“ಕೋಣ” ನಟ ಕೋಮಲ್ ಹೊಸ ಚಿತ್ರ: ಮೊದಲ ಪ್ಯಾನ್ ಇಂಡಿಯಾ ಸಿನಿಮಾ
ತಮ್ಮ ಸಹಜ ಅಭಿನಯದಿಂದ ಅಭಿಮಾನಿಗಳ ಮನ ಗೆದ್ದಿರುವ “ಕೋಮಲ್ ಕುಮಾರ್” ಅಭಿನಯದ “ಕೋಣ” ಚಿತ್ರದ ಶೀರ್ಷಿಕೆ ಹಾಗೂ ಪೋಸ್ಟರ್ ಇತ್ತಿಚೆಗೆ ಅನಾವರಣವಾಯಿತು. ಈ ಚಿತ್ರ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗಲಿದೆ.
ಡಾರ್ಕ್ ಕಾಮಿಡಿ ಜಾನರ್ ಇರುವ ಈ ಚಿತ್ರವನ್ನು ಈ ಹಿಂದೆ ಜಗ್ಗೇಶ್ ಅವರು ಅಭಿನಯಿಸಿದ್ದ “8 ಎಂ ಎಂ ಚಿತ್ರವನ್ನು ನಿರ್ದೇಶಿಸಿದ್ದ ಎಸ್ ಹರಿಕೃಷ್ಣ ನಿರ್ದೇಶಿಸುತ್ತಿದ್ದಾರೆ. ಇದೊಂದು ನೈಜ ಘಟನೆ ಆಧಾರಿತ ಚಿತ್ರವಾಗಿದೆ. ಕೋಮಲ್ ಕುಮಾರ್ ಅವರು ಈವರೆಗೂ ಅಭಿನಯಿಸಿರದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ನಿರ್ದೇಶಕ ಹರಿಕೃಷ್ಣ ಎಸ್ ಮಾತನಾಡಿ, ಕನ್ನಡದಲ್ಲಿ ಆನೆ, ನಾಯಿ, ಕೋತಿ ಮೊದಲಾದ ಪ್ರಾಣಿಗಳನ್ನು ಬಳಸಿಕೊಂಡು ಸಾಕಷ್ಟು ಬಂದಿದ್ದು ಈ ಚಿತ್ರದಲ್ಲಿ “ಕೋಣ”(ಪ್ರಾಣಿ) ಮುಖ್ಯ ಪಾತ್ರವಾಗಿರುವುದು ವಿಶೇಷವಾಗಿರಲಿದೆ. ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.
ತೇಜ್ವಿನ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ವಿನೋದ್ ಕುಮಾರ್ ಹಾಗೂ ಸೆಲ್ವನ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ, ವಿನೋದ್ ಕುಮಾರ್ ಬಿ ಛಾಯಾಗ್ರಹಣ ಹಾಗೂ ಉಮೇಶ್ ಆರ್ ಬಿ ಅವರ ಸಂಕಲನವಿರುವ ಈ ಚಿತ್ರಕ್ಕಿದೆ. ಸಂಜಯ್ ಹಾಗೂ ಉತ್ತಮ್ ಸ್ವರೂಪ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.