Lovelistar in mass avatar : Prem to see rebranding

ಮಾಸ್ ಅವತಾರದಲ್ಲಿ ಲವ್ಲಿಸ್ಟಾರ್ : ರೀಬ್ರಾಂಡಿಂಗ್ ಕಾಣಲಿರುವ ಪ್ರೇಮ್ - CineNewsKannada.com

ಮಾಸ್ ಅವತಾರದಲ್ಲಿ ಲವ್ಲಿಸ್ಟಾರ್ : ರೀಬ್ರಾಂಡಿಂಗ್ ಕಾಣಲಿರುವ ಪ್ರೇಮ್

ಅಪ್ಪ ಐ ಲವ್ ಯೂ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬಂದಿದ್ದ ಲವ್ಲಿ ಸ್ಟಾರ್ ಪ್ರೇಮ್ ಈಗ ಮತ್ತೊಂದು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಬಾರಿ ಅವರು ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿಲ್ಲ. ಬದಲಾಗಿ ರಗಡ್ ಅವತಾರ ತಾಳಿದ್ದಾರೆ.

ನಟ ನೆನಪಿರಲಿ ಪ್ರೇಮ್ ಹುಟ್ಟುಹಬ್ಬದ ಸ್ಪೆಷಲ್ ಆಗಿ ಹೊಸ ಸಿನಿಮಾದ ಮುಹೂರ್ತ ನೆರವೇರಿದೆ. ಬೆಂಗಳೂರಿನ ಬಂಡಿ ಮಹಾಕಾಳಿ ದೇಗುಲದಲ್ಲಿ ಮುಹೂರ್ತ ನೆರವೇರಿದ್ದು, ಇಡೀ ಚಿತ್ರತಂಡ ಭಾಗಿಯಾಗಿ ತಾಯಿಯ ಆಶೀರ್ವಾದ ಪಡೆದುಕೊಂಡರು.

ಈ ವೇಳೆ ಮಾತಿಗಿಳಿದ ನೆನಪಿರಲಿ ಪ್ರೇಮ್ ಮಾತನಾಡಿ, ಹುಟ್ಟಿದ ದಿನ.ಮುಹೂರ್ತ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿತ್ತು. 2.0 ರೀಬ್ರ್ಯಾಂಡಿಂಗ್ ಅಂತಾ ನನ್ನ ಸ್ನೇಹಿತರು ಕೇಳಿದರು. ಈ ಮೊದಲು ಆಕ್ಷನ್ ಸಿನಿಮಾ ಮಾಡಿದ್ದೆವು. ಆದರೆ ಬಹಳಷ್ಟು ಗ್ಯಾಪ್ ಆಗಿತ್ತು. ಲವ್ ಬ್ರ್ಯಾಂಡ್ ಆಗಿದ್ದರಿಂದ ಈಗ ಒಂದೊಳ್ಳೆ ಕಥೆಯೊಂದಿಗೆ ನಿರ್ದೇಶಕರು ಬಂದರು. ಹೀಗಾಗಿ ಈ ಚಿತ್ರ ಒಪ್ಪಿಕೊಂಡೆ.

ಸಿನಿಮಾದಲ್ಲಿ ಖಡಕ್ ಪೋಲಿಸ್ ಅಧಿಕಾರಿ ಪಾತ್ರ ನಿರ್ವಹಿಸುತ್ತಿದ್ದೇನೆ. ಸ್ಕ್ರೀಪ್ಟ್ ರೆಡಿಯಾಗ್ತಿದೆ. ಕ್ಲೈಮ್ಯಾಕ್ಸ್ ಚರ್ಚೆ ಹಂತದಲ್ಲಿದೆ. ಪೂರ್ಣ ಪ್ರಮಾಣದಲ್ಲಿ ಸ್ಟಾರ್ ಕಾಸ್ಟ್ ಡಿಸೈಡ್ ಆಗಿಲ್ಲ. ಮುಂದಿನ ದಿನಗಳಲ್ಲಿ ಮುಹೂರ್ತ ಮಾಡಬೇಕು ಎಂದುಕೊಂಡಿದ್ದೇವು. ಆದರೆ ನಿಮ್ಮ ಬರ್ತ್ ಡೇ ಒಳ್ಳೆ ಸಂದರ್ಭ ಸರ್ ಅಂತಾ ನಿರ್ದೇಶಕರು ಹೇಳಿದ್ದರು. ಹೀಗಾಗಿ ಈ ದಿನ ಮುಹೂರ್ತ ಮಾಡಿದ್ದೇವೆ ಎಂದರು.

ನಿರ್ದೇಶಕ ತೇಜೇಶ್ ಮಾತನಾಡಿ, ಇದು ನನ್ನ ಮೊದಲ ಸಿನಿಮಾ. ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ಇದಾಗಿದೆ. ಟೈಟಲ್ ಚರ್ಚೆಯಲ್ಲಿದೆ. ಕಥೆಗೆ ಪ್ರೇಮ್ ಸರ್ ಸೂಟ್ ಆಗಿರುವುದರಿಂದ ಅವರನ್ನು ಆಯ್ಕೆ ಮಾಡಿದ್ದೇವೆ. ರಂಗಾಯಣ ರಘು ಸರ್ ಚಿತ್ರದ ಭಾಗವಾಗಿದ್ದಾರೆ. ಈ ತಿಂಗಳಾತ್ಯಂಕ್ಕೆ ಶೂಟಿಂಗ್ ಗೆ ಹೊರಡಲಿದ್ದೇವೆ ಎಂದು ಮಾಹಿತಿ ನೀಡಿದರು.

ನೆನಪಿರಲಿ ಪ್ರೇಮ್ ಮತ್ತೆ ಪೋಲಿಸ್ ಪಾತ್ರ ಮಾಡಿದ್ದಾರೆ. 11 ವರ್ಷದ ಹಿಂದೆ ಪೋಲಿಸ್ ರೋಲ್ ಮಾಡಿದ್ದರು. ಶತ್ರು ಅನ್ನೋ ಈ ಚಿತ್ರದಲ್ಲಿ ಪೋಲಿಸ್ ಖದರ್ ನಲ್ಲಿ ಪವರ್ ತೋರಿಸಿದ್ದರು. ಆದರೆ ಪ್ರೇಮ್ ಈ ಸಲ ಬೇರೆ ರೀತಿಯ ಪೋಲಿಸ್ ಪಾತ್ರ ಮಾಡಿದ್ದಾರೆ. ರಫ್ ಆಂಡ್ ಟಫ್ ಅಲ್ಲದೇ, ರಗಡ್ ಲುಕ್ ಇರೋ ಪೋಲಿಸ್ ರೀತಿನೂ ಕಾಣಿಸುತ್ತಿದ್ದಾರೆ. ಕೈಯಲ್ಲಿ ಸಿಂಗಲ್ ಬ್ಯಾರಲ್ ಗನ್ ಕೂಡ ಇದೆ. ಅದನ್ನ ಸ್ಟೈಲ್ ಆಗಿಯೂ ಪ್ರೇಮ್ ಹಿಡಿದು ಕೊಂಡು, ದೊಂಬಿ ಮಾಡೋರ ಕಡೆಗೆ ಮುಖ ಮಾಡಿ ನಿಂತಿದ್ದಾರೆ.

ಯುವ ಪ್ರತಿಭೆ ತೇಜಸ್ ಬಿ.ಕೆ ಕಥೆ ಚಿತ್ರಕಥೆ ಬರೆದು ಸಿನಿಮಾ ಆಕ್ಷನ್ ಕಟ್ ಹೇಳುತ್ತಿದ್ದಾರೆ. ವಾಸುಕಿ ವೈಭವ್ ಸಂಗೀತ, ಆನಂದ್ ಮೀನಾಕ್ಷಿ ಛಾಯಾಗ್ರಹಣ ಚಿತ್ರಕ್ಕಿದೆ. ಹೆಸರಿಡದ ಈ ಸಿನಿಮಾಗೆ ಮಧು ಗೌಡ ಬಂಡವಾಳ ಹೂಡಿದ್ದಾರೆ. ಮುಹೂರ್ತ ನೆರವೇರಿಸಿರುವ ಚಿತ್ರತಂಡ ಈ ತಿಂಗಳ್ಯಾಂತಕ್ಕೆ ಶೂಟಿಂಗ್ ಅಖಾಡಕ್ಕೆ ಧುಮುಕಲಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin