"Nimbia Banada Maga Page 1" receives a shower of awards

“ನಿಂಬಿಯಾ ಬನಾದ ಮ್ಯಾಗ ಪೇಜ್ 1” ಚಿತ್ರಕ್ಕೆ ಪ್ರಶಸ್ತಿಗಳ ಸುರಿಮಳೆ - CineNewsKannada.com

“ನಿಂಬಿಯಾ ಬನಾದ ಮ್ಯಾಗ ಪೇಜ್ 1” ಚಿತ್ರಕ್ಕೆ ಪ್ರಶಸ್ತಿಗಳ ಸುರಿಮಳೆ

ಹಲವು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಮೆಚ್ಚುಗೆ ಪಡೆದುಕೊಂಡ ಡಾ.ರಾಜಕುಮಾರ್ ಮೊಮ್ಮಗ ಷಣ್ಮುಖ ಗೋವಿಂದರಾಜ್ ಅಭಿನಯದ “ನಿಂಬಿಯಾ ಬನಾದ ಮ್ಯಾಗ ಪೇಜ್ 1” ಚಿತ್ರ

ವಿ.ಮಾದೇಶ್ ನಿರ್ಮಾಣದ, ಅಶೋಕ್ ಕಡಬ ನಿರ್ದೇಶನದಲ್ಲಿ ಡಾ.ರಾಜಕುಮಾರ್ ಮೊಮ್ಮಗ ಷಣ್ಮುಖ ಗೋವಿಂದರಾಜ್ ನಾಯಕರಾಗಿ ನಟಿಸಿರುವ “ನಿಂಬಿಯಾ ಬನಾದ ಮ್ಯಾಗ ಪೇಜ್ 1” ಚಿತ್ರ ಕೆಲವು ತಿಂಗಳ ಹಿಂದೆ ತೆರೆಕಂಡು ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿತ್ತು.

ವಿಭಿನ್ನ ಪ್ರೇಮ ಕಥಾಹಂದರ ಹೊಂದಿರುವ ಚಿತ್ರ ದೇಶ ಹಾಗೂ ವಿದೇಶಗಳ ಹಲವು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲೂ ಪ್ರದರ್ಶನಗೊಂಡು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಧನ್ ಬಾಬ್ ಅಂತರಾಷ್ಟ್ರೀಯ ಚಿತ್ರೋತ್ಸದಲ್ಲಿ ಅತ್ಯುತ್ತಮ ಚಿತ್ರ, 7ನೇ ಸಿಸ್ಟರ್ ನಾರ್ಥ್ ಈಸ್ಟ್ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅತ್ಯುತ್ತಮ ನಿರ್ದೇಶಕ, ಬಾಂಗ್ಲಾದೇಶದ 7ನೇ ಕ್ರೌನ್ ಅಂತರಾಷ್ಟ್ರೀಯ ಚಿತ್ರೋತ್ಸದಲ್ಲಿ ಅತ್ಯುತ್ತಮ ನಿರ್ದೇಶಕ, ಛಾಯಾಗ್ರಾಹಕ ಪ್ರಶಸ್ತಿ ಹಾಗೂ ಅತ್ಯುತ್ತಮ ಪೆÇೀಷಕ ಕಲಾವಿದ ಪ್ರಶಸ್ತಿ ಮತ್ತು ಥೈಲ್ಯಾಂಡ್ ಇಂಟರ್ ನ್ಯಾಷನಲ್ ಫೆಸ್ಟಿವಲ್ ನಲ್ಲಿ ಸಹ ಪ್ರಶಸ್ತಿ ಪಡೆದುಕೊಂಡಿದೆ. ಸಿದ್ದು ಕಾಂಚನಹಳ್ಳಿ ಚಿತ್ರದ ಛಾಯಾಗ್ರಹಕರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin