“ಮಾರುತ” ಚಿತ್ರ ಮೂರು ವಾರ ಮುಂದಕ್ಕೆ : ನವೆಂಬರ್ 21 ಕ್ಕೆ ಬಿಡುಗಡೆ
ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ “ಮಾರುತ” ಚಿತ್ರ ನಿಗದಿಯಂತೆ ಇದೇ ಅಕ್ಟೋಬರ್ 31 ರಂದು “ಮಾರುತ” ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಬೇಕಿತ್ತು. ಪ್ರಸ್ತುತ ಚಿತ್ರಮಂದಿರಗಳ ಅಭಾವವಿರುವ ಕಾರಣ ಚಿತ್ರತಂಡ “ಮಾರುತ” ಚಿತ್ರದ ಬಿಡುಗಡೆಯನ್ನು ಮೂರು ವಾರ ಮುಂದೂಡಿದೆ. ನವೆಂಬರ್ 21 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

ಸದಭಿರುಚಿಯ ಚಿತ್ರಗಳ ನಿರ್ದೇಶಕ ಎಸ್ ನಾರಾಯಣ್ ನಿರ್ದೇಶನ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ದುನಿಯಾ ವಿಜಯ್ ಮತ್ತು ಉತ್ಸಾಹಿ ಯುವ ನಟ ಶ್ರೇಯಸ್ ಕೆ ಮಂಜು ಕಾಂಬಿನೇಶನ್ ನಲ್ಲಿ ಮೂಡಿಬಂದಿರುವ ಚಿತ್ರದ ಬಿಡುಗಡೆಗೆ ಕನ್ನಡ ಕಲಾಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ಮೂಡಿ ಬಂದಿರುವ “ಮಾರುತ” ಚಿತ್ರಕ್ಕೆ ಎಸ್ ನಾರಾಯಣ್ ರಚನೆ ಹಾಗೂ ನಿರ್ದೇಶನವಿದ್ದು, ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನ, ವಿನೋದ್ ಹಾಗೂ ಅರ್ಜುನ್ ಸಾಹಸ ನಿರ್ದೇಶನ ಮತ್ತು ಮೋಹನ್ ಕುಮಾರ್, ಸಂತು ಅವರ ನೃತ್ಯ ನಿರ್ದೇಶನವಿದೆ. ಎಸ್ ನಾರಾಯಣ್ ಹಾಗೂ ಜೆಸ್ಸಿಗಿಫ್ಟ್ ಸಂಗೀತ ಸಂಯೋಜಿಸಿದ್ದಾರೆ. ಕೆ.ಮಂಜು – ರಮೇಶ್ ಯಾದವ್ ನಿರ್ಮಾಣವಿದೆ

ದುನಿಯಾ ವಿಜಯ್, ಶ್ರೇಯಸ್ ಕೆ ಮಂಜು, ಬೃಂದಾ(ನಾಯಕಿ), ಸಾಧುಕೋಕಿಲ, ನಿಶ್ವಿಕಾ ನಾಯ್ಡು, ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಮಂಜು ಪಾವಗಡ , ಚಿತ್ರಾ ಶೆಣೈ, ಸುಜಯ್ ಶಾಸ್ತ್ರಿ ಮುಂತಾದವರ ತಾರಾಬಳಗವಿರುವ ಈ ಚಿತ್ರದ ವಿಶೇಷಪಾತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ನಟಿಸಿದ್ದಾರೆ..

