"Maryade Prashne"' Released on November 22 : Date Announced Team

‘ಮರ್ಯಾದೆ ಪ್ರಶ್ನೆ’ ನವೆಂಬರ್ 22ಕ್ಕೆ ಬಿಡುಗಡೆ : ದಿನಾಂಕ ಪ್ರಕಟಿಸಿದ ತಂಡ - CineNewsKannada.com

‘ಮರ್ಯಾದೆ ಪ್ರಶ್ನೆ’ ನವೆಂಬರ್ 22ಕ್ಕೆ ಬಿಡುಗಡೆ : ದಿನಾಂಕ ಪ್ರಕಟಿಸಿದ ತಂಡ

ಕನ್ನಡ ಚಿತ್ರರಂಗದಲ್ಲಿ ಇತ್ತೀಚೆಗೆ ಹೊಸ ಕಥೆಯ ಕಂಟೆಂಟ್‌ಗಳು ಹಾಗೂ ನಿರೂಪಣೆಯಲ್ಲಿ ಹೊಸತನವಿರುವ ಸಿನಿಮಾಗಳು ಹೆಚ್ಚು ಗಮನ ಸೆಳೆಯುತ್ತಿವೆ. ಈಗ ಈ ಸಾಲಿಗೆ ‘ಮರ್ಯಾದೆ ಪ್ರಶ್ನೆ’ ಸಿನಿಮಾ ಸೇರಿದ್ದು, ಈಗಾಗಲೇ ಇದು ವಿಭಿನ್ನ ಶೀರ್ಷಿಕೆ ಮೂಲಕ ಸದ್ದು ಮಾಡುತ್ತಿದೆ.

ಆರಂಭದಿಂದಲೂ ನಾನಾ ಬಗೆಯಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಿರುವ “ಮರ್ಯಾದೆ ಪ್ರಶ್ನೆ” ಸಿನಿಮಾ ತೆರೆಗೆ ಬರೋದಿಕ್ಕೆ ಮುಹೂರ್ತ ನಿಗದಿಯಾಗಿದೆ. ಸಕ್ಕತ್ ಸ್ಟುಡಿಯೋದ ಸಂಸ್ಥಾಪಕ ಆರ್.ಜೆ ಪ್ರದೀಪ್, ನಿರ್ದೇಶಕ ನಾಗರಾಜ್ ಸೋಮಯಾಜಿ ಸೇರಿದಂತೆ ಇಡೀ ತಂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು..

ನಿರ್ಮಾಪಕ ಆರ್.ಜೆ.ಪ್ರದೀಪ್ ಮಾತನಾಡಿ, ಸಕ್ಕತ್ ಸ್ಟುಡಿಯೋ ನಮ್ಮ ಕನಸು. ಒಂದೊಳ್ಳೆ ಮಾಡಬೇಕು ಅನ್ನೋದು ಇತ್ತು. ನಾನು ನಾಗರಾಜ್ ಕಥೆ ಬಗ್ಗೆ ಚರ್ಚೆ ಮಾಡಿದ್ದೇವೆ. ಇಬ್ಬರು ಸೇರಿ ಸಿನಿಮಾಗಾಗಿ ಕೈ ಜೋಡಿಸಿದೆವು. ಹೀಗೆ ಶುರುವಾದ ಜರ್ನಿ ನಾವು ಮತ್ತೆ ಹಿಂದೆ ತಿರುಗಿ ನೋಡಲೇ ಇಲ್ಲ. ಒಂದೊಳ್ಳೆ ಸಿನಿಮಾ ಮಾಡಿಕೊಂಡು ಜನರಿಗೆ ತಲುಪಿಸಲು ಡೇಟ್ ಫಿಕ್ಸ್ ಮಾಡಿಕೊಂಡು ನಿಮ್ಮ ಮುಂದೆ ಬಂದಿದ್ದೇವೆ ಎಂದರು.

ನಿರ್ದೇಶಕ ನಾಗರಾಜ್ ಸೋಮಯಾಜಿ ಮಾತನಾಡಿ, ಪ್ರದೀಪ್ ಕ್ಲೋಸ್ ಫ್ರೆಂಡ್ಸ್. ಅದ್ಭುತ ತಾರಾಬಳಗ, ಪ್ರೇಕ್ಷಕರಿಗೆ ಇಷ್ಟವಾಗುವ ನೈಜತೆ ಇರುವ ಸಿನಿಮಾ ಮಾಡಿದ್ದೇವೆ. ತಾರಾಬಳಗದ ಜೊತೆಗೆ ನಮ್ ಟೆಕ್ನಿಕಲ್ ಟೀಂ ಕೂಡ ಸ್ಟ್ರಾಂಗ್ ಆಗಿದೆ. ಈ ಸಿನಿಮಾ ಜನಕ್ಕೆ ತಲುಪಿಸಲು ನಿಮ್ಮ ಪ್ರೀತಿ ಬೇಕು. ಉಳಿದದ್ದನ್ನು ಜನ ದುಪ್ಪಟ್ಟು ಮಾಡುತ್ತಾರೆ.

ಯಶಸ್ವಿ ಚಿತ್ರ ಯಾವ್ಯಾವ ಸ್ವರೂಪದಲ್ಲಿ ಪ್ರೇಕ್ಷಕರ ಗಮನ ಸೆಳೆಯುತ್ತದೆಯೋ ಆ ಎಲ್ಲಾ ರೀತಿಯಿಂದಲೂ ಸದ್ದು ಮಾಡುತ್ತಾ ಸಾಗುತ್ತಿರುವ ಫ್ಯಾಮಿಲಿ ಎಂಟರ್ ಟೈನರ್ ಮರ್ಯಾದೆ ಪ್ರಶ್ನೆ ಚಿತ್ರ ನವೆಂಬರ್ 22ಕ್ಕೆ ಬಿಡುಗಡೆಯಾಗ್ತಿದೆ. ಆಕರ್ಷಕ ಪೋಸ್ಟರ್ ಮೂಲಕ ಚಿತ್ರತಂಡ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ.

ಚಿತ್ರದ ಪೋಸ್ಟರ್ ಇದೊಂದು ಫ್ಯಾಮಿಲಿ ಕುಳಿತು ನೋಡುವ ಸಿನಿಮಾ ಅನ್ನೋದನ್ನು ಹೇಳ್ತಿದೆ. ರಾಜ್ಯ ಮಾತ್ರವಲ್ಲ ಹೈದ್ರಾಬಾದ್, ಚೆನ್ನೈ, ಹೀಗೆ ಬೇರೆ ರಾಜ್ಯಗಳ ಜೊತೆಗೆ ವಿದೇಶದಲ್ಲಿಯೂ ಮರ್ಯಾದೆ ಪ್ರಶ್ನೆ ಸಿನಿಮಾ ರಿಲೀಸ್ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

‘ಮರ್ಯಾದೆ ಪ್ರಶ್ನೆ’ ಸಿನಿಮಾದಲ್ಲಿ ರಾಕೇಶ್‌ ಅಡಿಗ, ಸುನೀಲ್‌ ರಾವ್‌, ಶೈನ್‌ ಶೆಟ್ಟಿ, ತೇಜು ಬೆಳವಾಡಿ, ಪೂರ್ಣಚಂದ್ರ ಮೈಸೂರು, ಪ್ರಭು ಮುಂಡ್ಕೂರ್‌, ರೇಖಾ ಕೂಡ್ಲಿಗಿ, ನಾಗೇಂದ್ರ ಶಾ, ಶ್ರವಣ್‌ ಮುಖ್ಯ ತಾರಾಗಣದಲ್ಲಿದ್ದಾರೆ.

ಸಕ್ಕತ್‌ ಸ್ಟುಡಿಯೋ ಬ್ಯಾನರ್‌ನಡಿ ಪ್ರದೀಪ್‌ ಈ ಸಿನಿಮಾವನ್ನು ನಿರ್ಮಿಸುತ್ತಿದ್ದು, ಈ ಚಿತ್ರಕ್ಕೆ ಪ್ರದೀಪ್‌ ಅವರೇ ಕಥೆ ಬರೆದಿದ್ದಾರೆ. ಕ್ರಿಯೆಟಿವ್ ಹೆಡ್ ಕೂಡ ಸಾಥ್ ಕೊಟ್ಟಿದ್ದಾರೆ. ಮರ್ಯಾದೆ ಪ್ರಶ್ನೆ ಚಿತ್ರವನ್ನ ನಾಗರಾಜ್ ಸೋಮಯಾಜಿ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ದಿ ಬೆಸ್ಟ್ ಆ್ಯಕ್ಟರ್, ಮೈಕ್ರೋ ಮೂವಿ ಮಾಡಿದ್ದರು. ಮರ್ಯಾದೆ ಪ್ರಶ್ನೆ ಚಿತ್ರಕ್ಕೆ ಸಂದೀಪ್ ವೆಲ್ಲುರಿ ಕ್ಯಾಮರಾವರ್ಕ್ ಮಾಡಿದ್ದಾರೆ. ಅರ್ಜುನ್ ರಾಮು ಸಂಗೀತ ಕೊಟ್ಟಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin