Nagabharana's "Chinnari Mutta" then, Nagini Bharana's "Genius Mutta" today.

ಅಂದು ನಾಗಾಭರಣರ “ಚಿನ್ನಾರಿ ಮುತ್ತ” ಇಂದು ನಾಗಿಣಿ ಭರಣರ “ಜೀನಿಯಸ್ ಮುತ್ತ” - CineNewsKannada.com

ಅಂದು ನಾಗಾಭರಣರ “ಚಿನ್ನಾರಿ ಮುತ್ತ” ಇಂದು ನಾಗಿಣಿ ಭರಣರ “ಜೀನಿಯಸ್ ಮುತ್ತ”

ಹಿರಿಯ ನಿರ್ದೇಶಕ ಟಿ.ಎಸ್ ನಾಗಾಭರಣ ಅವರು 1993 ರಲ್ಲಿ ವಿಜಯ್ ರಾಘವೇಂದ್ರ ಅವರಿಗಾಗಿ “ಚಿನ್ನಾರಿ ಮುತ್ತ” ಚಿತ್ರ ನಿರ್ದೇಶನ ಮಾಡಿ ಅತ್ಯುತ್ತಮ ಬಾಲ ನಟನೆಗಾಗಿ ವಿಜಯ್ ರಾಘವೇಂದ್ರ ರಾಷ್ಟç ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದರು.ಟಿ.ಎಸ್ ನಾಗಾಭರಣ ಅವರ ಪತ್ನಿ ನಾಗಿಣಿ ಭರಣ, ಮಾಸ್ಟರ್ ಶ್ರೇಯಸ್ ಜೈಪ್ರಕಾಶ್ ಅವರಿಗಾಗಿ “ ಜೀನಿಯಸ್ ಮುತ್ತ” ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

Nagini Bharana , Pannaga Bharana, T S Nagabharana

ಈ ಮೂಲಕ ಇಬ್ಬರು “ಮುತ್ತು”ಗಳಿಗೆ ಪತಿ, ಪತಿ ನಿರ್ದೇಶನ ಮಾಡಿದ ಕೀರ್ತಿಗೆ ಭಾಜನರಾಗಿದ್ದಾರೆ. ಜೊತೆಗೆ ಚಿನ್ನಾರಿ ಮುತ್ತಾ ವಿಜಯ್ ರಾಘವೇಂದ್ರ, ಟಿ,ಎಸ್. ನಾಗಾಭರಣ, ಪನ್ನಗ ಭರಣ, ಗಿರಿಜಾ ಲೋಕೇಶ್ ಮತ್ತಿತರರು ನಟಿಸಿರುವುದು ವಿಶೇಷ.

ಖ್ಯಾತ ನಿರ್ದೇಶಕ ಟಿ.ಎಸ್. ನಾಗಾಭರಣ ಪತ್ನಿ ನಾಗಿಣಿ ಭರಣ ನಿರ್ದೇಶನದ ಮೊದಲ ಚಿತ್ರ “ಜೀನಿಯಸ್ ಮುತ್ತ” ತೆರೆಗೆ ಬರಲು ಸಿದ್ದವಾಗಿದೆ. ಆಗಸ್ಟ್ನಲ್ಲಿ ಚಿತ್ರ ತೆರೆಗೆ ಬರಲಿದೆ. ಜಿ.ಎಸ್ ಲತಾ ಜೈಪ್ರಕಾಶ್ ನಿರ್ಮಾಣದ ಚಿತ್ರದಲ್ಲಿ “ಜೀನಿಯಸ್ ಮುತ್ತ” ನಾಗಿ ಮಾಸ್ಟರ್ ಶ್ರೇಯಸ್ಸ್ ಜೈಪ್ರಕಾಶ್ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ “ಚಿನ್ನಾರಿಮುತ್ತ”ನಾಗಿ ಮೆಚ್ಚುಗೆ ಪಡೆದಿರುವ ವಿಜಯ ರಾಘವೇಂದ್ರ ಅಭಿನಯಿಸಿದ್ದಾರೆ.

Nagini Bharana

ನಿರ್ದೇಶಕಿ ನಾಗಿಣಿ ಭರಣ ಮಾತನಾಡಿ ಹಲವು ವರ್ಷಗಳಿಂದ ನಿರ್ದೇಶನ ಮಾಡುವಂತೆ ಎಲ್ಲರೂ ಹೇಳುತ್ತಿದ್ದರು. ಆಗಿರಲಿಲ್ಲ. ಆದರೆ ಲತಾ, ತಮ್ಮ ಮಗನನ್ನು ಚಿತ್ರರಂಗಕ್ಕೆ ಪ್ರವೇಶಿಸಬೇಕೆಂದುಕೊAಡಿದ್ದೇನೆ. ಚಿತ್ರವನ್ನು ನೀವೇ ನಿರ್ದೇಶಿಸಬೇಕು ಎಂದರು ಅವರ ಒತ್ತಾಯಕ್ಕೆ ಮಣಿದು ಸ್ನೇಹಿತರ ತಂಡದೊAದಿಗೆ ಸೇರಿ ಈ ಚಿತ್ರದ ಕಥೆ ಸಿದ್ದ ಮಾಡಿದೆ ಎಂದರು

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಹೆಚ್ಚಾಗಿ ಬಿಳಿಗಿರಿರಂಗನ ಬೆಟ್ಟದಲ್ಲಿ ನಡೆದಿದೆ. ಮಾಸ್ಟರ್ ಶ್ರೇಯಸ್ಸ್, ವಿಜಯ ರಾಘವೇಂದ್ರ, ಟಿ.ಎಸ್.ನಾಗಾಭರಣ, ಗಿರಿಜಾ ಲೋಕೇಶ್,ಸುಂದರರಾಜ್, ಪನ್ನಗಾಭರಣ ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ. ಈಗಾಗಲೇ ಒಂದು ಅಂತರರಾಷ್ಟಿçÃಯ ಚಲನಚಿತ್ರೋತ್ಸವದಲ್ಲಿ ಹಾಗೂ ವಿದೇಶಗಳಲ್ಲಿ ನಮ್ಮ ಚಿತ್ರದ ಪ್ರದರ್ಶನವಾಗಿದೆ. ನೋಡಿದವರು ಮೆಚ್ಚುಗೆ ಮಾತುಗಳಾಡಿದ್ದಾರೆ. ಆಗಸ್ಟ್ ನಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದರು.

Pannaga Bharana, T S Nagabharana

ಹಿರಿಯ ನಿರ್ದೇಶಕ ಟಿ.ಎಸ್ ನಾಗಾಭರಣ ಮಾತನಾಡಿ ನಾಗಿಣಿ ಅವರು ಈಗ ಸ್ವತಂತ್ರ ನಿರ್ದೇಶನ ಮಾಡಿದರಷ್ಟೇ. ಆದರೆ ನನ್ನ ಎಲ್ಲಾ ಸಿನಿಮಾ, ಧಾರಾವಾಹಿಗಳ ನಿರ್ದೇಶನಕ್ಕೆ ಹಿಂದಿನಿAದ ಸಹಕಾರ ನೀಡುತ್ತಿದ್ದರು. ಈಗ ಮೊದಲ ಚಿತ್ರ ನಿರ್ದೇಶನ ಮಾಡಿದ್ದಾರೆ.ನಾನು ಈ ಚಿತ್ರದಲ್ಲಿ ಪುಟ್ಟ ಪಾತ್ರ ಮಾಡಿದ್ದೇನೆ ಎಂದರು.

Shreyas Jai Prakash and latha Jai Prakash

ಮಾಸ್ಟರ್ ಶ್ರೇಯಸ್ಸ್ ಮಾತನಾಡಿ ಭರಣ ಸರ್ ಅವರ ಬಳಿ ನಟನೆ ಕಲಿತಿದ್ದೇನೆ. ಆನಂತರ ಅಮ್ಮನಿಗೆ ನಾನು ನಟಿಸಬೇಕೆಂದು ಆಸೆಯಾಯಿತು. ಈ ಚಿತ್ರದಲ್ಲಿ “ಜೀನಿಯಸ್ ಮುತ್ತ”ನಾಗಿ ಅಭಿನಯಿಸಿದ್ದೇನೆ. ಅವಕಾಶ ನೀಡಿದ ಅಮ್ಮನಿಗೆ ಹಾಗೂ ಸಹಕಾರ ನೀಡಿದ ಚಿತ್ರತಂಡಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದು ಕೇಳಿಕೊಂಡರು.

vijay Raghavendra

ನಟ ವಿಜಯ್ ರಾಘವೇಂದ್ರ ಮಾತನಾಡಿ ಸದಾ ನಾಗಾಭರಣ್ ಸರ್ ಅವರಿಗೆ ಆಬಾರಿ. ಏಕೆಂದರೆ ನನ್ನನ್ನು ಎಲ್ಲರು ವಿಜಯ ರಾಘವೇಂದ್ರ ಅನ್ನುವುದಕ್ಕಿಂತ ಚಿನ್ನಾರಿಮುತ್ತ ಎನ್ನುವುದೇ ಹೆಚ್ಚು. ಅಂತಹ ಸೂಪರ್ ಹಿಟ್ ಚಿತ್ರದಲ್ಲಿ ನಟಿಸಲು ನನಗೆ ಅವಕಾಶ ನೀಡಿದವರು ನಾಗಾಭರಣ್ ಸರ್. ಈಗ ನಾಗಿಣಿ ಭರಣ ಅವರ ಮೊದಲ ನಿರ್ದೇಶನದಲ್ಲೂ ನಾನು ನಟಿಸಿರುವುದು ಖುಷಿಯಾಗಿದೆ ಎಂದು ಹೇಳಿದರು

ನಿರ್ಮಾಪಕಿ ಲತಾ ಜೈಪ್ರಕಾಶ್ ಮಾತನಾಡಿ ನಾಗಿಣಿ ಭರಣ ಅವರು ನನಗೆ ಹತ್ತು ವರ್ಷಗಳ ಪರಿಚಯ. ನನ್ನ ಮಗನಿಗಾಗಿ ಒಂದೊಳ್ಳೆ ಕಥೆ ಮಾಡಿ ನೀವೇ ನಿರ್ದೇಶನ ಮಾಡಬೇಕೆಂದು ನಾಗಿಣಿ ಭರಣ ಅವರ ಬಳಿ ಹೇಳಿದೆ. ಅವರು ಒಳ್ಳೆಯ ಕಥೆ ಸಿದ್ದ ಮಾಡಿಕೊಂಡು ನನಗೆ ಕಥೆ ಹೇಳಿದರು. ನಂತರ “ಜೀನಿಯಸ್ ಮುತ್ತ” ಚಿತ್ರ ಆರಂಭವಾಯಿತು. ಈಗ ಬಿಡುಗಡೆ ಹಂತ ತಲುಲಿದೆ. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು

ಚಿತ್ರದಲ್ಲಿ ನಟಿಸಿರುವ ಗಿರಿಜಾ ಲೋಕೇಶ್, ಪನ್ನಗಾಭರಣ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಸಂಗೀತದ ಬಗ್ಗೆ ಬಾಪು ಪದ್ಮನಾಭ ಮಾಹಿತಿ ನೀಡಿದರು.ಚಿತ್ರತಂಡದ ಅನೇಕ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin