Naanu Adu Mattu Saroja trailer released

ಟ್ರೇಲರ್ ಮೂಲಕ ಸದ್ದು ಮಾಡುತ್ತಿದೆ “ನಾನು,ಅದು ಮತ್ತು ಸರೋಜ” - CineNewsKannada.com

ಟ್ರೇಲರ್ ಮೂಲಕ ಸದ್ದು ಮಾಡುತ್ತಿದೆ “ನಾನು,ಅದು ಮತ್ತು ಸರೋಜ”

ಲೂಸ್ ಮಾದ ಯೋಗಿ ಅಭಿನಯದ ಈ ಚಿತ್ರ ವರ್ಷಾಂತ್ಯಕ್ಕೆ ತೆರೆಗೆ.

ಕನ್ನಡದಲ್ಲಿ ಈಗ ಕಂಟೆಂಟ್ ಒರಿಯಂಟೆಡ್ ಚಿತ್ರಗಳನ್ನು ಜನ ಹೆಚ್ಚಾಗಿ ಮುಚ್ಚಿಕೊಳ್ಳುತ್ತಿದ್ದಾರೆ. ಅಂತಹುದೇ ವಿಭಿನ್ನ ಕಥಾಹಂದರ ಹೊಂದಿರುವ, ಲೂಸ್ ಮಾದ ಯೋಗಿ ನಾಯಕರಾಗಿ ನಟಿಸಿರುವ “ನಾನು, ಅದು ಮತ್ತು ಸರೋಜ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಡಿಸೆಂಬರ್ 30ರಂದು ಚಿತ್ರ ತೆರೆ ಕಾಣುತ್ತಿದೆ. ಈ ವಿಷಯವನ್ನು ಚಿತ್ರತಂಡ ಮಾಧ್ಯಮದ ಮುಂದೆ ಹಂಚಿಕೊಂಡರು.

ನಾನು ಈ ಹಿಂದೆ “ಮಡಮಕ್ಕಿ” ಚಿತ್ರ ನಿರ್ದೇಶಿಸಿದ್ದೆ‌. ಇದು ಎರಡನೇ ಚಿತ್ರ. “ನಾನು, ಅದು ಮತ್ತು ಸರೋಜ” ಚಿತ್ರದ ಕಥೆ ಮೂರು ಪ್ರಮುಖಪಾತ್ರಗಳ ಸುತ್ತ ಸಾಗುತ್ತದೆ. ಲೂಸ್ ಮಾದ ಯೋಗಿ, ಹಿರಿಯ ನಟ ದತ್ತಣ್ಣ ಹಾಗೂ ಅಪೂರ್ವ ಭಾರದ್ವಾಜ್ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅದು ಎಂಬುದು ಕೂಡ ಚಿತ್ರದಲ್ಲಿ ಮುಖ್ಯಪಾತ್ರ. ಅದನ್ನು ಚಿತ್ರದಲ್ಲೇ ನೋಡಬೇಕು. ನಿರ್ಮಾಪಕಿ ಪೂಜಾ ವಸಂತಕುಮಾರ್ ಅವರಿಗೆ ಹಾಗೂ ಇಡೀ ನನ್ನ ತಂಡಕ್ಕೆ ಧನ್ಯವಾದ ಎಂದರು ನಿರ್ದೇಶಕ ವಿನಯ್ ಪ್ರೀತಮ್.

ನನಗೆ ನಿರ್ದೇಶಕ ವಿನಯ್ ಕಥೆ ಹೇಳಿದಾಗ ತುಂಬಾ ಇಷ್ಟವಾಯಿತು. ತಮಿಳಿನಲ್ಲಿ ವಿಜಯ್ ಸೇತುಪತಿ ಅವರ ಸಿನಿಮಾವೊಂದನ್ನು ನೋಡಿದ್ದೆ. ಆಗಿನಿಂದ ನನಗೂ ಆ ರೀತಿಯ ಪಾತ್ರ ಮಾಡಬೇಕೆಂಬ ಆಸೆಯಿತ್ತು. ನನಗೆ ಒಂದೇ ತರಹದ ಸಿನಿಮಾ ಮಾಡುವುದಕ್ಕಿಂತ ವಿಭಿನ್ನ ಕಥೆಯ ಸಿನಿಮಾಗಳಲ್ಲಿ ನಟಿಸಲು ಇಷ್ಟಪಡುತ್ತೇನೆ. ಈ ವರ್ಷದ ಕೊನೆಗೆ ನಮ್ಮ ಸಿನಿಮಾ ಬಿಡುಗಡೆಯಾಗುತ್ತಿದೆ. ಪ್ರೋತ್ಸಾಹಿಸಿ ಎಂದರು ನಾಯಕ ಲೂಸ್ ಮಾದ ಯೋಗಿ.

ನನ್ನದು ಈ ಚಿತ್ರದಲ್ಲಿ ಲೈಂಗಿಕ ಕಾರ್ಯಕರ್ತೆಯ ಪಾತ್ರ. ಸಾಮಾನ್ಯವಾಗಿ ಬೇರೆ ನಟಿಯರು‌ ಈ ಪಾತ್ರ ಮಾಡಲು ಮುಜುಗರ ಪಡುತ್ತಾರೆ. ನನಗೂ ಮೊದಲು ಸ್ವಲ್ಪ ಮುಜಗರವಾಯಿತು. ಆದರೆ ಪಾತ್ರವನ್ನು ಪಾತ್ರ ಎಂದು ತಿಳಿದು, ನಟಿಸಿದ್ದೆ. ಚಿತ್ರ ಚೆನ್ನಾಗಿ ಬಂದಿದೆ. ಸಹಕಾರ ನೀಡಿದ ತಂಡಕ್ಕೆ ಧನ್ಯವಾದ ಎಂದರು ನಟಿ ಅಪೂರ್ವ ಭಾರದ್ವಾಜ್.

ಚಿತ್ರದಲ್ಲಿ ನಟಿಸಿರುವ ಸಂದೀಪ್, ಕುರಿ ಬಾಂಡ್ ರಂಗ, ಪ್ರವೀಣ್ ಶೆಟ್ಟಿ ಹಾಗೂ ಸಂಗೀತ ನಿರ್ದೇಶಕ ಪ್ರಸಾದ್ ಶೆಟ್ಟಿ ಚಿತ್ರದ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು.

ಪೂರ್ತಿಯಾಗಿ ಓದಿ

admin

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin