Nagabhushan-Amrita Prem's film Tagaru Palya released for Rajyotsava

ನಾಗಭೂಷಣ್-ಅಮೃತಾ ಪ್ರೇಮ್ ಜೋಡಿಯ ಚಿತ್ರ ಟಗರು ಪಲ್ಯ ರಾಜ್ಯೋತ್ಸವಕ್ಕೆ ಬಿಡುಗಡೆ - CineNewsKannada.com

ನಾಗಭೂಷಣ್-ಅಮೃತಾ ಪ್ರೇಮ್ ಜೋಡಿಯ ಚಿತ್ರ ಟಗರು ಪಲ್ಯ ರಾಜ್ಯೋತ್ಸವಕ್ಕೆ ಬಿಡುಗಡೆ

ಇಕ್ಕಟ್, ಬಡವ ರಾಸ್ಕಲ್ ಸಿನಿಮಾಗಳ ಖ್ಯಾತಿಯ ಪ್ರತಿಭಾನ್ವಿತ ಕಲಾವಿದ ನಾಗಭೂಷಣ್ ಅವರಿಗಿಂದು ( ಆಗಸ್ಟ್ 17) ಜನ್ಮದಿನದ ಸಂಭ್ರಮ. ನಾಗಭೂಷಣ್ ಹುಟ್ಟುಹಬ್ಬಕ್ಕೆ “ಟಗರು ಪಲ್ಯ” ಚಿತ್ರ ವಿಶೇಷ ಉಡುಗೊರೆ ನೀಡಿದೆ.

Actor Nagabhushan

ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ ಮೂರನೇ ಚಿತ್ರ ಟಗರು ಪಲ್ಯದ ಟೈಟಲ್ ಟ್ರ್ಯಾಕ್ ನ್ನು ನಾಯಕ ನಾಗಭೂಷಣ್ ಹುಟ್ಟುಹಬ್ಬದ ಅಂಗವಾಗಿ ಬಿಡುಗಡೆ ಮಾಡಲಾಗಿದೆ. ಧನಂಜಯ್ ಕ್ಯಾಚಿ ಮ್ಯಾಚಿ ಪದಗಳನ್ನು ಸೇರಿಸಿ ಸಾಹಿತ್ಯ ರಚಿಸಿದ್ದು, ವಾಸುಕಿ ವೈಭವ್ ಸಂಗೀತ ನೀಡಿದ್ದು, ವಿಜಯ್ ಪ್ರಕಾಶ್ ಹಾಡಿಗೆ ಧ್ವನಿಯಾಗಿದ್ದಾರೆ.

ಯುವ ನಿರ್ದೇಶಕ ಉಮೇಶ್ ಕೆ ಕೃಪಾ ನಿರ್ದೇಶನದ ಚೊಚ್ಚಲ ಚಿತ್ರವಾಗಿರುವ ಟಗರು ಪಲ್ಯ ಮೂಲಕ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.

Actor Nagabhushan

ನಾಗಭೂಷಣ್ ನಾಯಕನಾಗಿ ನಟಿಸಿದ್ದಾರೆ. ಮಂಡ್ಯ ಹಳ್ಳಿಗಳಲ್ಲಿ ನಡೆಯುವ ಆಚರಣೆ ಸುತ್ತಾ ಇಡೀ ಸಿನಿಮಾವನ್ನು ನಿರ್ದೇಶಕ ಉಮೇಶ್ ಕೆ. ಕೃಪಾ ಕಟ್ಟಿಕೊಟ್ಟಿದ್ದಾರೆ.

ಚಿತ್ರದಲ್ಲಿ ಹಿರಿಯ ಕಲಾವಿದರಾದ ತಾರಾ, ಶರತ್ ಲೋಹಿತಾಶ್ವ, ರಂಗಾಯಣ ರಘು ಸೇರಿದಂತೆ ದೊಡ್ಡ ತಾರಾಬಳಗವಿರುವ “ಟಗರು ಪಲ್ಯ” ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ. ಎಸ್ ಕೆ ರಾವ್ ಕ್ಯಾಮೆರಾ ಹಿಡಿದಿದ್ದಾರೆ.

ಟೈಟಲ್ ಟ್ರ್ಯಾಕ್ ಮೂಲಕ ಪ್ರಚಾರ ಕಾರ್ಯ ಆರಂಭಿಸಿರುವ ಚಿತ್ರತಂಡ ಕನ್ನಡ ರಾಜ್ಯೋತ್ಸವಕ್ಕೆ ಸಿನಿಮಾವನ್ನು ತೆರೆಗೆ ತರಲು ಯೋಜನೆ ಹಾಕಿಕೊಂಡಿದೆ ಚಿತ್ರತಂಡ

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin