ಎಂ.ಎಸ್ ಧೋನಿ ನಿರ್ಮಾಣದ ಚೊಚ್ಚಲ ಚಿತ್ರ: “ಲೆಟ್ಸ್ ಗೆಟ್ ಮ್ಯಾರೀಡ್ ರಾಜ್ಯದಲ್ಲಿ ಬಿಡುಗಡೆ - CineNewsKannada.com

ಎಂ.ಎಸ್ ಧೋನಿ ನಿರ್ಮಾಣದ ಚೊಚ್ಚಲ ಚಿತ್ರ: “ಲೆಟ್ಸ್ ಗೆಟ್ ಮ್ಯಾರೀಡ್ ರಾಜ್ಯದಲ್ಲಿ ಬಿಡುಗಡೆ

ಭಾರತೀಯ ಕ್ರಿಕೆಟ್ ತಂಡದ ಕ್ಯಾಪ್ಟನ್ ಕೂಲ್ ಎಂ.ಎಸ್ ಧೋನಿ ಪತ್ನಿ ಸಾಕ್ಷಿ ಜೊತೆಗೂಡಿ ತಮ್ಮದೇ ಧೋನಿ ಎಂಟರ್ ಟೇನ್ಮೆಂಟ್ ಮೂಲಕ ನಿರ್ಮಿಸುತ್ತಿರುವ ಚೊಚ್ಚಲ ಸಿನಿಮಾ “ಲೆಟ್ಸ್ ಗೆಟ್ ಮ್ಯಾರೀಡ್” ಕರ್ನಾಟಕದಲ್ಲಿಯೂ ಬಿಡುಗಡೆಗೆ ಸಜ್ಜಾಗಿದೆ.

“ಲೆಟ್ಸ್ ಗೆಟ್ ಮ್ಯಾರೀಡ್” ಟೀಸರ್ ಮೂಲಕ ನಗುವಿನ ಕಿಕ್ ಕೊಟ್ಟಿರುವ ಚಿತ್ರ ರಾಜ್ಯದಲ್ಲಿಯೂ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ. ಇತ್ತೀಚಿಗೆ ಪರಭಾಷೆ ಸಿನಿಮಾಗಳಿಗೆ ಕರುನಾಡಿನಲ್ಲಿ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹೀಗಾಗಿ ಲೆಟ್ಸ್ ಗೆಟ್ ಮ್ಯಾರೀಡ್ ಸಿನಿಮಾ ಕೂಡ ಕರ್ನಾಟಕದಲ್ಲಿ ತೆರೆಕಾಣಲಿದೆ ಎಂದು ಚಿತ್ರತಂಡ ತಿಳಿಸಿದೆ.

ಫ್ಯಾಮಿಲಿ ಎಂಟರ್‍ಟೇನರ್ ಕಥಾಹಂದರ ಹೊಂದಿರುವ ಸಿನಿಮಾವನ್ನು ರಮೇಶ್ ತಮಿಳ್‍ಮಣಿ ನಿರ್ದೇಶನ ಮಾಡಿದ್ದಾರೆ. ನಾಯಕ ಹರೀಶ್ ಕಲ್ಯಾಣ್, ನಾಯಕಿ ಇವಾನಾ ನಟಿಸಿದ್ದು, ಹಿರಿಯ ನಟಿ ನದಿಯಾ, ಯೋಗಿ ಬಾಬು ಮತ್ತು ಆರ್‍ಜೆ ವಿಜಯ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ಸ್ ಹಂತದಲ್ಲಿರುವ ಲೆಟ್ಸ್ ಗೆಟ್ ಮ್ಯಾರೀಡ್ ಸಿನಿಮಾವನ್ನು ಆದಷ್ಟು ಬೇಗ ತೆರೆಗೆ ತರಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.

ರಮೇಶ್ ತಮಿಳ್ಮಣಿ ಸಿನಿಮಾಗೆ ಆಕ್ಷನ್ ಕಟ್ ಹೇಳುವುದರ ಜೊತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿ ಕೂಡ ನಿಭಾಯಿಸಿದ್ದಾರೆ. ಟೀಸರ್ ಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದ್ದು, ಶೀಘ್ರದಲ್ಲೇ ಆಡಿಯೋ ಹಾಗೂ ಟ್ರೈಲರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಲಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin