Music maestro Ravi Basrur's son Pawan entered the world of color through Click

ಸಂಗೀತ ಮಾಂತ್ರಿಕ ರವಿ ಬಸ್ರೂರು ಪುತ್ರ ಪವನ್ “ಕ್ಲಿಕ್” ಮೂಲಕ ಬಣ್ಣಲೋಕಕ್ಕೆ ಪ್ರವೇಶ - CineNewsKannada.com

ಸಂಗೀತ ಮಾಂತ್ರಿಕ ರವಿ ಬಸ್ರೂರು ಪುತ್ರ ಪವನ್ “ಕ್ಲಿಕ್” ಮೂಲಕ ಬಣ್ಣಲೋಕಕ್ಕೆ ಪ್ರವೇಶ

ಬಣ್ಣದಲೋಕಕ್ಕೆ ಸಂಗೀತ ಮಾಂತ್ರಿಕ ರವಿ ಬಸ್ರೂರು ಪುತ್ರ ಮಾಸ್ಟರ್ ಪವನ್ ಬಸ್ರೂರ್ ‘ಕ್ಲಿಕ್’ ಚಿತ್ರದ ಮೂಲಕ ಬಣ್ಣ ಹಚ್ಚಿದ್ದು ಅಪ್ಪ ಸಂಗೀತದಲ್ಲಿ ಸೈ ಎನಿಸಿಕೊಂಡರೆ ಪುತ್ರ ನಟನೆಯಲ್ಲಿ ಸಾಧನೆ ಮಾಡುವ ತವಕ ಹೊಂದಿದ್ದಾರೆ.

ಉಗ್ರಂ, ಮಫ್ತಿ, ಕೆಜಿಎಫ್ ನಂತಹ ಸೂಪರ್ ಹಿಟ್ ಸಿನಿಮಾಗಳಿಗೆ ಸಂಗೀತ ನೀಡಿರುವ ರವಿ ಬಸ್ರೂರ್ ಗಾಯಕರಾಗಿಯೂ, ನಿರ್ಮಾಪಕರಾಗಿಯೂ ಸ್ಯಾಂಡಲ್‍ವುಡ್‍ಗೆ ಚಿರಪರಿತ.. ಪರಭಾಷೆಯ ಚಿತ್ರಗಳಿಗೂ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡುತ್ತಿರುವ ರವಿ ಬಸ್ರೂರ್ ಪುತ್ರ ಮಾಸ್ಟರ್ ಪವನ್ ಬಸ್ರೂರು ಸಿನಿಮಾ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟಿದ್ದಾರೆ.

ಐಟಿ ಉದ್ಯೋಗಿಯಾಗಿರುವ ಶಶಿಕಿರಣ್ ಸಿನಿಮಾ ಮೇಲಿನ ಅಪಾರ ಪ್ರೀತಿಯಿಂದ ತಮ್ಮದೇ ಶರಣ್ಯ ಫಿಲ್ಮಂಸ್ ನಡಿ ಕ್ಲಿಕ್ ಎಂಬ ಹೊಸ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಈ ಚಿತ್ರದ ಮೂಲಕ ರವಿ ಬಸ್ರೂರ್ ಮಗ ಪವನ್ ಬಸ್ರೂರ್ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡಿದ್ದಾರೆ. ಮಾಸ್ಟರ್ ಪವನ್ ಜೊತೆಯಲ್ಲಿ ಮತ್ತೊಬ್ಬ ಯುವ ನಟ ಕಾರ್ತಿಕ್ ಕೂಡ ಮುಖ್ಯಭೂಮಿಕೆಯಲ್ಲಿ ನಟಿಸ್ತಿದ್ದು, ಉಳಿದಂತೆ ಚಂದ್ರಕಲಾಮೋಹನ್, ರಚನಾ ದಶರತ್, ಸಂಜು ಬಸಯ್ಯ, ಸಿಲ್ಲಿಲಲ್ಲಿ ಆನಂದ್, ಸುಮನ್ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ.

ನಮ್ಮಲ್ಲಿ ಹೆಚ್ಚಿನ ಪಾಲು ಪೋಷಕರು ಮಕ್ಕಳು ಡಾಕ್ಟರ್-ಇಂಜಿನಿಯರ್ ಆಗಬೇಕು ಎಂದು ಬಯಸುತ್ತಾರೆ. ಆದರೆ ಈ ಎರಡು ವಲಯದ ಹೊರತಾಗಿ ನಮ್ಮ ಮುಂದೆ ತುಂಬಾ ಆಯ್ಕೆಗಳಿವೆ. ಮಕ್ಕಳ ಇಚ್ಛೆಗೆ ತಕ್ಕಂತೆ ಓದಲು, ಆಯ್ಕೆ ಮಾಡಲು ಬಿಡಬೇಕು ಎಂಬ ಶಿಕ್ಷಣದ ಕಥೆ ಸುತ್ತ ಸಾಗುವ ಈ ಚಿತ್ರಕ್ಕೆ ಯುವ ನಿರ್ದೇಶಕ ಶಶಿಕುಮಾರ್ ಆಕ್ಷನ್ ಕಟ್ ಹೇಳಿದ್ದಾರೆ.ಸಹ ನಿರ್ದೇಶಕ ಆಗಿ ವೀರು ಸಾಥ್ ಕೊಟ್ಟಿದ್ದಾರೆ.

ಚಿತ್ರವನ್ನು ಬೆಂಗಳೂರು, ಬಿಡದಿ ರಾಮನಗರ ಕುಂದಾಪುರ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಈಗಾಗಲೇ ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಕ್ಲಿಕ್ ಸಿನಿಮಾಗೆ ಆಕಾಶ್ ಪರ್ವ-ವಿಶ್ವಾಸ್ ಕೌಶಿಕ್ ಸಂಗೀತ ನಿರ್ದೇಶನ, ಜೀವನ್ ಗೌಡ ಛಾಯಾಗ್ರಹಣ, ವಿನಯ್ ಕುಮಾರ್ ಸಂಕಲನವಿದೆ. ಶೀಘ್ರದಲ್ಲಿಯೇ ಸಿನಿಮಾ ತೆರೆಗೆ ತರುಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಪೂರ್ತಿಯಾಗಿ ಓದಿ

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin