ಕಿಚ್ಚ ಸುದೀಪ್ ಅಭಿಮಾನಿಯ ‘ಕುಡ್ಲ ನಮ್ದು ಊರು’ ಚಿತ್ರ ತೆರೆಗೆ ಬರಲು ಸಜ್ಜು
ಸಿನಿಮಾ ತಾರೆಯರು ಅನೇಕ ಮಂದಿಯ ಸ್ಪೂರ್ತಿಯ ಸೆಲೆಯಾಗಿದ್ದಾರೆ. ಅದರಲ್ಲಿ ಕಿಚ್ಚ ಸುದೀಪ್ ಕೂಡ ಒಬ್ಬರು. ಅವರ ಅಪ್ಪಟ ಅಭಿಮಾನಿ ದುರ್ಗಾಪ್ರಸಾದ್ (ಅಲೋಕ್) ಅಭಿನಯದ ‘’ಕುಡ್ಲ ನಮ್ದು ಊರು’ ಚಿತ್ರ ತೆರೆಗೆ ಬರಲು ಸಜ್ಜಾಗಿದೆ.

ಕುಡ್ಲ ಎಂದಾಕ್ಷಣೆ ತಳುನಾಡು ನೆನಪಿಗೆ ಬರುತ್ತೆ. ಈ ಕಾರಣಕ್ಕಾಗಿಯೇ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ‘ಕುಡ್ಲ ನಮ್ದು ಊರು’ ಚಿತ್ರೀಕರಣದ ಕೆಲಸ ಕಾರ್ಯಗಳನ್ನು ಮುಗಿಸಿ ಪೆÇೀಸ್ಟ್ ಪ್ರೊಡಕ್ಷನ್ಸ್ ಕೆಲಸಗಳಲ್ಲಿ ನಿರತವಾಗಿದೆ. ಈ ನಡುವೆ ಚಿತ್ರದ ಟ್ರೇಲರ್ ಮತ್ತು ಆಡಿಯೋ ಬಿಡುಗಡೆ ಆಗಿದ್ದು ಗಮನ ಸೆಳೆದಿದೆ.
‘ಕೃತಾರ್ಥ ಪ್ರೊಡಕ್ಷನ್ಸ್’ ಬ್ಯಾನರಿನಲ್ಲಿ ನಿರ್ಮಾಣವಾಗಿರುವ ‘ಕುಡ್ಲ ನಮ್ದು ಊರು’ ಚಿತ್ರವನ್ನು ಯುವ ಪ್ರತಿಭೆ ದುರ್ಗಾಪ್ರಸಾದ್ -ಅಲೋಕ್ ಮತ್ತು ಆರ್ಯ ಡಿ. ಕೆ ಜಂಟಿಯಾಗಿ ನಿರ್ದೇಶನ ಮಾಡಿದ್ದಾರೆ. ಜೊತೆಗೆ ದುರ್ಗಾಪ್ರಸಾದ್ ನಾಯಕನಾಗಿಯೂ ಅಭಿನಯಿಸಿದ್ದಾರೆ. ಹೊಸವರ್ಷದ ಆರಂಭದಲ್ಲಿ ಜನವರಿ ಅಥವಾ ಫೆಬ್ರವರಿ ತಿಂಗಳಿನಲ್ಲಿ ಸಿನೆಮಾವನ್ನು ಬಿಡುಗಡೆ ಮಾಡಿ ಪ್ರೇಕ್ಷಕರ ಮುಂದೆ ತರುವ ಯೋಜನೆಯಲ್ಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ದುರ್ಗಾಪ್ರಸಾದ್ ಚಿಕ್ಕವಯಸ್ಸಿನಿಂದಲೇ ಚಿತ್ರರಂಗದತ್ತ ಆಸಕ್ತಿ ಬೆಳೆಸಿಕೊಂಡ ಪ್ರತಿಭೆ. ಸಿನೆಮಾ ಮೇಕಿಂಗ್ ಬಗ್ಗೆ ಅವರಿಗಿದ್ದ ಕುತೂಹಲವೇ ಇಂದು ನಟ, ನಿರ್ಮಾಪಕ ಮತ್ತು ನಿರ್ದೇಶಕನನ್ನಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುವಂತೆ ಮಾಡಿದೆ.
ಕಿಚ್ಚನ ಅಪ್ಪಟ ಅಭಿಮಾನಿಯ ಸಾಹಸಗಾಥೆ
ನಟ ಕಿಚ್ಚ ಸುದೀಪ್ ಅವರ ಅಪ್ಪಟ ಅಭಿಮಾನಿ. ಬಾಲ್ಯದಿಂದಲೇ ಸುದೀಪ್ ಅವರ ಚಿತ್ರಗಳನ್ನು ನೋಡುತ್ತ ಅವರ ಬಗ್ಗೆ ಅಭಿಮಾನ ಬೆಳೆಸಿಕೊಂಡ ದುರ್ಗಾಪ್ರಸಾದ್, ಮನೆಯಲ್ಲಿ ತಮ್ಮ ತಾಯಿಯ ಜೊತೆ ಜಗಳ ಮಾಡಿಕೊಂಡು, ಕೋಪದಿಂದ ‘ಸುದೀಪ್ ಅವರ ಮನೆಯಲ್ಲಿ ಕಸ ಗುಡಿಸುವ ಕೆಲಸವಾದರೂ ಮಾಡುತ್ತೇನೆ’ ಎಂದು ಮಂಗಳೂರುದಿಂದ ಬಸ್ ಹತ್ತಿಕೊಂಡು ಬೆಂಗಳೂರಿಗೆ ಬಂದಿದ್ದರಂತೆ

ಆರಂಭದಲ್ಲಿ ಕಿಚ್ಚ ಸುದೀಪ್ ಅವರನ್ನು ನೋಡಬೇಕು, ಅವರ ಮನೆಯಲ್ಲಾದರೂ ಕೆಲಸ ಮಾಡಬೇಕು ಎಂಬ ಹಠದಿಂದ ಬೆಂಗಳೂರಿಗೆ ಬಂದಿದ್ದ ದುರ್ಗಾಪ್ರಸಾದ್ ಅವರಿಗೆ ಇಲ್ಲಿ ಆದ ಅನುಭವಗಳು, ಮಂಗಳೂರಿನತ್ತ ಮುಖ ಮಾಡುವಂತೆ ಮಾಡಿತ್ತು.
ಇಂಟಿರಿಯರ್ ಡಿಸೈನಿಂಗ್ ಕೆಲಸದ ನಡುವೆಯೇ ಸಿನೆಮಾ ಮೇಕಿಂಗ್ ಬಗ್ಗೆಯೂ ಸಾಕಷ್ಟು ತಿಳಿದುಕೊಂಡರು. ಅಂತಿಮವಾಗಿ ತಾನು ಕೂಡ ಒಂದು ಸಿನೆಮಾ ಮಾಡಬಲ್ಲೆ ಎಂಬ ವಿಶ್ವಾಸ ಬಂದ ನಂತರ ದುರ್ಗಾಪ್ರಸಾದ್ ತಾವೇ ಕಥೆ, ಚಿತ್ರಕಥೆ ಬರೆದು ನಟಿಸಿ, ನಿರ್ದೇಶಿಸುವ ‘ಕುಡ್ಲ ನಮ್ದು ಊರು’ ಎಂಬ ಕೈಗೆತ್ತಿಕೊಂಡಿದ್ದು ಬಿಡುಗಡೆ ಹಂತಕ್ಕೆ ತಂದಿದ್ದಾರೆ. ಇದು ಅಲ್ಲವೆ ಅವರ ಸಾಧನೆ

ಚಿತ್ರದಲ್ಲಿ ರಮೇಶ್, ಪ್ರಕಾಶ್ ತುಮ್ಮಿನಾಡು, ಸ್ವರಾಜ್ ಶೆಟ್ಟಿ, ಶ್ರೇಯಾ ಶೆಟ್ಟಿ, ಅನಿಕಾ ಶೆಟ್ಟಿ, ನಯನ ಸಾಲಿಯಾನ್, ನಿರೀಕ್ಷಾ ಶೆಟ್ಟಿ, ದಿಲೀಪ್ ಕಾರ್ಕಳ, ಪ್ರಜ್ವಲ್ ಮೊದಲಾದವರು ‘ಕುಡ್ಲ ನಮ್ದು ಊರು’ ಸಿನೆಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಚಿತ್ರದಲ್ಲಿ ಮೂರು ಹಾಡುಗಳಿದ್ದು,ನಿತಿನ್ ಶಿವರಾಮ್ ಸಂಗೀತ, ಶ್ರೀಶಾಸ್ತ ಹಿನ್ನೆಲೆ ಸಂಗೀತ, ಮಯೂರ್ ಆರ್. ಶೆಟ್ಟಿ ಛಾಯಾಗ್ರಹಣ, ನಿಶಿತ್ ಪೂಜಾರಿ ಸಂಕಲನವಿದೆ.ರಕ್ಷಿತ್ ಎಸ್. ಜೋಗಿ ನೃತ್ಯ ಮತ್ತು ಚಂದ್ರು ಬಂಡೆ ಸಾಹಸ ಸಂಯೋಜಿದ್ದಾರೆ.

