Required fields are marked *


Notice: ob_end_flush(): Failed to send buffer of zlib output compression (0) in /home/alydqcdn/public_html/wp-includes/functions.php on line 5581