“ಶಿಖಂಡಿ” ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ: ಕುತೂಹಲ ಹೆಚ್ಚಳ
‘ಮಾರಕಾಸ್ತ್ರ’ ಚಿತ್ರ ನಿರ್ದೇಶಿಸಿದ್ದ ಗುರುಮೂರ್ತಿ, ವಿಭಿನ್ನ ಕಥಾಹಂದರ ಹೊಂದಿರುವ “ಶಿಖಂಡಿ” ಚಿತ್ರ ನಿರ್ದೇಶಿಸಿದ್ದಾರೆ. ಪೋಲಾ ಪ್ರವೀಣ್ ಕುಮಾರ್ ಚಿತ್ರ ನಿರ್ಮಿಸಿದ್ದಾರೆ. ಚಿತ್ರದ ಮೋಷನ್ ಪೆÇೀಸ್ಟರ್ ಅನಾವರಣವಾಗಿದ್ದು ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚು ಮಾಡಿದೆ

ನಿರ್ಮಾಪಕ ಸಂಜಯ್ ಗೌಡ ಹಾಗೂ ನಿರ್ದೇಶಕರಾದ ಜಡೇಶ್ ಕೆ ಹಂಪಿ, ನವೀನ್ ರೆಡ್ಡಿ “ಶಿಖಂಡಿ” ಚಿತ್ರದ ಮೋಷನ್ ಪೋಸ್ಟರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು
ನಿರ್ದೇಶಕ ಗುರುಮೂರ್ತಿ ಮಾತನಾಡಿ ಮಹಾಭಾರತದಲ್ಲಿ ಬರುವ “ಶಿಖಂಡಿ” ಪಾತ್ರವೇ ಚಿತ್ರದ ಕಥೆಗೆ ಸ್ಪೂರ್ತಿ, ಶಿಖಂಡಿ ಪುನರ್ಜನ್ಮ ಪಡೆದು ಸೇಡನ್ನು ತೀರಿಸಿಕೊಳ್ಳುವುದನ್ನು ನಾವೆಲ್ಲಾ ಕೇಳಿದ್ದೇವೆ. ಅಂಶವನ್ನೇ ಪ್ರಧಾನವಾಗಿಟ್ಟುಕೊಂಡು “ಶಿಖಂಡಿ” ಚಿತ್ರದ ಕಥೆ ಹೆಣೆಯಲಾಗಿದೆ. ಸಸ್ಪೆನ್ಸ್, ಥ್ರಿಲ್ಲರ್, ಹಾರಾರ್, ಕಾಮಿಡಿ ಸೇರಿದಂತೆ ಎಲ್ಲಾ ಅಂಶಗಳು ಇರುವ ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರವಿದು. ಮೇ ವೇಳೆಗೆ ಸಿನಿಮಾ ಬಿಡುಗಡೆ ಮಾಡುವ ಯೋಜನೆ ಇದೆ ಎಂದರು
ನಿರ್ಮಾಪಕ ಪೋಲಾ ಪ್ರವೀಣ್ ಕುಮಾರ್ ಮಾತನಾಡಿ ಮೊದಲ ನಿರ್ಮಾಣದ ಚಿತ್ರ. ವಿಶೇಷ ಚೇತನರಾಗಿದ್ದರೂ ನಿರ್ದೇಶಕ ಗುರುಮೂರ್ತಿ ಅವರಿಗೆ ಸಿನಿಮಾ ಮೇಲಿರುವ ಪ್ರೀತಿ. ಒಂದೊಳ್ಳೆ ಚಿತ ಮುಂದೆ ತರುತ್ತಿದ್ದೇವೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.
ನಾಯಕ ಯುವರಾಜ್ ಗೌಡ ಮಾತನಾಡಿ ಚಿತ್ರದ ಶೀರ್ಷಿಕೆ, ಕಥೆ ಕೇಳಿ ಸಂತೋಷವಾಯಿತು. ನಾಯಕನಾಗಿ ಮೊದಲ ಚಿತ್ರ. ಸೂರ್ಯಪಾತ್ರದ ಹೆಸರು ಎಂದು ಹೇಳಿದರು

ನಾಯಕಿಯರಾದ ಖ್ಯಾತಿ, ನಿಖಿತಾಸ್ವಾಮಿ, “ಬಿಗ್ ಬಾಸ್” ಖ್ಯಾತಿಯ ನೀತು ಹಾಗೂ ಬಳ್ಳಾರಿಯ ಚಾಂದಿನಿ ವಿವರಣೆ ನೀಡಿದರು.
ಹಿರಿಯ ಕಲಾವಿದರಾದ ರಘು ರಾಮನಕೊಪ್ಪ, ದೀಪಕ್ ಶೆಟ್ಟಿ, ವಿಜಯ್ ಚಂಡೂರ್ ಮುಂತಾದವರು ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು.

ಛಾಯಾಗ್ರಾಹಕ ಸ್ವಾಮಿ, ಸಂಗೀತ ನಿರ್ದೇಶಕ ಮಂಜುಕವಿ, ಹಾಡು ಬರೆದಿರುವ ಕಿನ್ನಾಳ್ ರಾಜ್, ಹಿನ್ನೆಲೆ ಸಂಗೀತ ನೀಡಿರುವ ಪ್ರದ್ಯೋತನ್, ನೃತ್ಯ ನಿರ್ದೇಶಕ ಜಗ್ಗು ಮಾಸ್ಟರ್ ಹಾಗೂ ಚಿತ್ರಕಥೆ ಬರೆದಿರುವ ದಯಾಶಂಕರ್ ಮುಂತಾದವರು “ಶಿಖಂಡಿ” ಚಿತ್ರದ ಕುರಿತು ಮಾಹಿತಿ ನೀಡಿದರು.

