Komal Kamal in Vajramuni Look : “Yalakunni” releases on October 25

ವಜ್ರಮುನಿ ಲುಕ್ ನಲ್ಲಿ ಕೋಮಲ್ ಕಮಾಲ್ : “ಯಲಾಕುನ್ನಿ’ ಅಕ್ಟೋಬರ್ 25 ರಂದು ಬಿಡುಗಡೆ - CineNewsKannada.com

ವಜ್ರಮುನಿ ಲುಕ್ ನಲ್ಲಿ ಕೋಮಲ್ ಕಮಾಲ್ : “ಯಲಾಕುನ್ನಿ’ ಅಕ್ಟೋಬರ್ 25 ರಂದು ಬಿಡುಗಡೆ

ಕನ್ನಡದ ಪ್ರತಿಭಾನ್ವಿತ ನಟ ಕೋಮಲ್ ಕುಮಾರ್ ಮೊದಲ ಬಾರಿಗೆ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವ “ ಯಲಾಕುನ್ನಿ” ಇದೇ ಅಕ್ಟೋಬರ್ 25 ರಂದು ರಾಜ್ಯಾದ್ಯಂತ ತೆರೆಗೆ ಬರಲಿದೆ.

ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್, ಸಹನ ಮೂರ್ತಿ ರವರು ನಿರ್ಮಿಸಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನರ ಮನ ಗೆದ್ದಿರುವ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ ಹಾಗೂ ಹೊಸ ಪ್ರತಿಭೆ ಎನ್ ಆರ್ ಪ್ರದೀಪ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ

ಕೋಮಲ್ ಅವರು ಕನ್ನಡದ ಹೆಸರಾಂತ ನಟ ವಜ್ರಮುನಿ ಅವರ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ದೊಡ್ಡ ದೊಡ್ಡ ಕಲಾವಿದರ ದಂಡೆ ಈ ಚಿತ್ರದಲ್ಲಿದೆ.

ದತ್ತಣ್ಣ , ಸಾಧು ಕೋಕಿಲ , ಮಿತ್ರ, ಸುಚೇಂದ್ರ ಪ್ರಸಾದ್ , ಶಿವರಾಜ್ ಕೆ ಆರ್ ಪೇಟೆ , ತಬಲಾ ನಾಣಿ, ರಾಜು ತಾಳಿ ಕೋಟೆ, ಸುಮನ್ ನಗರ ಕರ್, ಮಾನಸಿ ಸುಧೀರ್(ಕಾಂತಾರ) , ಜಗ್ಗೇಶ್ ಅವರ ದ್ವಿತಿಯ ಪುತ್ರ ಯತಿರಾಜ್ ಜಗ್ಗೇಶ್, ಜಯಸಿಂಹ ಮುಸುರಿ , ರಘು ರಾಮನಕೊಪ್ಪ ,ಮಹಾಂತೇಶ್, ಬೌಬೌ ಜಯರಾಮ್ , ನಿರ್ದೇಶಕ ಸಹನ ಮೂರ್ತಿ , ಭಜರಂಗಿ ಪ್ರಸನ್ನ , ತಿಥಿ ತಮ್ಮಣ್ಣ, ಪ್ರದೀಪ್ ಪೂಜಾರಿ, ತೇಜಸ್, ಉಮೇಶ್ ಸಕ್ಕರೆ ನಾಡು ಮಂತಾದರವರ ತಾರಾಬಳಗವಿರುವ ಈ ಚಿತ್ರದ ನಾಯಕಿಯರಾಗಿ ನಿಸರ್ಗ ಅಪ್ಪಣ್ಣ ಮತ್ತು ಗಿಚ್ಚಿಗಿಲಿಯ ಅಮೃತಾ ಬಣ್ಣ ಹಚ್ಚಿದ್ದಾರೆ.

ವಿಶೇಷವಾಗಿ ವಜ್ರಮುನಿ ಯವರ ಮೊಮ್ಮೊಗ ಆಕರ್ಶ್ ಚಿತ್ರದ ಮೂಲಕ ಮೊದಲ ಬಾರಿಗೆ ಬಣ್ಣದ ಲೋಕ ಪ್ರವೇಶಿಸುತ್ತಿದ್ದಾರೆ. ಮಯೂರ್ ಪಟೇಲ್ ಅವರು ಖಳ ನಾಯಕನಾಗಿ ನಟಿಸಿದ್ದಾರೆ.

ಸಂಪೂರ್ಣ ಹಳ್ಳಿ ಸೊಗಡಿನಲ್ಲಿ ಮೂಡಿಬಂದಿರುವ `ಯಲಾಕುನ್ನಿ’ ಸಿನಿಮಾಕ್ಕೆ ರಥಾವರ ಖ್ಯಾತಿಯ ಧರ್ಮ ವಿಶ್ ಸಂಗೀತ ನಿರ್ದೇಶನ, ದೀಪು ಎಸ್ ಕುಮಾರ್ ಸಂಕಲನ ಹಾಗೂ ಹಾಲೇಶ್ ಭದ್ರಾವತಿ ಛಾಯಾಗ್ರಹಣವಿದೆ. ಮುರಳಿ ಮಾಸ್ಟರ್ ನೃತ್ಯ ಸಂಯೋಜನೆ ಮಾಡಿರುವ ಚಿತ್ರಕ್ಕೆ ನರಸಿಂಹ ಮಾಸ್ಟರ್ ಸಾಹಸ ಸಂಯೋಜನೆ ಮಾಡಿದ್ದಾರೆ. “ಯಲಾಕುನ್ನಿ” ಚಿತ್ರಕ್ಕೆ ‘ಮೇರಾ ನಾಮ್ ವಜ್ರಮುನಿ’ ಎಂಬ ಅಡಿಬರಹವಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin