ಗಣರಾಜ್ಯೋತ್ಸವಕ್ಕೆ ಬಹುತಾರಾಗಣದ “ಫಾರೆಸ್ಟ್” ಚಿತ್ರ ಬಿಡುಗಡೆ
ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ, ಮಲ್ಟಿ ಸ್ಟಾರರ್ ಸಿನಿಮಾ “ಫಾರೆಸ್ಟ್”. ಶೀರ್ಷಿಕೆ, ತಾರಾಗಣ, ಕನ್ಸೆಪ್ಟ್, ಟೀಸರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಜನರ ಮನಸ್ಸಿಗೆ ಹತ್ತಿರವಾಗಿರುವ ಬಹು ನಿರೀಕ್ಷಿತ “ಫಾರೆಸ್ಟ್” ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.
2025 ರ ಜನವರಿ 24 ರಂದು ಚಿತ್ರ ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಪೆÇೀಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ.
ಸಮಾಜಕ್ಕೆ ಸದಭಿರುಚಿ ಚಿತ್ರ ನೀಡುವ ಹಂಬಲ ಹೊಂದಿರುವ ಎನ್ ಎಂ ಕಾಂತರಾಜ್ ಎನ್ ಎಂ ಕೆ ಸಿನಿಮಾಸ್ ಬ್ಯಾನರ್ ನಲ್ಲಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆ ಮಾಡುವ ಸಿದ್ದತೆ ನಡೆಸುತ್ತಿದ್ದಾರೆ.
ಕಾಡಿನಲ್ಲೇ ನಡೆಯುವ ಅಡ್ವೆಂಚರಸ್ ಕಾಮಿಡಿ ಕಥೆಯನ್ನು ನಿರ್ದೇಶಕ ಚಂದ್ರಮೋಹನ್ ಚಿತ್ರದ ಮೂಲಕ ವಿಭಿನ್ನವಾಗಿ ಹೇಳುವ ಪ್ರಯತ್ನ ಮಾಡಿದ್ದಾರೆ. ಅಭಿನಯದ ಮೂಲಕ ಜನಮನಸೂರೆಗೊಂಡಿರವ ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್ ಹಾಗೂ ರಂಗಾಯಣ ರಘು ಅವರಂಥ ಸ್ಟಾರ್ ಕಲಾವಿದರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಮಲ್ಟಿ ಸ್ಟಾರರ್ ಚಿತ್ರ ಇದಾಗಿದೆ.
ಸತ್ಯಶೌರ್ಯ ಸಾಗರ್ ಹಾಗೂ ಚಂದ್ರಮೋಹನ್ ಚಿತ್ರಕ್ಕೆ ಕಥೆ, ಚಿತ್ರಕಥೆ ರಚಿಸಿದ್ದಾರೆ. ಸತ್ಯಶೌರ್ಯ ಸಾಗರ್ ಅವರೆ ಸಂಭಾಷಣೆಯನ್ನೂ ಬರೆದಿದ್ದಾರೆ. ಧರ್ಮವಿಶ್ ಸಂಗೀತ ನಿರ್ದೇಶನ, ಆನಂದ್‍ರಾಜಾ ವಿಕ್ರಮ್ ಹಿನ್ನೆಲೆ ಸಂಗೀತ, ರವಿಕುಮಾರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಅಮರ್ ಕಲಾ ನಿರ್ದೇಶನ ಹಾಗೂ ಡಾ.ರವಿವರ್ಮ ಸಾಹಸ ನಿರ್ದೇಶನ ಚಿತ್ರಕ್ಕಿದೆ.
ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು, ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ಅವಿನಾಶ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಾಣಂಜೆ, ಸೂರಜ್ ಪಾಪ್ಸ್, ಸುನೀಲ್‍ಕುಮಾರ್ ಮುಂತಾದ ಹಿರಿಯ ಹಾಗೂ ಕಿರಿಯ ಕಲಾವಿದರು “ಫಾರೆಸ್ಟ್” ಚಿತ್ರದಲ್ಲಿ ಅಭಿನಯಿಸಿದ್ದಾರೆ.