“ಮಾರುತ” ಚಿತ್ರ ಅಕ್ಟೋಬರ್ 31ಕ್ಕೆ ತೆರೆಗೆ
ಎಸ್ ನಾರಾಯಣ್ ನಿರ್ದೇಶನದ “ಮಾರುತ” ಚಿತ್ರದ ಪ್ರಮುಖಪಾತ್ರದಲ್ಲಿ “ದುನಿಯಾ” ವಿಜಯ್ ಹಾಗೂ ಶ್ರೇಯಸ್ ಮಂಜು ಹಾಗು ಬೃಂದಾ ಆಚಾರ್ಯ ನಟಿಸಿದ್ದು ಅಕ್ಟೋಬರ್ 31 ರಂದು ಚಿತ್ರ ತೆರೆಗೆ ಬರಲು ಸಜ್ಜಾಗಿದೆ

ಹೆಸರಾಂತ ನಿರ್ಮಾಪಕರಾದ ಕೆ.ಮಂಜು ಹಾಗೂ ರಮೇಶ್ ಯಾದವ್ ನಿರ್ಮಾಣದಲ್ಲಿ, ಸದಭಿರುಚಿ ಚಿತ್ರಗಳ ನಿರ್ದೇಶಕ ಎಸ್ ನಾರಾಯಣ್ ನಿರ್ದೇಶನದಲ್ಲಿ, ಅಮೋಘ ನಟನೆಯ ಮೂಲಕ ಜನಮನಸೂರೆಗೊಂಡಿರುವ ದುನಿಯಾ ವಿಜಯ್ ಹಾಗೂ ಉತ್ಸಾಹಿ ಯುವನಟ ಶ್ರೇಯಸ್ ಮಂಜು ಸಮಾಗಮದಲ್ಲಿ ಅದ್ದೂರಿಯಾಗಿ ಮೂಡಿಬಂದಿರುವ “ಮಾರುತ” ಚಿತ್ರದ ಬಿಡುಗಡೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಹಾಡುಗಳು ಹಾಗೂ ಟೀಸರ್ ಮೂಲಕ ಈಗಾಗಲೇ ಎಲ್ಲರ ಗಮನ ಸೆಳೆದಿರುವ “ಮಾರುತ” ಚಿತ್ರಕ್ಕೆ ಎಸ್ ನಾರಾಯಣ್ ಅವರ ರಚನೆ ಹಾಗೂ ನಿರ್ದೇಶನವಿದೆ. ಸಂಗೀತ ಸಂಯೋಜನೆಯನ್ನು ಎಸ್ ನಾರಾಯಣ್ ಅವರೆ ಮಾಡಿದ್ದಾರೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನ, ವಿನೋದ್ ಹಾಗೂ ಅರ್ಜುನ್ ಸಾಹಸ ನಿರ್ದೇಶನ ಮತ್ತು ಮೋಹನ್ ಕುಮಾರ್, ಸಂತು ಅವರ ನೃತ್ಯ ನಿರ್ದೇಶನವಿದೆ.

ದುನಿಯಾ ವಿಜಯ್, ಶ್ರೇಯಸ್ ಕೆ ಮಂಜು, ಬೃಂದಾ(ನಾಯಕಿ), ಸಾಧುಕೋಕಿಲ, ನಿಶ್ವಿಕಾ ನಾಯ್ಡು, ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಮಂಜು ಪಾವಗಡ , ಚಿತ್ರಾ ಶೆಣೈ, ಸುಜಯ್ ಶಾಸ್ತ್ರಿ ಮುಂತಾದವರ ತಾರಾಬಳಗವಿರುವ ಈ ಚಿತ್ರದ ವಿಶೇಷಪಾತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ನಟಿಸಿದ್ದಾರೆ..

