Muhurat for actor Rishab Shetty's new film "Jai Hanuman

ನಟ ರಿಷಬ್ ಶೆಟ್ಟಿ ನಟನೆಯ ಹೊಸ ಚಿತ್ರ “ಜೈ ಹನುಮಾನ್” ಚಿತ್ರಕ್ಕೆ ಮುಹೂರ್ತ - CineNewsKannada.com

ನಟ ರಿಷಬ್ ಶೆಟ್ಟಿ ನಟನೆಯ ಹೊಸ ಚಿತ್ರ “ಜೈ ಹನುಮಾನ್” ಚಿತ್ರಕ್ಕೆ ಮುಹೂರ್ತ

ಕಾಂತಾರ ಚಾಪ್ಟರ್ – 1 ಚಿತ್ರ ಸೂಪರ್ ಡೂಪರ್ ಹಿಟ್ ಆದ ನಂತರ ರಾಷ್ಟ್ರ ಪ್ರಶಸ್ತಿ ವಿಜೇತ ನಟ ರಿಷಬ್ ಶೆಟ್ಟಿ ಅಭಿನಯದ ಹೊಸ ಚಿತ್ರ ” ಜೈ ಹನುಮಾನ್ ” ಚಿತ್ರಕ್ಕೆ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಮುಹೂರ್ತ ನಡೆದಿದೆ
.

ಹನುಮ ಹುಟ್ಟಿದ ಸ್ಥಳ ಅಂಜನಾದ್ರಿಯಲ್ಲಿಯೇ ‘ಜೈ ಹನುಮಾನ್’ ಸಿನಿಮಾಗೆ ಪೂಜೆ ಮಾಡಿರುವುದು ವಿಶೇಷ
ತೆಲುಗಿನ ಪ್ರಶಾಂತ್ ವರ್ಮಾ ” ಜೈ ಹನುಮಾನ್ ” ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

ಮುಹೂರ್ತದಲ್ಲಿ ಟೀ ಸಿರೀಸ್ ಮುಖ್ಯಸ್ಥ ಭೂಷಣ್ ಕುಮಾರ್ ಚಿತ್ರಕ್ಕೆ ಕ್ಲ್ಯಾಪ್ ಮಾಡಿದರೆ‌ ವಿತರಕ ಅನಿಲ್ ಥಡಾನಿ ಕ್ಯಾಮೆರಾಗೆ ಚಾಲನೆ ನೀಡುವ ಮೂಲಕ ಶುಭ ಹಾರೈಸಿದರು.ನಟ ರಿಷಬ್ ಶೆಟ್ಟಿ ಜೊತೆ ಪತ್ನಿ ಪ್ರಗತಿ ಶೆಟ್ಟಿ, ನಿರ್ದೇಶಕ‌ ಪ್ರಶಾಂತ್ ವರ್ಮಾ, ನಿರ್ಮಾಪಕರಾದ ನವೀನ್ ಯೆರ್ನೇನಿ ಮತ್ತು ವೈ ರವಿ ಶಂಕರ್, ನಟ ತೇಜ್ ಸಜ್ಜಾ ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿದ್ದರು

2 ವರ್ಷಗಳ ಹಿಂದೆ ‘ಹನುಮಾನ್’ ಚಿತ್ರ ನಿರ್ದೇಶಿಸಿದ್ದ ಪ್ರಶಾಂತ್ ವರ್ಮಾ ಇದೀಗ ಸೀಕ್ವೆಲ್ ಸಿನಿಮಾ ಮಾಡ್ತಿದ್ದಾರೆ. ತೆಲುಗು ಚಿತ್ರರಂಗದ ಮೈತ್ರಿ ಮೂವೀ ಮೇಕರ್ಸ್‌ನ ನವೀನ್ ಯೆರ್ನೇನಿ ಮತ್ತು ವೈ ರವಿ ಶಂಕರ್ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಪುಷ್ಪ’, ‘ವಾಲ್ತೇರು ವೀರಯ್ಯ’, ‘ವೀರ ಸಿಂಹ ರೆಡ್ಡಿ’, ‘ರಂಗಸ್ಥಲಂ’ ರೀತಿಯ ಅನೇಕ ಹಿಟ್ ಸಿನಿಮಾಗಳನ್ನು ನಿರ್ಮಾಣ ಸಂಸ್ಥೆ ಬ್ಯಾನರ್‌ನಲ್ಲಿ ಈಗ ರಿಷಬ್ ಶೆಟ್ಟಿ ಜೈ ಹನುಮಾನ್ ಸಿನಿಮಾ ತಯಾರಾಗುತ್ತಿದೆ.

ಜೈ ಹನುಮಾನ್‌’ ಸಿನಿಮಾ ನಿರ್ದೇಶಕ ಪ್ರಶಾಂತ್ ವರ್ಮಾ ಅವರೇ ಕ್ರಿಯೇಟ್ ಮಾಡಿರುವ ‘ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್’ ಅಡಿಯಲ್ಲಿ ತಯಾರಾಗಲಿದೆ. ಶೀಘ್ರದಲ್ಲೇ ಶೂಟಿಂಗ್ ಶುರುವಾಗಲಿದೆ‌.

ಜೈ ಹನುಮಾನ್ ಸಿನಿಮಾಗೆ ಎಂ.ಎಂ. ಕೀರವಾಣಿ ಸಂಗೀತ ನಿರ್ದೇಶನ, ಎಸ್. ತಿರುನಾವುಕ್ಕರಸು ಛಾಯಾಗ್ರಾಹಣ, ಶ್ರೀನಾಗೇಂದ್ರ ತಂಗಳ ನಿರ್ಮಾಣ ವಿನ್ಯಾಸ ಚಿತ್ರಕ್ಕಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin