ಸೆಪ್ಟಂಬರ್ 5ರಂದು “ನಾನು ಮತ್ತು ಗುಂಡ-2” ಚಿತ್ರ ತೆರೆಗೆ
ಈ ಹಿಂದೆ ತೆರೆಕಂಡ ನಾನು ಮತ್ತು ಗುಂಡ ಭಾವನಾತ್ಮಕವಾಗಿ ಪ್ರೇಕ್ಷಕರನ್ನು ಸೆಳೆದಿತ್ತು. ಇದೀಗ ಆ ಚಿತ್ರದ ಮುಂದುವರೆದ ಭಾಗವಾಗಿ ನಾನು ಮತ್ತು ಗುಂಡ-2 ತಯಾರಾಗಿದ್ದು. ಸೆಪ್ಟಂಬರ್ 5 ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ.

ಹಿಂದಿನ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ರಘುಹಾಸನ್ ಅವರೇ ಚಿತ್ರದ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದು , ನಿರ್ಮಾಣದ ಜವಾಬ್ದಾರಿಯನ್ನು ಸಹ ಹೊತ್ತಿದ್ದಾರೆ. ಈ ಚಿತ್ರದಲ್ಲಿ ರಾಕೇಶ್ ಆಡಿಗ, ರಚನಾ ಇಂದರ್ ನಾಯಕ ನಾಯಕಿಯಾಗ ನಟಿಸಿದ್ದಾರೆ. ಆರ್‍ಪಿ. ಪಟ್ನಾಯಕ್ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದುರುವ ಈ ಚಿತ್ರದ ಹಾಡುಗಳು ಈಗಾಗಲೇ ಪ್ರೇಕ್ಷಕರ ಮನ ಗೆದ್ದಿವೆ.
ಸೆನ್ಸಾರ್ ಮಂಡಳಿ ಚಿತ್ರಕ್ಕೆ ಯಾವುದೇ ಕಟ್ ಸೂಚಿಸದೆ ‘ಯು/ಎ’ ಕೊಟ್ಟಿದೆ, ಶಂಕರ ನಿಧನನಾದ ಮೇಲೆ ಆತನ ಮಗನಿಂದ ಕಥೆ ಕಂಟಿನ್ಯೂ ಆಗುತ್ತದೆ. ರಾಕೇಶ್ ಅಡಿಗ ಶಂಕರನ ಮಗನಾಗಿ ನಟಿಸಿದ್ದು, ಆತನಿಗೆ ನಾಯಿಯೇ ಪ್ರಪಂಚ. ಸೋಷಿಯಲ್ ಕನ್‍ಸರ್ನ್ ಜೊತೆಗೆ ಡಿವೈನ್ ಕಂಟೆಂಟ್ ಕೂಡ ಚಿತ್ರದಲ್ಲಿದೆ

ಊಟಿ, ಶಿವಮೊಗ್ಗ, ತೀರ್ಥಹಳ್ಳಿ, ಬಾಳೆಹೊನ್ನೂರು, ಬೆಂಗಳುರು ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ನಡೆಸಲಾಗಿದೆ.ಸಿಂಬು ಜೊತೆ ಬಂಟಿ ಎಂಬ ನಾಯಿಯ ಜತೆ ಬಾಲನಟ ಜೀವನ್ ಕೂಡ. ಈ ಚಿತ್ರದಲ್ಲಿ ನಟಿಸಿದ್ದಾನೆ.ಪೆÇಯೆಮ್ ಪಿಕ್ಚರ್ಸ್ ಲಾಂಛನದಲ್ಲಿ ರಘು ಹಾಸನ್ ನಿರ್ಮಿಸಿರುವ ನಾನು ಮತ್ತು ಗುಂಡ-2 ಚಿತ್ರಕ್ಕೆ ಆರ್.ಪಿ. ಪಟ್ನಾಯಕ್ ಸಂಗೀತ ಸಂಯೋಜನೆ, ರುತ್ವಿಕ್ ಮುರಳೀಧರ್ ಹಿನ್ನೆಲೆ ಸಂಗೀತ, ತನ್ವಿಕ್ ಛಾಯಾಗ್ರಹಣವಿದೆ. ಚಿತ್ರದ ಸಂಭಾಷಣೆ ಹಾಗೂ ಸಾಹಿತ್ಯವನ್ನು ರೋಹಿತ್ ರಮನ್ ರಚಿಸಿದ್ದಾರೆ.

