ಭಜರಂಗಿ ಚಲುವರಾಜ್ ನಟನೆಯ “ನನ್ನ ಮಗಳೇ ಸೂಪರ್ ಸ್ಟಾರ್” ಆರಂಭ
“ಸೀತಾರಾಮ” ಧಾರಾವಾಹಿ ಮೂಲಕ ಮನ ಗೆದ್ದಿದ್ದ ಬೇಬಿ ರೀತು ಸಿಂಗ್ ಈಗ “ನನ್ನ ಮಗಳೇ ಸೂಪರ್ ಸ್ಟಾರ್” ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ. “ಭಜರಂಗಿ 2” ಖ್ಯಾತಿಯ ಚಲುವರಾಜ್, ಸಂಭ್ರಮಶ್ರೀ ಪ್ರಮುಖ ಪಾತ್ರದಲ್ಲಿದ್ದಾರೆ

ಸಾಹಿತಿ ಬಿ.ಆರ್ ಲಕ್ಷ್ಮಣರಾವ್, ಪರಿಸರ ಪ್ರೇಮಿ ರೇವತಿ ಕಾಮತ್ ಹಾಗೂ ನಿರ್ದೇಶಕ ನಂಜುಂಡೇಗೌಡ ಮತ್ತಿತರರು ಚಿತ್ರದ ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿ ಚಿತ್ರತಂಡಕ್ಕೆ ಶುಭಹಾರೈಸಿದರು. ಎನ್ ಎ.ಶಿವಕುಮಾರ್ (ಕುಮಾರ್ ನೊಣವಿನಕೆರೆ) ನಿರ್ಮಿಸುತ್ತಿರುವ ಚಿತ್ರವನ್ನು ಹಲವು ಚಿತ್ರಗಳಿಗೆ ಸಂಕಲನಕಾರರಾಗಿ ದುಡಿದಿರುವ ಆಯುರ್ ನಿರ್ದೇಶಿಸುತ್ತಿದ್ದಾರೆ.
ನಿರ್ದೇಶಕ ಆಯುರ್ ಮಾತನಾಡಿ ಅಪ್ಪ – ಅಮ್ಮನಿಗೆ ತಮ್ಮ ಮಕ್ಕಳು ಸೂಪರ್ ಸ್ಟಾರ್ ಆಗಬೇಕೆಂಬ ಕನಸು. ಜೊತೆಗೆ ತಾವು ಅಂದುಕೊಂಡಂತೆ ಅವರು ಇರಬೇಕು ಎಂಬ ಆಸೆ. ಅದರಲ್ಲೂ ಸ್ವಭಾವ ತಾಯಿಗೆ ಸ್ವಲ್ಪ ಹೆಚ್ಚು. ಆದರೆ ಮಕ್ಕಳಿಗೂ ಅವರದೇ ಆಸೆ ಇರುತ್ತದೆ.ಆಸೆಯನ್ನು ಅವರ ಮೇಲೆ ಬಲವಂತವಾಗಿ ಅವರ ಮೇಲೆ ಹೇರಬೇಡಿ. ಅದರಿಂದ ಮಕ್ಕಳು ಏನೆಲ್ಲಾ ತೊಂದರೆ ಅನುಭವಿಸುತ್ತಾರೆ ಎಂಬ ಅಂಶವೇ ಈ ಚಿತ್ರದ ಕಥಾಹಂದರ ಎಂದರು
ಬೆಂಗಳೂರಿನಲ್ಲೆ ಮೂವತ್ತು ದಿನಗಳ ಚಿತ್ರೀಕರಣ ನಡೆಯಲಿದೆ. ಚಿತ್ರದಲ್ಲಿ ಮೂರು ಹಾಡುಗಳಿದ್ದು, ಮೂರು ಹಾಡುಗಳನ್ನು ಬಿ.ಆರ್.ಲಕ್ಷ್ಮಣರಾವ್ ಅವರೆ ಬರೆದಿದ್ದಾರೆ. ಕೆವಿನ್ ಸಂಗೀತ ನೀಡಿದ್ದಾರೆ. ಇನ್ನೂ ಈವರೆಗೂ ಸಾಕಷ್ಟು ಚಿತ್ರಗಳಿಗೆ ಸಂಕಲನ ಮಾಡಿರುವ ನಾನು, ಈ ಚಿತ್ರದ ಮೂಲಕ ನಿರ್ದೇಶಕನಾಗುತ್ತಿದ್ದೇನೆ ಎಂದು ತಿಳಿಸಿದರು.
ನಟ ಚಲುವರಾಜ್ ಮಾತನಾಡಿ ಈವರೆಗೂ ವಿಲನ್ ಪಾತ್ರಗಳಲ್ಲಿ ಗುರುತಿಸಿಕೊಳ್ಳುತ್ತಿದ್ದ ಚಿತ್ರದ ಮೂಲಕ ನಾಯಕನಾಗುತ್ತಿದ್ದೇನೆ ಹಾಗೂ ಈವರೆಗೂ ಮಾಡಿರದ ಪಾತ್ರ ಮಾಡುತ್ತಿದ್ದೇನೆ ಎಂದರು

ನಟಿ ಸಂಭ್ರಮಶ್ರೀ ಮಾತನಾಡಿ ನಿರ್ದೇಶಕರು ಹೇಳಿದ ಹಾಗೆ ಪೋಷಕರು ಹಾಗೂ ಮಕ್ಕಳು ನೋಡಲೇ ಬೇಕಾದ ಚಿತ್ರವಿದು. ನಾನು ಈ ಚಿತ್ರದ ನಾಯಕಿ. ಬೇಬಿ ರೀತುಸಿಂಗ್ ತಾಯಿಯಾಗಿ ಅಭಿನಯಿಸುತ್ತಿದ್ದೇನೆ ಎಂದು ಹೇಳಿದರು.
ಬಹಳ ದಿನಗಳ ನಂತರ ಚಲನಚಿತ್ರಕ್ಕೆ ಹಾಡು ಬರೆದಿದ್ದೇನೆ. ಅದರಲ್ಲೂ ಈ ಚಿತ್ರದ ಮೂರು ಹಾಡುಗಳನ್ನು ನಾನೇ ಬರೆದಿದ್ದೇನೆ ಎಂದು ಸಾಹಿತಿ ಬಿ.ಆರ್ ಲಕ್ಷ್ಮಣರಾವ್ ಹೇಳಿದರು.
ಎಂದರು ಪರಿಸರ ಪ್ರೇಮಿ ರೇವತಿ ಕಾಮತ್ ಮಾತನಾಡಿ ನಿರ್ದೇಶಕರು ಹೇಳಿದ ಕಥೆ ಬಹಳ ಇಷ್ಟವಾಯಿತು. ನಾನು ಕೂಡು ಈ ಚಿತ್ರದಲ್ಲಿ ನಟಿಸುತ್ತಿದ್ದೇನೆ ಎಂದು ತಿಳಿಸಿದರು

ನಿರ್ಮಾಪಕ ಎನ್ ಎ ಶಿವಕುಮಾರ್ ಮಾತನಾಡು ಹಿಂದಿನಿಂದ ನಮ್ಮ ಚಿತ್ರಗಳಿಗೆ ಪ್ರೋತ್ಸಾಹಚಿತ್ರದಲ್ಲೂ ಮುಂದುವರೆಯಲಿ ಎಂದು ತಿಳಿಸಿದರು.
ಮಾಧವಾನಂದ, ಪ್ರತಿಭಾ ಸಂಶಿಮಠ ಸೇರಿದಂತೆ ಚಿತ್ರತಂಡದ ಅನೇಕರು ಹಾಜರಿದ್ದರು

