Muhurat for the second part of the film "Dasavarenya Sri Vijayadasaru" in the presence of dignitaries

“ದಾಸವರೇಣ್ಯ ಶ್ರೀವಿಜಯ ದಾಸರು” ಚಿತ್ರದ ಎರಡನೇ ಭಾಗಕ್ಕೆ ಗಣ್ಯರ ಸಮ್ಮುಖದಲ್ಲಿ ಮಹೂರ್ತ - CineNewsKannada.com

“ದಾಸವರೇಣ್ಯ ಶ್ರೀವಿಜಯ ದಾಸರು” ಚಿತ್ರದ ಎರಡನೇ ಭಾಗಕ್ಕೆ ಗಣ್ಯರ ಸಮ್ಮುಖದಲ್ಲಿ ಮಹೂರ್ತ

ದಾಸರ ಕುರಿತಾದ ಚಿತ್ರಗಳನ್ನು ನಿರ್ದೇಶನ ಮಾಡುವುದರಲ್ಲಿ ಸಿದ್ದಹಸ್ತರಾದ ನಿರ್ದೇಶಕ ಮಧುಸೂದನ್ ಹವಾಲ್ದಾರ್ ಅವರು ಇದೀಗ ಖ್ಯಾತ ಹರಿದಾಸರಾದ ಭೃಗು ಋಷಿಗಳ ಅಂಶ ಸಂಭೂತರಾದ ಶ್ರೀವಿಜಯದಾಸರ ಆರಾಧನಾ ಪರ್ವಕಾಲದಲ್ಲಿ “ದಾಸವರೇಣ್ಯ ಶ್ರೀ ವಿಜಯದಾಸರು ಭಾಗ 2” ಚಿತ್ರ ಕೈಗೆತ್ತಿಕೊಂಡಿದ್ದಾರೆ.

ಬಸವನಗುಡಿಯ ಶ್ರೀಕಾರಂಜಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ನಡೆದ ಮಹೂರ್ತ ಸಮಾರಂಭದಲ್ಲಿ ವಿದ್ವಾನ್ ಶ್ರೀಸತ್ಯಧ್ಯಾನಾಚಾರ್ಯ ಕಟ್ಟಿ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ತೇಜಸ್ವಿನಿ ಅನಂತ ಕುಮಾರ್ ಕ್ಯಾಮೆರಾ ಚಾಲನೆ ಮಾಡಿದರು.

ಇತ್ತೀಚೆಗಷ್ಟೇ ಟಿಟಿಡಿ ಸದಸ್ಯರಾಗಿ ಆಯ್ಕೆಯಾಗಿರುವ ನರೇಶ್ ಕುಮಾರ್ ಹಾಗೂ ಖ್ಯಾತ ಗಮಕ ಕಲಾವಿದರಾದ ಪ್ರಸನ್ನ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಮುಹೂರ್ತ

ನಿರ್ಮಾಪಕ ತ್ರಿವಿಕ್ರಮ ಜೋಷಿ ಮಾತನಾಡಿ ಎಸ್ ಪಿ ಜೆ ಮೂವೀಸ್ ಲಾಂಛನದಲ್ಲಿ ಚಿತ್ರ ನಿರ್ಮಿಸುತ್ತಿದ್ದು ವಿಜಯದಾಸರ ಪಾತ್ರ ನಿರ್ವಹಿಸುತ್ತಿದ್ದೇನೆ. ಭಾಗ ಒಂದನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ. ವಿಜಯದಾಸರ ಆರಾಧನಾ ಸಂದರ್ಭದಲ್ಲೇ ಎರಡನೇ ಭಾಗಕ್ಕೆ ಚಾಲನೆ ದೊರಕ್ಕಿದೆ. ನನ್ನದಲ್ಲದ ಕ್ಷೇತ್ರಕ್ಕೆ ನಿರ್ದೇಶಕ ಮಧುಸೂದನ್ ಹವಾಲ್ದಾರ್ ನನ್ನನ್ನು ಎಳೆದು ತಂದಿದ್ದಾರೆ. ಹರಿದಾಸರ ಕುರಿತಾಗಿ ಹತ್ತು ಸಿನಿಮಾಗಳನ್ನು ನಿರ್ಮಿಸುವ ಯೋಜನೆಯಿದೆ ಎಂದರು

ನವೆಂಬರ್ 12, ದೇಶ ಕಂಡ ಸಜ್ಜನ ರಾಜಕಾರಣಿ ದಿ.ಅನಂತಕುಮಾರ್ ನಮ್ಮನೆಲ್ಲಾ ಬಿಟ್ಟು ಹೋದ ದಿನ. ಅವರು ನನ್ನ ಗುರುಗಳು. ಅನಂತಕುಮಾರ್ ಕುರಿತಾದ ಚಿತ್ರ ಮಾಡುವ ಬಗ್ಗೆ ಚರ್ಚಿಸಿದ್ದೇನೆ. ಸದ್ಯದಲ್ಲೇ ಚಿತ್ರವನ್ನು ಆರಂಭಿಸುತ್ತೇವೆ. ನನ್ನ ತರಹ ಸಾಕಷ್ಟು ಅನಂತಕುಮಾರ್ ಅಭಿಮಾನಿಗಳು ನನ್ನೊಂದಿಗಿರುತ್ತಾರೆ. ಪೂಜ್ಯ ಆಚಾರ್ಯರು ಸಹ ಈ ಚಿತ್ರ ಆರಂಭಿಸುವಂತೆ ಹೇಳಿ ಆಶೀರ್ವದಿಸಿದ್ದಾರೆ ಎಂದು ಹೇಳಿದರು

ನಿರ್ದೇಶಕ ಮಧುಸೂದನ್ ಹವಾಲ್ದಾರ್ ಮಾತನಾಡಿ “ದಾಸವರೇಣ್ಯ ಶ್ರೀ ವಿಜಯದಾಸರು ಭಾಗ 2” ಚಿತ್ರಕ್ಕೆ ಚಾಲನೆ ನೀಡಿದ ಗಣ್ಯರಿಗೆ ಧನ್ಯವಾದ ತಿಳಿಸುತ್ತೇನೆ. ಇಂದಿನಿಂದ ಈ ಚಿತ್ರದ ಚಿತ್ರೀಕರಣ ಆರಂಭವಾಗಿದೆ. ನಾಲ್ಕು ತಿಂಗಳಲ್ಲಿ ಚಿತ್ರ ಸಿದ್ದವಾಗಲಿದೆ. ಹಂಪೆ, ಆನೆಗುಂದಿ, ಹುಲಗಿ, ಶ್ರೀರಂಗಪಟ್ಟಣ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ಜೆ.ಎಂ.ಪ್ರಹ್ಲಾದ್ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಒಂಭತ್ತು ಹಾಡುಗಳು ಚಿತ್ರದಲ್ಲಿರುತ್ತದೆ. ತ್ರಿವಿಕ್ರಮ ಜೋಶಿ, ಪ್ರಭಂಜನ ದೇಶಪಾಂಡೆ, ಶರತ್ ಜೋಶಿ, ಶ್ರೀಲತ ಬಾಗೇವಾಡಿ ಮುಂತಾದವರು ಚಿತ್ರದ ತಾರಾಬಳಗದಲ್ಲಿರುತ್ತಾರೆ ಎಂದು ತಿಳಿಸಿದರು.

ಚಿತ್ರಕಥೆ ಹಾಗೂ ಸಂಭಾಷಣೆ ಕುರಿತು ಜೆ.ಎಂ.ಪ್ರಹ್ಲಾದ್ ಮಾತನಾಡಿದರು.

ಗೋಪಾಲದಾಸರ ಪಾತ್ರದಲ್ಲಿ ಕಾಣಿಕೊಳ್ಳುತ್ತಿರುವುದಾಗಿ ಪ್ರಭಂಜನ ದೇಶಪಾಂಡೆ ಹಾಗು ವಿಜಯದಾಸರ ಪತ್ನಿ ಹರಳಮ್ಮನವರ ಪಾತ್ರ ನಿರ್ವಹಿಸುತ್ತಿರುವುದಾಗಿ ನಟಿ ಶ್ರೀಲತ ಬಾಗೇವಾಡಿ ತಮ್ಮ ಪಾತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin