"Marigold" trailer released: The movie will hit the screens on April 5

“ಮಾರಿಗೋಲ್ಡ್ ” ಚಿತ್ರದ ಟ್ರೈಲರ್ ಬಿಡುಗಡೆ : ಏಪ್ರಿಲ್ 5ಕ್ಕೆ ಸಿನಿಮಾ ತೆರೆಗೆ - CineNewsKannada.com

“ಮಾರಿಗೋಲ್ಡ್ ” ಚಿತ್ರದ ಟ್ರೈಲರ್ ಬಿಡುಗಡೆ : ಏಪ್ರಿಲ್ 5ಕ್ಕೆ ಸಿನಿಮಾ ತೆರೆಗೆ

ಚಿನ್ನದ ಬಿಸ್ಕತ್ ಮಾರಲು ಹೊರಟ ನಾಲ್ವರು ಹುಡುಗರ ಕಥೆ ಆಧರಿಸಿದ “ಮಾರಿಗೋಲ್ಡ್” ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಟ್ರೈಲರ್ ಬಿಡುಗಡೆಯಾಗಿದೆ.

ಬಿಗ್ ಬಾಸ್ ಖ್ಯಾತಿಯ ಸಂಗೀತ ಶೃಂಗೇರಿ, ನಟ ದಿಗಂತ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಚಿತ್ರ ಇದು. ಇವರಿಬ್ಬರ ಜೊತೆ ಯಶ್ ಶೆಟ್ಟಿ, ಕಾಕ್ರೋಚ್ ಸುಧೀ, ಸಂಪತ್ ಮೈತ್ರೇಯಾ ಸೇರಿದಂತೆ ಹಲವು ಕಲಾವಿದರಿದ್ಧಾರೆ.

ಟ್ರೈಲರ್ ಬಿಡುಗಡೆ ವೇಳೆ ಮಾತಿಗಿಳಿದ ನಿರ್ಮಾಪಕ ರಘುವರ್ಧನ್, “ಮಾರಿಗೋಲ್ಡ್” ಆಕ್ಷನ್ ಥ್ರಿಲ್ಲರ್ ಜಾನರ್ ಚಿತ್ರವನ್ನು ಬೆಂಗಳೂರು, ಸಕಲೇಶಪುರ ಸುತ್ತ ಮುತ್ತ ಚಿತ್ರೀಕರಣ ಮಾಡಲಾಗಿದೆ .ಏಪ್ರಿಲ್ 5 ರಂದು ಬಿಡುಗಡೆಯಾಗುತ್ತಿದೆ ಎಲ್ಲರ ಸಹಕಾರ ಬೆಂಬಲ ಇರಲಿ ಎಂದು ಕೇಳಿಕೊಂಡರು.

ನಟ ರಾಘವೇಂದ್ರ ಎಂ ನಾಯ್ಕ್ ಮಾತನಾಡಿ ಚಿತ್ರ ಆಗಲು ನಿರ್ಮಾಪಕ ರಘುನಂದನ್, ದಿಗಂತ್ ಹಾಗು ವಿಜಯ್ ಭರಮಸಾಗರ ಕಾರಣ. ಕಳೆದ ಹಲವು ವರ್ಷಗಳಿಂದ ಜೊತೆಯಾಗಿ ಕೆಲಸ ಮಾಡಿದ ಕಲಾವಿದರು ಜೊತೆ ಕೆಲಸ ಮಾಡಿದ್ದರಿಂದ ಎಲ್ಲಿಯೂ ತೊಂದರೆಯಾಗಲಿಲ್ಲ ಎಂದರು.

ನಟ ದಿಗಂತ್ ಮಾತನಾಡಿ ಚಿತ್ರದುರ್ಗದಲ್ಲಿ ಹೊಗೆ ಧೂಳಿನಲ್ಲಿ ಚಿತ್ರೀಕರಣ ಮಾಡಲಾಗಿತ್ತು.ಅಲ್ಲಿ ನಿರ್ದೇಶಕರು ಏಳೆಂಟು ಟೇಕ್ ತೆಗೆದುಕೊಳ್ಳುತ್ತಿದ್ದರು ನನಗೆ ಆಕ್ಟಿಂಟ್ ಬರುತ್ತಿಲ್ಲವಾ ಅನ್ನಿಸಿತ್ತು. ಚಿತ್ರ ನೋಡಿ ಯಾಕೆ ಅಷ್ಟೊಂದು ಟೇಕ್ ತೆಗೆದುಕೊಂಡರು ಎನ್ನುವುದು ಗೊತ್ತಾಯಿತು. ನಾನೇನಾ ಆಕ್ಟ್ ಮಾಡಿರುವುದು ಅನ್ನಿಸಿತು. ನನ್ನ ಬೆನ್ನು ನಾನೇ ತಟ್ಟಿಕೊಂಡು ಖುಷಿ ಪಟ್ಟೆ ಎಂದರು

ನಟಿ ಸಂಗೀತ ಮಾತನಾಡಿ ಶಾಲೆಯಲ್ಲಿ ಇರುವಾಗ ದಿಗಂತ್ ಮೇಲೆ ಕ್ರಷ್ ಆಗಿತ್ತು. ಅವರ ಜೊತೆ ಫೆÇೀಟೋ ತೆಗೆಸಿಕೊಂಡರೆ ಸಾಕು ಅನ್ನಿಸಿತ್ತು. ಈಗ ಅವರ ಜೊತೆ ನಟಿಸಿದುದ್ದ ಖುಷಿ ಆಗಿದೆ. ಅವರ ಜೊತೆ ಲವ್ ಸ್ಟೋರಿಯ ಚಿತ್ರ ಮಾಡುವ ಆಸೆ ಇತ್ತು ಆದರೆ ಆಕ್ಷನ್ ಸಿನಿಮಾ ಸಿಕ್ಕಿತ್ತು. ಪರವಾಗಿಲ್ಲ ದಿಗಂತ್ ಜೊತೆ ನಟಿಸುತ್ತಿರುವುದಕ್ಕೆ ಖುಷಿ ಇದೆ. ಎಂದು ಹೇಳಿಕೊಂಡರು

ಕಲಾವಿದರಾದ ಸಂಪತ್ ಮೈತ್ರೇಯಾ, ಯಶ್ ಶೆಟ್ಟಿಮ ಗಣೇಶ್ ರಾವ್ ಕೇಸರ್ ಕರ್, ವಗ್ರಾಂಜ್ ಶೆಟ್ಟಿ, ಮಹಂತೇಶ್ ಹಿರೇಮಠ್ ,ಸಂಗೀತ ನಿರ್ದೇಶಕ ವೀರ್ ಸಮರ್ಥ, ಸಂಭಾಷಣೆಕಾರ ರಘು ನಿಡವಳ್ಳಿ, ಸಾಹಿತಿ ಕವಿರಾಜ್, ಛಾಯಾಗ್ರಾಹಕ ಕೆಎಸ್ ಚಂದ್ರಶೇಖರ್ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin