"Mr. and Mrs. Rajahuli" movie poster released by Dr. Virendra Heggade

“ಮಿಸ್ಟರ್ ಅಂಡ್ ಮಿಸಸ್ ರಾಜಾಹುಲಿ” ಚಿತ್ರದ ಪೋಸ್ಟರ್ ನೂತನ ಡಾ.ವೀರೇಂದ್ರ ಹೆಗ್ಗಡೆ ಬಿಡುಗಡೆ - CineNewsKannada.com

“ಮಿಸ್ಟರ್ ಅಂಡ್ ಮಿಸಸ್ ರಾಜಾಹುಲಿ” ಚಿತ್ರದ ಪೋಸ್ಟರ್ ನೂತನ ಡಾ.ವೀರೇಂದ್ರ ಹೆಗ್ಗಡೆ ಬಿಡುಗಡೆ

ಹೊನ್ನರಾಜ್ ನಿರ್ದೇಶನದ ಮಿಸ್ಟರ್ ಅಂಡ್ ಮಿಸಸ್ ರಾಜಾಹುಲಿ ಚಿತ್ರವೀಗ ಬಿಡುಗಡೆಗೆ ಸಿದ್ದವಾಗಿದೆ. ಹೊನ್ನರಾಜ್ ಮೊದಲಬಾರಿಗೆ ಆಕ್ಷನ್ ಕಟ್ ಹೇಳುವ ಜೊತೆಗೆ ಚಿತ್ರದ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಅಲ್ಲದೆ ನಿರ್ಮಾಣವನ್ನೂ ಮಾಡಿದ್ದಾರೆ.

ಈ ಚಿತ್ರದ ನೂತನ ಪೋಸ್ಟರ್ ಅನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗಡೆ ಅವರು ಧರ್ಮಸ್ಥಳದಲ್ಲಿ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆಈ ಸಂದರ್ಭದಲ್ಲಿ ನಾಯಕ ಹೊನ್ನರಾಜ್, ರಾಜೇಂದ್ರ, ನಂದಿಹಳ್ಳಿ ಶಿವಣ್ಣ, ಜಗದೀಶ್ , ಸಹನಿರ್ದೇಶಕ ಪ್ರಕಾಶ್ ವೆಂಕಟರಮಣ, ಸ್ಟಿಲ್ ವೆಂಕಟೇಶ್, ಮೋಹನ್, ಜಗನ್ನಾಥ್ ಇತರರಿದ್ದರು.

ನೈಜ ಘಟನೆಯನ್ನು ಆಧರಿಸಿ ನಿರ್ಮಾಣವಾಗಿರುವ ಫ್ಯಾಮಿಲಿ ಎಂಟರ್ ಟೈನ್ ಮೆಂಟ್ ಚಿತ್ರ ಇದಾಗಿದೆ. ಇಲ್ಲಿ ನಾಯಕ ಯಶ್ ಅಭಿಮಾನಿ, ಸ್ನೇಹಕ್ಕೆ ಹೆಚ್ಚು ಬೆಲೆ ಕೊಡುವವನು, ಸದಾ ಸಮಾಜ ಸೇವೆಯಲ್ಲಿ ತೊಡಗಿರುವ ನಾಯಕ ಮದುವೆ ಆಗ್ತಾನೋ ಇಲ್ಲವೋ, ಎನ್ನುವುದೇ ಚಿತ್ರದ ಕಥಾಹಂದರ.

ಚಿತ್ರವನ್ನು ಮದ್ದೂರು, ಹುಳಿಯಾರು, ಚಿಕ್ಕನಾಯಕನಾಹಳ್ಳಿ, ಶ್ರೀರಂಗಪಟ್ಟಣದ ಸುತ್ತಮುತ್ತ ಚಿತ್ರೀಕರಿಸಲಾಗಿದೆ. ನಾಯಕಿ ಶೃತಿ ಬಬಿತ ಬಜಾರಿ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ. ಸಂಜಯ್ ಶ್ರೀನಿವಾಸ್ ನಿರ್ಮಾಣದಲ್ಲಿ ಕೈಜೋಡಿಸಿದ್ದಾರೆ. ವಿನು ಮನಸು ಅವರ ಸಂಗೀತ, ಶಿವಪುತ್ರ ಅವರ ಛಾಯಾಗ್ರಹಣ, ಗಿರೀಶ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಮೈಸೂರು ಮಂಜುಳ , ರೇಖಾದಾಸ್ ಮತ್ತಿತರರು ಈ ಚಿತ್ರದಲ್ಲಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin