ರೋಮಾಂಟಿಕ್ ಜಾನರ್ ನ “”congratulations ಬ್ರದರ್” ಚಿತ್ರಕ್ಕೆ ಮುಹೂರ್ತ

ಕನ್ನಡದಲ್ಲಿ ಇತ್ತೀಚೆಗೆ ವಿಭಿನ್ನ ಶೀರ್ಷಿಕೆಗಳ ಮೂಲಕ ಕನ್ನಡದ ಸಿನಿ ಪ್ರೇಕ್ಷಕರನ್ನು ರಂಜಿಸುವ ಕೆಲಸ ನಡೆಯುತ್ತಿದೆ. ಅದರ ಸಾಲಿಗೆ ಹೊಸ ಸೇರ್ಪಡೆ “congratulations ಬ್ರದರ್”.

ಚಿತ್ರದ ಮೂಲಕ ರಕ್ಷಿತ್ ನಾಯಕನಾಗಿ ಅಭಿನಯಿಸುತ್ತಿದ್ದು ಅನುಷಾ ಹಾಗು ಸಂಜನಾ ಎಂಬ ಹೊಸ ಹುಡುಗಿಯರನ್ನು ಚಿತ್ರರಂಗಕ್ಕೆ ಪರಿಚಯ ಮಾಡಲಾಗುತ್ತಿದೆ. ಜೊತೆಗೆ ಪ್ರಶಾಂತ್ ಕಲ್ಲೂರ್ , ಹರೀಶ್ ಹಾಗೂ ರವಿಕುಮಾರ್ ನಿರ್ಮಾಣಕ್ಕೆ ಜೊತೆಯಾಗಿದ್ದಾರೆ.
ಚಿತ್ರದ ಮುಹೂರ್ತದ ಬಳಿಕ ಮಾತಿಗಿಳಿದ ಕಥೆಗಾರ ಹಾಗು ಕ್ರಿಯೇಟೀವ್ ಹೆಡ್ ಹರಿ ಸಂತೋಷ್, ಎರಡು ವರ್ಷಗಳಿಂದ ನಾವು ಹನ್ನೆರಡು ಜನ ಸ್ನೇಹಿತರು ಸೇರಿ “ಪೆನ್ ಎನ್ ಪೇಪರ್” ಸಂಸ್ಥೆ ಆರಂಭಿಸಿದ್ದೆವು. ಈ ಮೂಲಕ ಹಲವು ವೆಬ್ ಸಿರೀಸ್‍ಗಳಿಗೆ ಹಾಗೂ ಕೆಲವು ಪ್ರೊಡಕ್ಷನ್ಸ್ ಹೌಸ್‍ಗಳಿಗೆ ಕಥೆ ಒದಗಿಸಿಕೊಟ್ಟಿದ್ದೇವೆ. ಈಗ ಇದೇ ತಂಡದಿಂದ ಮೊದಲ ಸಿನಿಮಾ ಮಾಡುತ್ತಿದ್ದೇವೆ. ಅದುವೇ “”congratulations ಬ್ರದರ್” ಎಂದರು.

ಮಾರ್ನಿಂಗ್ ಶೋ ಆಡಿಯನ್ಸ್ ನ ತಲೆಯಲ್ಲಿಟ್ಟಿಕೊಂಡು ಕಥೆ ಮಾಡಿದ್ದೇವೆ. ತಂಡದಲ್ಲಿರುವ ಪ್ರತಾಪ್ ಗಂಧರ್ವ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ.. ರೊಮ್ಯಾಂಟಿಕ್ ಜಾನರ್ ನ ಚಿತ್ರಕ್ಕೆ ಕಥೆ ಬರೆದಿದ್ದೇನೆ. ಪ್ರತಾಪ್, ರಕ್ಷಿತ್ ಮುಂತಾದವರು ಚಿತ್ರಕಥೆ ರಚಿಸಿದ್ದಾರೆ ಎಂದರು.
ನಿರ್ದೇಶಕ ಪ್ರತಾಪ್ ಗಂಧರ್ವ ಮಾತನಾಡಿ ಹಲವು ಧಾರಾವಾಹಿಗಳಿಗೆ ಕೆಲಸ ಮಾಡಿರುವ ನನಗೆ ನಿರ್ದೇಶಕನಾಗಿ ಇದು ಮೊದಲ ಚಿತ್ರ.ತಂಡದ ಅನೇಕರಿಗೆ ಇದು ಹೊಸ ಹೆಜ್ಜೆ. ಸಾಮಾನ್ಯವಾಗಿ ಹೊಸ ಹೆಜ್ಜೆ ಅಷ್ಟು ಸುಲಭವಾಗಿರುವುದಿಲ್ಲ. ಅದನ್ನು ನಮಗೆ ಹರಿ ಸಂತೋಷ್ ಸುಲಭ ಮಾಡಿಕೊಟ್ಟಿದ್ದಾರೆ. ಹರಿ ಸಂತೋಷ್ ಹೇಳಿದ ಹಾಗೆ ಈ ಚಿತ್ರದ ಕಥೆ, ಚಿತ್ರಕಥೆ ರಚನೆಗೆ ವರ್ಷದ ಸಮಯ ಹಿಡಿಸಿದೆ. ಕಥೆ ಪೇಪರ್ ನಲ್ಲಿ ಈಗಾಗಲೇ ಗದ್ದಿದೆ. ಪ್ರೇಕ್ಷಕರು ಗೆಲ್ಲಿಸುತ್ತಾರೆಂಬ ನಂಬಿಕೆ ಇದೆ. ನಾಳೆಯಿಂದಲೇ ಬೆಂಗಳೂರಿನಲ್ಲಿ ಚಿತ್ರೀಕರಣ ಆರಂಭವಾಗಲಿದೆ ಎಂದು ತಿಳಿಸಿದರು.

ಕಿರುತೆರೆ ಹಾಗೂ ನಾಟಕಗಳಲ್ಲಿ ನಟಿಸಿರುವ ನನಗೆ ಹಿರಿತೆರೆಯಲ್ಲಿ ನಾಯಕನಾಗಿ ಮೊದಲ ಚಿತ್ರ ಎಂದರು ನಾಯಕ ರಕ್ಷಿತ್ ನಾಗ್. ನಾಯಕಿ ಸಂಜನಾ, ನಟಿ ಅನೂಷ, ಸಂಗೀತ ನಿರ್ದೇಶಕ ಸೂರಜ್ ಜೋಯಿಸ್, ಛಾಯಾಗ್ರಾಹಕ ಗುರು, ಕಾರ್ಯಕಾರಿ ನಿರ್ಮಾಪಕ ಶ್ರೀಕಾಂತ್ ಮುಂತಾದವರು ಚಿತ್ರದ ಬಗ್ಗೆ ಮಾತನಾಡಿದರು.

ನಿರ್ಮಾಪಕರಾದ ಪ್ರಶಾಂತ್ ಕಲ್ಲೂರ್, ಹರೀಶ್ ಹಾಗೂ ರವಿಕುಮಾರ್ ಚಿತ್ರಕ್ಕೆ ಪ್ರೋತ್ಸಾಹ ನೀಡುವಂತೆ ಮನವಿ ಮಾಡಿದರು.