Muhurta for the real-life film "Boss": Actor Tanush Shivanna in a new avatar
ನೈಜಘಟನೆ “ಬಾಸ್” ಚಿತ್ರಕ್ಕೆ ಮುಹೂರ್ತ : ನಟ ತನುಷ್ ಶಿವಣ್ಣ ಹೊಸ ಅವತಾರ
ಇತ್ತೀಚೆಗೆ ತೆರೆಕಂಡ ತನುಷ್ ಶಿವಣ್ಣ ಅಭಿನಯದ “ನಟ್ವರ್ ಲಾಲ್” ಚಿತ್ರದ ಯಶಸ್ಸಿನ ನಂತರ ತನುಷ್ ಶಿವಣ್ಣ ನಾಯಕನಾಗಿ ನಟಿಸುತ್ತಿರುವ “ಬಾಸ್” ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಸರಳವಾಗಿ ನೆರವೇರಿತು.
ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿದ್ದರು. ಇದೇ ತಿಂಗಳ 20ರಿಂದ ಬೆಂಗಳೂರಿನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ.
ಸಿರಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಅನಿಲ್ ಪಿ ಚಿತ್ರ ನಿರ್ಮಿಸುತ್ತಿದ್ದು, “ನಟ್ವರ್ ಲಾಲ್” ಚಿತ್ರದ ನಿರ್ದೇಶಕ ವಿ.ಲವ ಅವರೆ ನಿರ್ದೇಶನ ಮಾಡುತ್ತಿದ್ದಾರೆ.
“ವಿಕ್ರಾಂತ್ ರೋಣ” ಖ್ಯಾತಿಯ ವಿಲಿಯಂ ಡೇವಿಡ್ ಛಾಯಾಗ್ರಹಣ ಹಾಗೂ ಡೇವಿ ಸುರೇಶ್ ಸಂಗೀತ ನಿರ್ದೇಶನವಿರುವ “ಬಾಸ್” ಚಿತ್ರಕ್ಕೆ “ಸತ್ಯಮೇವ ಜಯತೇ” ಎಂಬ ಅಡಿಬರಹವಿದೆ. ಇದೊಂದು ಬೆಂಗಳೂರಿನಲ್ಲಿ ನಡೆದ ನೈಜಘಟನೆ ಆಧರಿಸಿದ ಚಿತ್ರವಾಗಿದೆ.