“ಲೇಡಿಸ್ ಬಾರ್” ಚಿತ್ರದ ಟೀಸರ್ ಮತ್ತು ಹಾಡುಗಳು ಬಿಡುಗಡೆ

ಡಿ.ಎಂ.ಸಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಟಿ.ಎಂ.ಸೋಮರಾಜು ನಿರ್ಮಿಸಿರುವ ಹಾಗೂ ಮುತ್ತು ಎ.ಎನ್ ನಿರ್ದೇಶಿಸಿರುವ “ಲೇಡಿಸ್ ಬಾರ್” ಚಿತ್ರದ ಟೀಸರ್ ಹಾಗೂ ಹಾಡುಗಳು ಇತ್ತೀಚಿಗೆ ಬಿಡುಗಡೆಯಾಯಿತು ರಾಜಕೀಯ ಮುಖಂಡ ಎಂ.ಡಿ.ಲಕ್ಷ್ಮೀನಾರಾಯಣ್ ಟೀಸರ್ ಬಿಡುಗಡೆ ಮಾಡಿದರು.

ಹಾಡುಗಳನ್ನು ನಟಿ ರೂಪಿಕಾ, ಮಮತ ಹಾಗೂ ನಿರ್ಮಾಪಕ ಶಿಲ್ಪ ಶ್ರೀನಿವಾಸ್ ಹಾಡುಗಳನ್ನು ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಸಿರಿ ಮ್ಯೂಸಿಕ್ ಮೂಲಕ ಹಾಡುಗಳು ಲೋಕಾರ್ಪಣೆಯಾಗಿದೆ.

ನಿರ್ದೇಶಕ ಎ.ಎನ್ ಮುತ್ತು “ಲೇಡಿಸ್ ಬಾರ್” ಶೀರ್ಷಿಕೆ ಕೇಳಿದ ತಕ್ಷಣ ಕುಡಿತದ ಬಗ್ಗೆ ಸಿನಿಮಾ ಅಂದುಕೊಳ್ಳುವುದು ಸಹಜ. ಆದರೆ ನಮ್ಮ ಚಿತ್ರದಲ್ಲಿ ಬರೀ ಕುಡಿತವಷ್ಟೇ ತೋರಿಸಿಲ್ಲ. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಪ್ರಯತ್ನ ಮಾಡಿದ್ದೇವೆ. ಚಿತ್ರ ನೋಡಿದಾಗ ಅದು ತಿಳಿಯುತ್ತದೆ. ಬೆಂಗಳೂರಿನಲ್ಲೇ ಹೆಚ್ಚಿನ ಚಿತ್ರೀಕರಣ ಮಾಡಿದ್ದೇವೆ‌. ಸದ್ಯದಲ್ಲೇ ಚಿತ್ರವನ್ನು ಸೆನ್ಸಾರ್ ಮಂಡಳಿ ವೀಕ್ಷಿಸಲಿದ್ದು, ಜನವರಿಯಲ್ಲಿ ತೆರೆಗೆ ತರುತ್ತೇವೆ ಎಂದು ತಿಳಿಸಿದರು.

ನಾನು ಉದ್ಯಮಿ ಜೊತೆಗೆ ರೈತ ಕೂಡ ಎಂದು ಮಾತನಾಡಿದ ಟಿ.ಎಂ.ಸೋಮರಾಜು, ಸಿನಿಮಾ ರಂಗ ಪರಿಚಯವೇ ಇಲ್ಲ. ನನ್ನ ಗೆಳೆಯ ರಾಜಶೇಖರ್ ನನ್ನನ್ನು ಈ ರಂಗಕ್ಕೆ ಕರೆದುಕೊಂಡು ಬಂದಿದ್ದಾರೆ. ನಿರ್ದೇಶಕ ಎ.ಎನ್ ಮುತ್ತು ಅವರು ಹೇಳಿದ ಕಥೆ ಇಷ್ಟವಾಯಿತು ನಿರ್ಮಾಣ ಮಾಡಿದ್ದೇನೆ. ಪ್ರಮುಖಪಾತ್ರದಲ್ಲೂ ನಟಿಸಿದ್ದೇನೆ. ನಮ್ಮ ಚಿತ್ರವನ್ನು ನೋಡಿ ಪ್ರೋತ್ಸಾಹ ನೀಡಿ ಎಂದರು.

ಸಹ ನಿರ್ಮಾಪಕ ರಾಜಶೇಖರ್ ಚಿತ್ರ ಸಾಗಿ ಬಂದ ಬಗ್ಗೆ ಮಾಹಿತಿ ನೀಡಿದರು. ಸಂಗೀತ ನಿರ್ದೇಶಕ ಹರ್ಷ ಕಾಗೋಡ್, ಛಾಯಾಗ್ರಾಹಕ ವೀನಸ್ ಮೂರ್ತಿ, ಸಾಹಸ ನಿರ್ದೇಶಕ ಜಗ್ಗು ಮಾಸ್ಟರ್ ಹಾಗೂ ಚಿತ್ರದಲ್ಲಿ ನಟಿಸಿರುವ ಹರೀಶ್ ರಾಜ್, ಶಿವಾನಿ, ಮಾಧುರಿ, ಗಣೇಶ್ ರಾವ್, ಆರಾಧ್ಯ , ನಟಿ ಮೀನಾಕ್ಷಿ ಅನುರಾಧ ಮುಂತಾದವರು “ಲೇಡಿಸ್ ಬಾರ್” ಬಗ್ಗೆ ಮಾತನಾಡಿದರು..

ಚಿತ್ರದ ಸಿರಿ ಮ್ಯೂಸಿಕ್ ನಲ್ಲಿ ಹಾಡುಗಳನ್ನು ನೋಡಿ, ನಿಮಗನಿಸಿದನ್ನು ಕಾಮೆಂಟ್ ಮಾಡಿ. ಉತ್ತಮ ಕಾಮೆಂಟ್ ಗೆ ನಿರ್ಮಾಪಕರು ಮೊಬೈಲ್‌ ನೀಡಲಿದ್ದಾರೆ ಎಂದು ಸಿರಿ ಮ್ಯೂಸಿಕ್ ಚಿಕ್ಕಣ್ಣ ತಿಳಿಸಿದರು.

Related Posts

ಸತ್ಯ ಸನ್ ಆಫ್ ಹರಿಶ್ಚಂದ್ರ’ ಚಿತ್ರದ ಗಾ ಗರಗ’ ಹಾಡು ಬಿಡುಗಡೆ

ನಟ ನಿರೂಪ್ ಭಂಡಾರಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ಸತ್ಯ ಸನ್ ಆಫ್ ಹರಿಶ್ಚಂದ್ರ’ ಚಿತ್ರದ ಗಾ ಗರಗ’ ಭಾವನಾತ್ಮಕ ಹಾಗೂ ಅರ್ಥಪೂರ್ಣ ಗೀತೆ ಅಧಿಕೃತವಾಗಿ ಬಿಡುಗಡೆಯಾಗಿದೆ. ಸಂಗೀತ ನಿರ್ದೇಶಕ ಸಚಿನ್ ಬಸ್ರೂರ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಹಾಡಿಗೆ ಬಾಲಿವುಡ್‍ನ ಜನಪ್ರಿಯ ಗಾಯಕ…

57ನೇ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ಭಾರತೀಯ ಪನೋರಮಾಗೆ ತುಳು ಚಿತ್ರ `ಪಿಲಿ ಚನ್ನೆ’ ಆಯ್ಕೆ

`ನಡುಬೆಟ್ಟು ಅಪ್ಪಣ್ಣ’ ನಂತರ ಅನುಪಮ ಶರಧಿ ನಿರ್ದೇಶನದ ಎರಡನೇ ಚಿತ್ರಕ್ಕೆ ರಾಷ್ಟ್ರಮಟ್ಟದ ಗೌರವ ಒಂದೇ ಚಿತ್ರದಲ್ಲಿ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿದ ಬಹುಮುಖ ಪ್ರತಿಭೆ ಎನ್ನುವ ಹಿರಿಮೆಗೆ ಪಾತ್ರರಾಗಿದ್ಧಾರೆ ಭಾರತೀಯ ಚಿತ್ರರಂಗದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಒಂದಾದ 57ನೇ ಭಾರತೀಯ ಅಂತರಾಷ್ಟ್ರೀಯ ಚಿತ್ರೀತ್ಸೋತ್ಸ ಗೋವಾದಲ್ಲಿ…

Leave a Reply

Your email address will not be published. Required fields are marked *


Notice: ob_end_flush(): Failed to send buffer of zlib output compression (0) in /home/alydqcdn/public_html/wp-includes/functions.php on line 5581