“ಲಂಗೋಟಿ” ಗೂ ಬಂತೂ ನಾಯಕನಾಗುವ ಅದೃಷ್ಠ
“ಲಂಗೋಟಿ” ಕಥಾವಸ್ತುವನ್ನಾಗಿರಿಸಿಕೊಂಡು ಚಿತ್ರ ಮಾಡಿದ ಉದಾಹರಣೆ ಕಡಿಮೆ. ಇದೀಗ ಲಂಗೋಟಿಯನ್ನು ನಾಯಕನ್ನಾಗಿಸಿಕೊಂಡು ನಿರ್ದೇಶಕಿ ಸಂಜೋತ ಭಂಡಾರಿ ಆಕ್ಷನ್ ಕಟ್ ಹೇಳಿರುವ “ ಲಂಗೋಟಿ ಮ್ಯಾನ್” ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ನಟ ಶರಣ್ ಸಾಥ್ ನೀಡಿ ಶುಭ ಹಾರೈಸಿದ್ದಾರೆ.
ಟೀಸರ್ ಬಿಡುಗಡೆ ಮಾಡಿ ಮಾತನಾಡಿದ ನಟ ಶರಣ್, ಈಗಂತೂ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನೇ ಜನ ಹೆಚ್ಚು ಇಷ್ಟಪಡುತ್ತಿದ್ದಾರೆ. ಆ ಸಾಲಿಗೆ ಲಂಗೋಟಿ ಮ್ಯಾನ್ ಸೇರಲಿ. ಚಿತ್ರದ ಮೇಲಿರುವ ಭರವಸೆ ಹಾಗೂ ತಾವೊಬ್ಬರೆ ಕ್ರೆಡಿಟ್ ತೆಗೆದುಕೊಳ್ಳದೆ, ಚಿತ್ರತಂಡದ ಪ್ರತಿಯೊಬ್ಬರನ್ನು ಪರಿಚಯಿಸಿದ ರೀತಿ ಕಂಡು ಸಂತೋಷವಾಯಿತು. ತಂಡಕ್ಕೆ ಒಳ್ಳೆಯದಾಗಲಿ ಎಂದು ಹಾರೈಸಿದರು
ನಿರ್ದೇಶಕಿ ಸಂಜೋತ ಭಂಡಾರಿ, ಹತ್ತು ವರ್ಷಗಳ ಹಿಂದೆ “ಮಿರ್ಚಿ ಮಂಡಕ್ಕಿ ಖಡಕ್ ಚಾಯ್” ಚಿತ್ರ ನಿರ್ದೇಶಿಸಿದ್ದೆ. ಇದು ಎರಡನೇ ಚಿತ್ರ. ಬೇರೆ ಚಿತ್ರದ ಕಥೆ ಮಾಡುತ್ತಿದ್ದಾಗ ಈ ಕಾನ್ಸೆಪ್ಟ್ ಬಂತು. ಆಚಿತ್ರದ ಕಥೆ ಮಾಡುತ್ತಿದ್ದಾಗಲೂ ನನಗೆ ಇದೇ ಕಥೆ ತಲೆಗೆ ಬರುತ್ತಿತ್ತು. ಕೊನೆಗೆ “ಲಂಗೋಟಿ ಮ್ಯಾನ್” ಸಿನಿಮಾ ಸ್ವರೂಪ ಪಡೆದುಕೊಂಡಿತು. ಈ ಚಿತ್ರದಲ್ಲಿ ನಿಜವಾದ ಹೀರೋ ಅಂದರೆ “ಲಂಗೋಟಿ” ಎಂದರು.
ಆಕಾಶ್, ರಾಂಬೊ, ಧೀರೇಂದ್ರ, ಮಹಾಲಕ್ಷ್ಮಿ, ಹುಲಿ ಕಾರ್ತಿಕ್, ಸಂಹಿತ ವಿನ್ಯ, ಗಿಲ್ಲಿ ನಟ, ಸ್ನೇಹ ಋಷಿ, ಪವನ್, ಆಟೋ ನಾಗರಾಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಕಥೆ ಹಾಗೂ ಸಂಭಾಷಣೆಯಲ್ಲೂ ಅನೇಕ ಮಿತ್ರರು ಸಹಾಯ ಮಾಡಿದ್ದಾರೆ. ಚಿತ್ರ ಗೆಲುವ ವಿಶ್ವಾಸವಿದೆ ಎಂದರು.
ಕನ್ನಡದ ಪ್ರತಿಭಾನ್ವಿತ ನಟಿಯರಲ್ಲಿ ಒಬ್ಬರಾಗಿರುವ ಸಂಹಿತಾ ವಿನ್ಯಾ ಮಾತನಾಡಿ ಚಿತ್ರದಲ್ಲಿ ಒಳ್ಳೆಯ ಪಾತ್ರ ಸಿಕ್ಕಿದೆ. ಕಥೆ ಚೆನ್ನಾಗಿದೆ. ಈ ಚಿತ್ರದ ಮೂಲಕ ಉತ್ತಮ ಅವಕಾಶ ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಚಿತ್ರದಲ್ಲಿ ನಟಿಸಿರುವ ಆಕಾಶ್ ರಾಂಬೊ, ಧೀರೇಂದ್ರ ಮತ್ತಿತರರು ಮಾತನಾಡಿದರು