Muhurta for the film 'Matka'; Kannada actor Kishore acting

‘ಮಟ್ಕಾ’ ಚಿತ್ರಕ್ಕೆ ಮುಹೂರ್ತ; ಕನ್ನಡದ ನಟ ಕಿಶೋರ್ ನಟನೆ - CineNewsKannada.com

‘ಮಟ್ಕಾ’ ಚಿತ್ರಕ್ಕೆ ಮುಹೂರ್ತ; ಕನ್ನಡದ ನಟ ಕಿಶೋರ್ ನಟನೆ

ಮೆಗಾಸ್ಟಾರ್ ಚಿರಂಜೀವಿ ಸಹೋದರ ನಾಗಬಾಬು ಸುಪುತ್ರ ವರುಣ್ ತೇಜ್ ನಟನೆಯ 14ನೇ ಸಿನಿಮಾದ ಮುಹೂರ್ತ ಸಮಾರಂಭ ಹೈದರಾಬಾದ್ ನಲ್ಲಿಂದು ಅದ್ಧೂರಿಯಾಗಿ ನೆರವೇರಿದೆ. ನಿರ್ದೇಶಕ ಮಾರುತಿ ಕ್ಯಾಮೆರಾಗೆ ಚಾಲನೆ ಕೊಟ್ಟಿದ್ದಾರೆ.

ನಿರ್ಮಾಪಕ ಅಲ್ಲು ಅರವಿಂದ್ ಕ್ಲ್ಯಾಪ್ ಮಾಡಿದರು. ಹರೀಶ್ ಶಂಕರ್ ಮಟ್ಕಾ ಸಿನಿಮಾದ ಪೆÇೀಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ

ವರುಣ್ ತೇಜ್ ನಟನೆಯ 14ನೇ ಸಿನಿಮಾಗೆ ಮಟ್ಕಾ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಇದು ಜೂಟಾಟದ ಕಥೆಯಾಧಾರಿತ ಸಿನಿಮಾ. 1958ರಿಂದ 82ರ ಅವಧಿಯಲ್ಲಿ ವೈಜಾಗ್ ನಲ್ಲಿ ನಡೆದ ಸತ್ಯ ಘಟನೆಯಾಧಾರಿತ ಚಿತ್ರವಾಗಿದೆ. ಬರೋಬ್ಬರಿ 24 ವರ್ಷದ ಹಿಂದಿನ ಕಥೆಯಾಧಾರಿತ ಸಿನಿಮಾವಾಗಿರುವ ಮಟ್ಕಾದಲ್ಲಿ ವರುಣ್ ತೇಜ್ ನಾಲ್ಕು ವಿಭಿನ್ನ ಶೇಡ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೆಗಾ ಪ್ರಿನ್ಸ್ ಸಿನಿಕರಿಯರ್ ನ ಅತಿ ಹೆಚ್ಚು ಬಜೆಟ್‍ನ ಚಿತ್ರ ಎಂಬ ನಿರೀಕ್ಷೆ ಹುಟ್ಟಿಸಿದೆ.

ಫಲಾಸ ಸಿನಿಮಾ ಖ್ಯಾತಿಯ ಕರುಣ ಕುಮಾರ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮಟ್ಕಾ ಸಿನಿಮಾದಲ್ಲಿ ನಾಯಕಿಯಾಗಿ ಮೀನಾಕ್ಷಿ ಚೌಧರಿ ನಟಿಸುತ್ತಿದ್ದು, ನವೀನ್ ಚಂದ್ರ, ಕನ್ನಡದ ಕಿಶೋರ್, ಅಜಯ್ ಘೋಷ್, ಮೈಮ್ ಗೋಪಿ, ರೂಪಲಕ್ಷ್ಮಿ, ವಿಜಯರಾಮ ರಾಜು, ಜಗದೀಶ್, ರಾಜ್ ತಿರಂದಾಸ್ ಸೇರಿದಂತೆ ಹಲವರು ನಟಿಸುತ್ತಿದ್ದಾರೆ. ಇನ್ನು, ಮಟ್ಕಾದ ಸ್ಪೆಷಲ್ ನಂಬರ್ ಗೆ ಬಾಲಿವುಡ್ ಬ್ಯೂಟಿ ನೋರಾ ಫತೇಹಿ ಮೆಗಾ ಪ್ರಿನ್ಸ್ ವರುಣ್ ತೇಜ್ ಜೊತೆ ಸೊಂಟ ಬಳುಕಿಸಲಿದ್ದಾರೆ.

ವೈರಾ ಎಂಟರ್‍ಟೈನ್‍ಮೆಂಟ್ಸ್ ಬ್ಯಾನರ್‍ನಡಿಯಲ್ಲಿ ಮೋಹನ್ ಚೆರುಕುರಿ ಮತ್ತು ಡಾ ವಿಜೇಂದರ್ ರೆಡ್ಡಿ ಟೀಗಾಲ ಅದ್ಧೂರಿಯಾಗಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಜಿ ವಿ ಪ್ರಕಾಶ್ ಕುಮಾರ್ ಸಂಗೀತ ನೀಡುತ್ತಿದ್ದು, ಪ್ರಿಯ ಸೇಠ್ ಛಾಯಾಗ್ರಹಣ, ಕಾರ್ತಿಕ್ ಶ್ರೀನಿವಾಸ್ ಆರ್ ಸಂಕಲನ, ಸುರೇಶ್ ಕಲಾ ನಿರ್ದೇಶನವಿದೆ. ಪ್ಯಾನ್ ಇಂಡಿಯಾ ಸಿನಿಮಾವಾಗಿರುವ ಮಟ್ಕಾ ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ತಯಾರಾಗುತ್ತಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin