ಮಾರ್ಚ್ 28ಕ್ಕೆ ಯೋಗರಾಜ್ ಭಟ್ ನಿರ್ದೇಶನದ “ಮನದ ಕಡಲು” ತೆರೆಗೆ
ಇಕೆ ಎಂಟರ್ ಟೈನರ್ಸ್ ಲಾಂಛನದಲ್ಲಿ ಇ.ಕೃಷ್ಣಪ್ಪ ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಯಶಸ್ವಿ “ಮುಂಗಾರು ಮಳೆ” ಚಿತ್ರದ ನಂತರ ಇದೇ ಕಾಂಬಿನೇಷನ್ ನಲ್ಲಿ ಮೂಡಿಬಂದಿರುವ “ಮನದ ಕಡಲು” ಚಿತ್ರ ಈ ವಾರ ರಾಜ್ಯಾದ್ಯಂತ ಮಾರ್ಚ್ 28 ರಂದು ಬಿಡುಗಡೆಯಾಗುತ್ತಿದೆ.

ಜಿ.ಗಂಗಾಧರ್ ಸಹ ನಿರ್ಮಾಣ ಹಾಗೂ ಪ್ರತಾಪ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿರುವ ಈ ಚಿತ್ರ ಈಗಾಗಲೇ ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಪ್ರೇಕ್ಷಕರ ಮನ ಗೆದ್ದಿದೆ. ನಾಯಕನಾಗಿ ಸುಮುಖ ಅಭಿನಯಿಸಿದ್ದಾರೆ. ನಾಯಕಿಯರಾಗಿ ರಾಶಿಕಾ ಶೆಟ್ಟಿ ಹಾಗೂ ಅಂಜಲಿ ಅನೀಶ್ ನಟಿಸಿದ್ದಾರೆ. ರಂಗಾಯಣ ರಘು, ದತ್ತಣ್ಣ, ಶಿವಧ್ವಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿರುವ ಈಚಿತ್ರದ ಹಾಡುಗಳನ್ನು ಜಯಂತ ಕಾಯ್ಕಿಣಿ, ಯೋಗರಾಜ್ ಭಟ್ ಬರೆದಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಶಿವಕುಮಾರ್ ಕಲಾ ನಿರ್ದೇಶನ, ವಿನೋದ್ ಹಾಗೂ ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಮತ್ತು ಮುರಳಿ, ಕಂಬಿ ರಾಜು , ಗೀತಾ ಸಾಯಿ ಅವರ ನೃತ್ಯ ನಿರ್ದೇಶನವಿರುವ “ಮನದ ಕಡಲು” ಚಿತ್ರಕ್ಕೆ ಯೋಗರಾಜ್ ಭಟ್, ಗಡ್ಡ ವಿಜಿ ಹಾಗೂ ಅಮೋಲ್ ಪಾಟೀಲ್ ಚಿತ್ರಕಥೆ ಬರೆದಿದ್ದಾರೆ.


