Lady Superstar Nayanthara in the movie "Toxic": First look released

“ಟಾಕ್ಸಿಕ್” ಚಿತ್ರದಲ್ಲಿ ಲೇಡಿ ಸೂಪರ್ ಸ್ಡಾರ್ ನಯನತಾರ : ಫಸ್ಟ್ ಲುಕ್ ಬಿಡುಗಡೆ - CineNewsKannada.com

“ಟಾಕ್ಸಿಕ್” ಚಿತ್ರದಲ್ಲಿ ಲೇಡಿ ಸೂಪರ್ ಸ್ಡಾರ್ ನಯನತಾರ : ಫಸ್ಟ್ ಲುಕ್ ಬಿಡುಗಡೆ

ರಿಯಲ್ ಸ್ಟಾರ್ ಉಪೇಂದ್ರ ನಟನೆಯ ” ಸೂಪರ್ ” ಚಿತ್ರದಲ್ಲಿ ನಟಿಸಿದ್ದ ದಕ್ಷಿಣ ಭಾರತದ ಖ್ಯಾತ ನಟಿ, ಲೇಡಿ ಸೂಪರ್ ಸ್ಟಾರ್ ನಯನತಾರ ಇದೀಗ ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಗಂಗಾ ಪಾತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಿದ್ದು ಅವರ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದು ಕುತೂಹಲ ಕೆರಳಿಸಿದೆ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಮಾರ್ಚ್ 19ರಂದು ತೆರೆಗೆ ಬರಲು ಸಜ್ಜಾಗುತ್ತಿದ್ದು, ಚಿತ್ರದ ಮೇಲಿನ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಚಿತ್ರದ ಒಂದೊಂದೇ ಪಾತ್ರಗಳನ್ನು ಪರಿಚಯಿಸುತ್ತಿರುವ ಚಿತ್ರತಂಡ, ಇದೀಗ ನಟಿ ನಯನತಾರಾ ಅವರ ‘ಗಂಗಾ’ ಪಾತ್ರ ಪರಿಚಯ ಮಾಡಿದೆ

ಗಂಗಾ ಪಾತ್ರ ಟಾಕ್ಸಿಕ್‌ ಸಿನಿಮಾದಲ್ಲಿನ ಪ್ರಬಲ ಪಾತ್ರ ಎಂದು ಹೇಳಲಾಗಿದೆ. ಬಹುಮುಖ ಪ್ರತಿಭೆಯಿಂದಾಗಿ ಭಾರತದ ಸ್ಟಾರ್‌ ನಟಿಯರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವ ನಯನತಾರಾ ಅವರು ‘ಟಾಕ್ಸಿಕ್’ ಮೂಲಕ ಕನ್ನಡಕ್ಕೆ ಮರಳಿದ್ದಾರೆ. ಈ ಹಿಂದೆ ಉಪೇಂದ್ರ ಅವರ ಸೂಪರ್‌ ಸಿನಿಮಾದಲ್ಲಿ ನಯನತಾರಾ ಕಾಣಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ಕನ್ನಡ ಚಿತ್ರಕ್ಕೆ ಬಂದಿದ್ದಾರೆ.

ಟಾಕ್ಸಿಕ್‌ ಸಿನಿಮಾದಲ್ಲಿನ ಅವರ ಪಾತ್ರ ಪ್ರೇಕ್ಷಕರಿಗೆ ಸಂಪೂರ್ಣವಾಗಿ ಹೊಸ ನಯನತಾರಾ ಅವರನ್ನು ಪರಿಚಯ ಮಾಡಿಸಲಿದೆಯಂತೆ. ಗಂಗಾ ಪಾತ್ರದಲ್ಲಿ ನಯನತಾರಾ ಅವರ ರೂಪವು ಕಣ್ಮನ ಸೆಳೆಯುವಂತಿದೆ. ಜೊತೆಗೆ ಅವರ ಭಯರಹಿತ ವ್ಯಕ್ತಿತ್ವ ಈ ಫಸ್ಟ್‌ಲುಕ್‌ನಲ್ಲಿ ಎದ್ದು ಕಾಣುತ್ತಿದೆ. ಕೈಯಲ್ಲಿ ಗನ್ ಹಿಡಿದು ನೀಡಿರುವ ಪೋಸ್ ಆಕರ್ಷಕವಾಗಿದೆ.

ನಯನತಾರಾ ಕಳೆದ ಎರಡು ದಶಕಗಳಿಂದ ಅದ್ಭುತ ವೃತ್ತಿಜೀವನ ಹೊಂದಿರುವ ಪ್ರಖ್ಯಾತ ತಾರೆ. ಆದರೆ ಪ್ರೇಕ್ಷಕರು ನೋಡಲು ಕಾಯುತ್ತಿದ್ದ ಅವರೊಳಗಿನ ಒಂದು ವಿಶೇಷ ಪ್ರತಿಭೆಯನ್ನು ‘ಟಾಕ್ಸಿಕ್’ನಲ್ಲಿ ಕಾಣಲಿದ್ದಾರೆ. ನಯನತಾರಾ ಅವರನ್ನು ಹಿಂದೆಂದೂ ತೋರಿಸದ ರೀತಿಯಲ್ಲಿ ತೆರೆಯ ಮೇಲೆ ತರಬೇಕೆಂಬುದು ನನ್ನ ಆಸೆಯಾಗಿತ್ತು. ಚಿತ್ರೀಕರಣ ಸಾಗುತ್ತಿದ್ದಂತೆ, ಅವರ ಸ್ವಂತ ವ್ಯಕ್ತಿತ್ವವು ಪಾತ್ರದ ಆತ್ಮಕ್ಕೆ ಎಷ್ಟು ಹತ್ತಿರವಾಗಿದೆ ಎಂಬುದು ನನಗೆ ಅರಿವಾಯಿತು” ಎಂದು ನಿರ್ದೇಶಕಿ ಗೀತು ಮೋಹನ್ ದಾಸ್ ಹೇಳಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin