ಸೈಂಧವ್ ಸಿನಿಮಾಗೆ ನವಾಜುದ್ದೀನ್ ಸಿದ್ದಿಕಿ ಎಂಟ್ರಿ…
ಸೈಂಧವ್ ಸಿನಿಮಾಗೆ ನವಾಜುದ್ದೀನ್ ಸಿದ್ದಿಕಿ ಎಂಟ್ರಿ… ವಿಕ್ಟರಿ ವೆಂಕಟೇಶ್ ಗೆ ಟಕ್ಕರ್ ಕೊಡಲು ಬಂದ ಬಾಲಿವುಡ್ ಸ್ಟಾರ್ ಲುಕ್ ರಿವೀಲ್…
ಬಾಲಿವುಡ್ ಕಂಡ ಅತ್ಯದ್ಭುತ ನಟರಲ್ಲಿ ನವಾಜುದ್ದೀನ್ ಸಿದ್ದಿಕಿ ಕೂಡ ಒಬ್ಬರು. ಯಾವುದೇ ಪಾತ್ರ ಕೊಟ್ಟರು ಲೀಲಾಜಾಲವಾಗಿ ಅಭಿನಯಿಸುವ, ವಿಭಿನ್ನ ಪಾತ್ರಗಳ ಮೂಲಕ ಗಮನಸೆಳೆದಿರುವ ಸಿದ್ದಿಕಿ ಸೈಂಧವ್ ಸಿನಿಮಾ ಮೂಲಕ ಸೌತ್ ಸಿನಿಮಾ ಇಂಡಸ್ಟ್ರೀಯತ್ತ ಹೆಜ್ಜೆ ಇಟ್ಟಿದ್ದಾರೆ.
ಟಾಲಿವುಡ್ ನಟ ವಿಕ್ಟರಿ ವೆಂಕಟೇಶ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಸೈಂಧವ್’. ಶೈಲೇಶ್ ಕೋಲನು ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ನವಾಜುದ್ದೀನ್ ಸಿದ್ದಿಕಿ ವಿಲನ್ ಆಗಿ ಬಣ್ಣ ಹಚ್ಚಿದ್ದಾರೆ. ಅವರ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಕ್ಯಾರೆಕ್ಟರ್ ಪೋಸ್ಟರ್ ರಿಲೀಸ್ ಮಾಡಿದೆ. ವಿಕಾಸ್ ಮಲಿಕ್ ಎಂಬ ಪಾತ್ರದಲ್ಲಿ ನವಾಜುದ್ದೀನ್ ಸಿದ್ದಿಕಿ, ದುಬಾರಿ ಕಾರಿನ ಬಾನೆಟ್ ಮೇಲೆ ಕುಳಿತು ಬೀಡಿ ಸೇದುತ್ತಾ ಸಖತ್ ಕ್ಲಾಸ್ ಆಗಿ ಕಾಣಿಸಿಕೊಂಡಿದ್ದಾರೆ.
ಶ್ರದ್ಧಾ ಶ್ರೀನಾಥ್ ಮನೋಜ್ಞ ಎಂಬ ಪಾತ್ರದಲ್ಲಿ, ಡಾ ರೇಣು ಪಾತ್ರದಲ್ಲಿ ರುಹಾನಿ ಶರ್ಮಾ ಮತ್ತು ಜಾಸ್ಮಿನ್ ಪಾತ್ರದಲ್ಲಿ ಆಂಡ್ರಿಯಾ ಜೆರೆಮಿಯಾ ಕಾಣಿಸಿಕೊಂಡಿದ್ದಾರೆ. ಸಂತೋಷ್ ನಾರಾಯಣನ್ ಸಂಗೀತ ನಿರ್ದೇಶನ, ಎಸ್ ಮಣಿಕಂದನ್ ಛಾಯಾಗ್ರಹಣ, ಗ್ಯಾರಿ ಬಿಎಚ್ ಸಂಕಲನ ಮತ್ತು ಅವಿನಾಶ್ ಕೊಲ್ಲಾ ನಿರ್ಮಾಣ ವಿನ್ಯಾಸ ಚಿತ್ರಕ್ಕಿದೆ.
ನಿಹಾರಿಕಾ ಎಂಟರ್ಟೈನ್ಮೆಂಟ್ ಅಡಿ ವೆಂಕಟ್ ಬೋಯನಪಲ್ಲಿ ನಿರ್ಮಿಸುತ್ತಿರುವ ಸೈಂಧವ್ ಚಿತ್ರಕ್ಕೆ
ಕಿಶೋರ್ ತಲ್ಲೂರ್ ಸಹ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ. ಸೈಂಧವ ಪ್ಯಾನ್ ಇಂಡಿಯಾ ಚಲನಚಿತ್ರವಾಗಿದ್ದು, ಡಿಸೆಂಬರ್ 22 ರಂದು ಕ್ರಿಸ್ಮಸ್ ವಿಶ್ವಾದ್ಯಂತ ರಿಲೀಸ್ ಆಗಲಿದೆ.