ಗೆಲುವಿನ ಸಂಭ್ರಮದಲಿ “ಲವ್ ಮಾಕ್ಟೇಲ್-3” : ಡಾರ್ಲಿಂಗ್ ಕೃಷ್ಣ ದಂಪತಿ ಮುಖದಲ್ಲಿ ಮಂದಹಾಸ
ಡಾರ್ಲಿಂಗ್ ಕೃಷ್ಣ ನಿರ್ದೇಶನ ಮಾಡಿ, ನಾಯಕನಾಗಿ ನಟಿರುವ “ಲವ್ ಮಾಕ್ಟೇಲ್-3” ಚಿತ್ರ ಬಿಡುಗಡೆಯಾಗಿ ರಾಜ್ಯಾದ್ಯಂತ ಯಶಸ್ವೀ ಪ್ರದರ್ಶನ ಕಾಣುತ್ತಿದೆ.ಇದು ಸಹಜವಾಗಿ ನಟ, ನಿರ್ದೇಶಕ ಡಾರ್ಲಿಂಗ್ ಕೃಷ್ಣ- ಮಿಲನಾ ನಾಗರಾಜ್ ದಂಪತಿ ಮುಖದಲ್ಲಿ ಗೆಲುವಿನ ಮಂದಹಾಸ ಮೂಡಿಸಿದೆ

ಡಾರ್ಲಿಂಗ್ ಕೃಷ್ಣ ಮಾತನಾಡಿ ‘ ತುಂಬಾ ಲೆಕ್ಕಾಚಾರವಿಟ್ಟುಕೊಂಡೇ ಮುಂದುವರೆಯುತ್ತೇವೆ. ಯಾವುದೇ ಮುಲಾಜಿಗೆ ಬಿದ್ದು ಯಾರನ್ನೂ ಆಯ್ಕೆ ಮಾಡಿಕೊಳ್ಳುವುದಿಲ್ಲ. £ ತಂಡದಲ್ಲಿರುವವರೆಲ್ಲರೂ ಪಕ್ಕಾ ಪ್ರತಿಭಾವಂತರಾಗಿರುವುದರಿಂದಲೇ ಅವಕಾಶ ಪಡೆದುಕೊಂಡಿದ್ದಾರಷ್ಟೆ. ಅವರ ಪ್ರತಿಭೆಯನ್ನು ನಾವು ಬಳಸಿಕೊಂಡಿದ್ದೇವೆ. ಆದ್ದರಿಂದ ಸಿನಿಮಾ ತಂಡದವರ್ಯಾರೂ ನಮಗೆ ಥ್ಯಾಂಕ್ಸ್ ಹೇಳುವ ಹಾಗಿಲ್ಲ’ ಎನ್ನುತ್ತಲೇ ಮುಂದಿನ ದಿನಗಳ್ಲ್ಲಿ ಕ್ರಿಸ್‍ಮೀ ಬ್ಯಾನರಿನಡಿಯಲ್ಲಿ ವರ್ಷಕ್ಕೊಂದು ಸಿನಿಮಾ ಮಾಡುವ ಯೋಜನೆಯಿದೆ ಎಂದರು
ನಟಿ ಮಿಲನಾ ನಾಗರಾಜ್ ಮಾತನಾಡಿ ಪಾರ್ಟ್1 ಹಾಗೂ ಎರಡು ಗೆದ್ದಾಗ ಖುಷಿಯಾಗಿತ್ತು. ಆದರೆ ಮೂರನೇ ಆವೃತ್ತಿಯ ಗೆಲುವು ನನ್ನನ್ನು ಭಾವುಕಳನ್ನಾಗಿಸಿದೆ. ಇದಕ್ಕೆ ಪ್ರೇಕ್ಷಕರ ಕಡೆಯಿಂದ ಬರುತ್ತಿರುವ ಪ್ರತಿಕ್ರಿಯೆಗಳಿಂದ ಮನದುಂಬಿ ಬಂದಿದೆ’ ಎಂದರು.
ಕೆವಿಎನ್ ಪೆÇ್ರಡಕ್ಷನ್ಸ್ ಸಂಸ್ಥೆಯ ಸುಪ್ರೀತ್ ಮಾತನಾಡಿ ವರ್ಷದ ಮೊದಲ ಹಿಟ್ ಚಿತ್ರ. ಡಾರ್ಲಿಂಗ್ ಕೃಷ್ಣ ಬಿಡುಗಡೆಗೂ ಒಂದಷ್ಟು ದಿನಗಳ ಮುಂದೆ ಸಿನಿಮಾ ತೋರಿಸಿದ್ದರು. ಅದಾದ ಬಳಿಕ ಟಾಕ್ಸಿಕ್‍ನಿಂದ ತೆರವಾದ ಜಾಗಕ್ಕೆ ಲವ್ ಮಾಕ್ಟೇಲ್ ಆಗಮಿಸಿತ್ತು. ಪ್ರೇಕ್ಷಕರೆಲ್ಲ ಅತ್ಯುತ್ತಮ ಪ್ರತಿಕ್ರಿಯೆ ನೀಡುವ ಮೂಲಕ ಲವ್ ಮಾಕ್ಟೇಲ್ 3 ಗೆದ್ದಿದೆ. ಅಮೇರಿಕಾ, ಆಸ್ಟ್ರೇಲಿಯಾ, ಜರ್ಮನಿ ಮುಂತಾದೆಡೆಗಳಲ್ಲಿಯೂ ಭರ್ಜರಿಯಾಗಿಯೇ ಬುಕ್ಕಿಂಗ್ ಓಪನ್ ಆಗಿದೆ’ ಎಂದರು

ನಿರ್ದೇಶಕ ಶಶಾಂಕ್ ಮಾತನಾಡಿ `ಈ ಕಾಲಮಾನದಲ್ಲಿ ಯಾವುದೇ ಸಿನಿಮಾದ ಸಕ್ಸಸ್ ಮೀಟ್ ಎಂಬ ವಿಚಾರವೇ ಹಿತವೆನ್ನಿಸುತ್ತೆ. ಈ ವರ್ಷದ ಆರಂಭದಿಂದ ಒಂದು ರೀತಿಯ ನಿರಾಶದಾಯಕ ವಾತಾವರಣ ಕನ್ನಡ ಚಿತ್ರರಂಗವನ್ನು ಆವರಿಸಿಕೊಂಡಿತ್ತು. ಇಂಥಾ ಹೊತ್ತಿನಲ್ಲಿ ಲವ್ ಮಾಕ್ಟೇಲ್ ಗೆದ್ದಿರುವುದರಿಂದ ಚಿತ್ರರಂಗಕ್ಕೆ ಹೊಸಾ ಚೈತನ್ಯ ಬಂದಂತಾಗಿದೆ. ಎಂದು ಹೇಳಿದರು
ನಾಯಕಿಯರಾದ ರೆಚೆಲ್ ಡೇವಿಡ್, ಅಮೃತಾ ಅಯ್ಯಂಗಾರ್, ಜಗ ಮಮ್ಮಿ ಎಂದೇ ಖ್ಯಾತರಾದ ಜಗದೀಶ್, ಡಾರ್ಲಿಂಗ್ ಕೃಷ್ಣ ಅವರ ತಂದೆ ನಾಗಪ್ಪ, ಛಾಯಾಗ್ರಾಹಕ ಹಾಗೂ ಸಂಕಲನಕಾರರಾದ ಶ್ರೀ ಕ್ರೇಜಿಮೈಂಡ್ಸ್ ಮುಂತಾದವರು ತನ್ನ ಲವ್ ಮಾಕ್ಟೇಲ್ ಗೆಲುವಿನ ಖುಷಿ ಹಂಚಿಕೊಂಡರು.

