Music director MM Keeravani has sung for the film "Rangasamudra".

“ರಂಗಸಮುದ್ರ” ಚಿತ್ರಕ್ಕೆ ಹಾಡಿದ ಸಂಗೀತ ನಿರ್ದೇಶಕ ಎಂ.ಎಂ ಕೀರವಾಣಿ - CineNewsKannada.com

“ರಂಗಸಮುದ್ರ” ಚಿತ್ರಕ್ಕೆ ಹಾಡಿದ ಸಂಗೀತ ನಿರ್ದೇಶಕ ಎಂ.ಎಂ ಕೀರವಾಣಿ

ಹೊಸ ವರ್ಷದ ಆರಂಭದಲ್ಲಿ ಬಹು ನಿರೀಕ್ಷಿತ ರೆಟ್ರೋ ಚಿತ್ರ “ರಂಗಸಮುದ್ರ” ಬಿಡುಗಡೆಗೆ ಸಿದ್ದವಾಗಿದೆ. ಈಗಾಗಲೆ ಚಿತ್ರದ ಮೂರು ಹಾಡುಗಳು ಜಂಕಾರ್ ಮ್ಯೂಸಿಕ್ ಯುಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಗೊಂಡು ಸಂಗೀತ ಪ್ರಿಯರ ಮನಸ್ಸು ಗೆದ್ದಿವೆ..

ದೇಶದ ಮುಂಚೂಣಿ ಸಂಗೀತ ನಿರ್ದೇಶ ಪದ್ಮಶ್ರೀ, ರಾಷ್ಟ್ರ ಪ್ರಶಸ್ತಿ ಹಾಗೂ ವಿಶ್ವದ ಅತ್ಯಂತ ಪ್ರಮುಖ ಪ್ರಶಸ್ತಿಯಾದ ಆಸ್ಕರ್ ವಿಜೇತ ಬಾಹುಬಲಿ ಹಾಗೂ ಆರ್.ಆರ್.ಆರ್ ಚಿತ್ರಗಳ ಸಂಗೀತ ಮಾಂತ್ರಿಕ ನಿರ್ದೇಶಕ ಎಮ್.ಎಮ್ ಕೀರವಾಣಿ ಅವರಿಂದ ಚಿತ್ರದಲ್ಲಿ ತಿರುವು ಪಡೆಯುವ ಅದ್ಭುತ ಗೀತೆಯನ್ನು ಹಾಡಿಸಿ ಬಿಡುಗಡೆಗೆಗೊಳಿಸಿದೆ.

ಎಮ್.ಎಮ್ ಕೀರವಾಣಿ ಅವರು ಹಲವು ದಶಕಗಳ ನಂತರ “ರಂಗಸಮುದ್ರ” ಚಿತ್ರದ ಮೂಲಕ ಕನ್ನಡಕ್ಕೆ ಮರಳಿ ಗೀತೆಯೊಂದಕ್ಕೆ ದನಿಯಾಗಿರುವುದು ಚಿತ್ರತಂಡಕ್ಕೆ ಆತ್ಮವಿಶ್ವಾಸ ಹೆಚ್ಚಿಸಿದಂತಾಗಿದೆ. ಅರ್ಥಾತ್ ಬಾಹುಬಲಿ ಸಂಗೀತ ಮಾಂತ್ರಿಕನ ಬಲ ಸಿಕ್ಕಾಂತಾಗಿದೆ ಎನ್ನುವುದು ಈಗಾಗಲೆ ಗಾಂಧಿನಗರದಲ್ಲಿ ಪ್ರಸ್ತುತ ಪರಸ್ಪರ ಪಿಸುಮಾತಗುತ್ತಿರುವ ಸುದ್ದಿ.

ರಂಗಸಮುದ್ರ ಚಿತ್ರದ ನಿರ್ದೇಶಕ ರಾಜ್ ಕುಮಾರ್ ಅಸ್ಕಿ , ಸಾಹಿತಿ ವಾಗೀಶ್ ಚನ್ನಗಿರಿ ಹಾಗೂ ಸಂಗೀತ ನಿರ್ದೇಶಕ ದೇಸಿ ಮೋಹನ್ ರವರು ಈ ಒಂದು ಗೀತೆಗೆ ಎಮ್ ಎಮ್ ಕೀರಾವಣಿಯವರೆ ದನಿಯಾಗಬೇಕು ಎಂದು ಚಿತ್ರದ ನಿರ್ಮಾಪಕ ಹೊಯ್ಸಳ ಕೊಣನೂರು ಅವರ ಬಳಿ ಹೇಳಿಕೊಂಡಿದ್ದರಂತೆ. ಚಿತ್ರತಂಡದ ಆಸೆಯಂತೆ ನಿರ್ಮಾಪಕರು ಕೀರವಾಣಿ ಅವರನ್ನು ಸಂಪರ್ಕಿಸಿದಾಗ ಪ್ರೀತಿಯಿಂದ ಹೈದಾರಬಾದ್ ಗೆ ಆಹ್ವಾನಿಸಿದರು ಎಂದಿದ್ದಾರೆ.

ಸಾಂಗ್ ಅನ್ನು ಒಮ್ಮೆ ಕೇಳಿದ ನಂತರ, ನಾನು ಸೀನಿಯರ್ ಎಂಬುದನ್ನು ಬದಿಗಿಟ್ಟು , ಚಿತ್ರದ ಕಥೆ ಹೇಳಿ ಎಂದು ನಗುತ್ತ ಡೈರೆಕ್ಟರ್ ಗೆ ಹೇಳಿದ್ದಾರೆ ಕಥೆ ಕೇಳಿದ 5 ನಿಮಿಷಕ್ಕೆ ಹಾಡಲು ಒಪ್ಪಿದರು ಎನ್ನುತ್ತಾರೆ ನಿರ್ದೇಶಕ ರಾಜಕುಮಾರ್ ಅಸ್ಕಿ..

ಇನ್ನು ಹಾಡಲು ಸಿದ್ದರಾಗುವಾಗ ಗೀತೆಯನ್ನು ಕನ್ನಡದಲ್ಲೆ ಬರೆದುಕೊಂಡು, ಬಹಳ ಸುಮಧುರ ವಾಗಿ ಹಾಡಿ ಕನ್ನಡ ಭಾಷೆ ಮೇಲಿರುವ ಅಭಿಮಾನವನ್ನು ಸಾಬೀತುಪಡಿಸಿರುವುದು ಹೆಮ್ಮೆಯ ಸಂಗತಿ..

ಸರಿಸುಮಾರು ಅರ್ಧ ದಿನ ಚಿತ್ರತಂಡದೊಂದಿಗೆ ಮಾತನಾಡುತ್ತ ಕುಳಿತ ಎಮ್ ಎಮ್ ಕೀರವಾಣಿಯವರು, ಅವರ ಮತ್ತು ಕನ್ನಡ ನಂಟು ಹಾಗೂ ಬೆಂಗಳೂರಿನಲ್ಲಿ ಒಂದು ಚಿಕ್ಕ ರೂಮಿನಲ್ಲಿ ವಾಸ ಮಾಡುತ್ತಿದ್ದದ್ದು, ಚಾಮುಂಡೇಶ್ವರಿ ಸ್ಟುಡಿಯೋ ಇಂದ ತನ್ನ ಸಿನಿಪಯಣ ಶುರುವಾಗಿದ್ದು. ನನ್ನ ಆಪ್ತ ಸ್ನೇಹಿತ ದೊಡ್ಡಣ್ಣ ಎನ್ನುತ್ತಾ ಹಲವಾರು ವಿಷಯಗಳನ್ನು ಹಂಚಿಕೊಂಡಿದ್ದಾರೆ.

ಚಿತ್ರದ ಶೂಟಿಂಗ್ ಬಗ್ಗೆ ಮಾತನಾಡುತ್ತಾ ಅಪ್ಪುರವರು ನಟಿಸಬೇಕಿದ್ದ ಸಿನಿಮಾ ರಂಗಸಮುದ್ರ ಎಂದು ತಿಳಿದಾಗ ಭಾವುಕರಾಗಿ, ಅಪ್ಪು ಒಬ್ಬ ಅಜಾತಶತ್ರು ಈಗ ನಕ್ಷತ್ರವಾಗಿ ಮಿನುಗುತ್ತಿದ್ದಾರೆ, ಒಬ್ಬರು ಸತ್ತರೆ ಶತ್ರುಗು ಕೂಡ ಕಣ್ಣಿರು ಬರಬೇಕು ಅದರಂತೆಯೆ ಈ ಸಾಂಗ್ ನೋಡಿದ ಮೇಲೆ ಎಂತಹ ಕಲ್ಲು ಮನಸ್ಸು ಕೂಡ ಕರಗುತ್ತೆ ಎಂದಿದ್ದಾರೆ..

ಚಿತ್ರವನ್ನು ನಿರ್ಮಾಣ ಮಾಡಿದ ಹೊಯ್ಸಳರವರ ಹೆಗಲ ಮೇಲೆ ಕೈ ಹಾಕಿ ಆಭಯ ನೀಡುವುದರ ಜೊತೆಗೆ, ಕಥೆ ರಚಿಸಿದ ಡೈರೆಕ್ಟರ್ ರಾಜ್ ಕುಮಾರ್ ಅಸ್ಕಿ ಮತ್ತು ಅತ್ಯುತ್ತಮ ಸಾಹಿತ್ಯ ನೀಡಿರುವ ವಾಗೀಶ್ ಚನ್ನಗಿರಿ ಅವರ ಬೆನ್ನು ತಟ್ಟಿ ರಾಜಮೌಳಿಯೊಂದಿಗೆ ನಿಮ್ಮ ಸಿನಿಮಾ ನೋಡುತ್ತೇನೆ ಎಂದು, ಅತಿಥಿಗಳಿಗೆ ಅವರೇ ಎಲ್ಲಾ ರೀತಿಯಲ್ಲೂ ಸತ್ಕರಿಸಿ ಬೀಳ್ಕೊಟ್ಟರು ಎನ್ನುತ್ತಾರೆ ಚಿತ್ರತಂಡದವರು…

ರಂಗಸಮುದ್ರ ರಾಘವೇಂದ್ರ ರಾಜ್ ಕುಮಾರ್, ರಂಗಾಯಣ ರಘು, ಸಂಪತ್ ರಾಜ್,ದಿವಂಗತ ಮೋಹನ್ ಜುನೇಜಾ, ಮೂಗು ಸುರೇಶ್, ಗುರುರಾಜ್ ಹೊಸಕೋಟೆ,,ಉಗ್ರಂ ಮಂಜು,, ಕಾರ್ತಿಕ್ ರಾವ್, ದಿವ್ಯ ಗೌಡ,,ಮಹೇಂದ್ರ, ಸ್ಕಂದ ಅವರ ತಾರಾ ಬಳಗವನ್ನು ಹೊಂದಿದೆ..

ಚಿತ್ರದಲ್ಲಿರುವ 4 ಗೀತೆಗಳಿಗೆ ಖ್ಯಾತ ಗಾಯಕರಾದ ಕೈಲಾಶ್ ಖೇರ್, ವಿಜಯ್ ಪ್ರಕಾಶ್, ಸಂಜಿತ್ ಹೆಗ್ಡೆ,ದೇಸಿ ಮೋಹನ್ ಅವರು ದನಿಯಾಗಿದ್ದರೆ, ಚಿತ್ರದಲ್ಲಿ ಎರಡು ಬಿಟ್ ಗಳಿಗೆ ನವೀನ್ ಸಜ್ಜು ರವರು ದನಿಯಾಗಿದ್ದಾರೆ.

ರೆಟ್ರೋ ಕಥಾ ಹಂದರದ ಈ ಸಿನಿಮಾ, ಪ್ರೇಕ್ಷಕರ ಮನಸ್ಸನ್ನು ಗೆಲ್ಲಲು ಎಲ್ಲಾ ರೀತಿಯ ಸಿದ್ದತೆಯೊಂದಿಗೆ ಜನವರಿ 12ರಂದು ರಾಜ್ಯದಾದ್ಯಂತ ಬಿಡುಗಡೆಗೆ ಸಿದ್ದವಾಗಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin