'Onde Matali' from the movie "Pyaar" is a song that has set a record.

” ಪ್ಯಾರ್” ಚಿತ್ರದ ‘ಒಂದೇ ಮಾತಲಿ .. ದಾಖಲೆ‌ ಬರೆದ ಹಾಡು - CineNewsKannada.com

” ಪ್ಯಾರ್” ಚಿತ್ರದ ‘ಒಂದೇ ಮಾತಲಿ .. ದಾಖಲೆ‌ ಬರೆದ ಹಾಡು


ಚಂದವನವನ ಕನಸುಗಾರ ಕ್ರೇಜಿ ಸ್ಟಾರ್ ರವಿಚಂದ್ರನ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿರುವ “ಪ್ಯಾರ್” ಚಿತ್ರದ ‘ಒಂದೇ ಮಾತಲಿ ಹೇಳೋದಾದರೆ..” ಹಾಡು ದಾಖಲೆ ಬರೆದಿದೆ

ಚಿತ್ರದಲ್ಲಿ ರಿಶ್ವಿನ್, ರಾಶಿಕಾ ಶೆಟ್ಟಿ ನಾಯಕ, ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಚಿತ್ರಕ್ಕೆ ಎಸ್. ಸುಪ್ರೀತ್ ಕಥೆ, ಚಿತ್ರಕಥೆ ಬರೆದು ಅ್ಯಕ್ಷನ್ ಕಟ್ ಹೇಳಿದ್ದು ಹೆಚ್. ಎಸ್. ನಾಗಶ್ರೀ ನಿರ್ಮಾಣ ಮಾಡಿದ್ದಾರೆ.

ಅನ್ ಎಮೋಷನಲ್ ಜರ್ನಿ ಆಫ್ ಲವ್ ಎಂಬ ಅಡಿಬರಹ ಈ ಚಿತ್ರಕ್ಕಿದೆ. ಈಗಾಗಲೇ ಬಿಡುಗಡೆಯಾಗಿಬಸಂಗೀತ ಪ್ರಿಯರ ಮನ ಗೆದ್ದಿರುವ ಒಂದೇ ಮಾತಲಿ*ಹೇಳೋದಾದರೆ ‘ ಎಂಬ ಹಾಡಿನ ಸುಂದರ ವೀಡಿಯೋ ಇನ್ *ಸ್ಟಾಗ್ರಾಂನಲ್ಲಿ 100 ಮಿಲಿಯನ್ ಗೂ ಹೆಚ್ಚು ವೀಕ್ಷಣೆಯಾಗಿದೆ. ಅಲ್ಲದೆ ಮಿಲಿಯನ್ ಪ್ಲಸ್ ವ್ಯೂಸ್ ಆಗಿದೆ. ಪಳನಿ ಡಿ.ಸೇನಾಪತಿ ಸಂಗೀತ, ಕೆಎಸ್.ಚಂದ್ರಶೇಖರ್ ಕ್ಯಾಮೆರಾದಲ್ಲಿ ಲಡಾಕ್ ನ ರಮಣೀಯ ಪರಿಸರದಲ್ಲಿ ಈ ಹಾಡನ್ನು ಸೆರೆ ಹಿಡಿಯಲಾಗಿದೆ.

ಚಿತ್ರಕ್ಕೆ ಬೆನ್ನೆಲುಬಾಗಿ ನಿಂತಿರುವ ಡಾ.ಬಿಎಸ್.ನಾಗರಾಜು ಮಾತನಾಡಿ ಲಡಾಕ್, ಕಾಶ್ಮೀರ, ಜೈಸಲ್ಮೇರ್ ನಲ್ಲಿ ಶೂಟ್ ಮಾಡಲಾಗಿರುವ ಹಾಡು ಅಧ್ಭುತವಾಗಿ ಮೂಡಿಬಂದಿದೆ ಎಂದು ಮಾಹಿತಿ ನೀಡಿದರು

ನಿರ್ದೇಶಕ ಸುಪ್ರೀತ್ ಮಾಹಿತಿ ನೀಡಿ ಚಿತ್ರದಲ್ಲಿ ರವಿಚಂದ್ರನ್ ಅಭಿನಯಿಸಲು ಒಪ್ಪಿದಾಗ ಈ ಟೈಟಲ್ ಇಟ್ಟಿದ್ದಕ್ಕೂ ಸಾರ್ಥಕ ಎನಿಸಿತು. ಪ್ರೀತಿ ಪ್ರೇಮದ ಕಥೆಯ ಜತೆಗೆ ತಂದೆ ಮಗಳ ನಡುವಿನ ಭಾವನಾತ್ಮಕ ಸಂಬಂಧವನ್ನೂ ತೆರೆದಿಡುವಂಥ ವಿಭಿನ್ನ ಕಾನ್ಸೆಪ್ಟ್ ಚಿತ್ರದಲ್ಲಿದೆ. ಕಥೆ ಮಾಡಿಕೊಂಡ ಮೇಲೆ ಮುಖ್ಯವಾಗಿ ಗಮನ ಹರಿಸಿದ್ದೇ ಹಾಡುಗಳ‌ ಮೇಲೆ ಎಂದು ಹೇಳಿದರು

7 ವರ್ಷಗಳ ನಂತರ ಈ ಹಾಡನ್ನು ಸೋನು ನಿಗಂ, ಶ್ರೇಯಾ ಘೋಷಾಲ್ ಅದ್ಭುತವಾಗಿ ಹಾಡಿದ್ದಾರೆ.
ಉತ್ತರ ಭಾರತದ ಕಾಶ್ಮೀರದಲ್ಲಿ ತುಂಬಾ ಎತ್ತರದ ಲೊಕೇಶನ್ ನಲ್ಲಿ 4 ದಿನ ಶೂಟ್ ಮಾಡಿದ್ದೇವೆ. ನಿರ್ಮಾಪಕರು ಯಾವುದಕ್ಕೂ ಬೇಡ ಎನ್ನದೆ ಧಾರಾಳವಾಗಿ ಖರ್ಚು ಮಾಡಿದ್ದಾರೆ. ರಾಜಸ್ಥಾನ, ಅಂಡಮಾನ್ ದ್ವೀಪ ಅಲ್ಲದೆ ಮಂಗಳೂರು, ಚಿಕ್ಕಮಗಳೂರು, ಮೈಸೂರು ಹಾಗೂ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಮಾಡಿದ್ದೇವೆ ಎಂದರು

ತಂದೆ – ಮಗಳ ನಡುವಿನ ಬಾಂಧವ್ಯ ಯಾವ ಮಟ್ಟಕ್ಕೆ ತಗೊಂಡು ಹೋಗಬಹುದು‌, ತಂದೆಗೋಸ್ಕರ ಮಗಳು ಯಾವರೀತಿ ಪ್ರಾಣವನ್ನೇ ಮುಡಿಪಾಗಿಡುತ್ತಾಳೆ ಅಂತ ಚಿತ್ರದಲ್ಲಿ ಹೇಳಿದ್ದೇವೆ. ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ ಎಂದು ಹೇಳಿದರು.

ನಾಯಕ ರಿತ್ವಿಕ ಮಾತನಾಡಿ ಹಾಡನ್ನು ಯಾವಾಗ ಶೂಟ್ ಮಾಡ್ತಿವೋ ಎಂಬ ಕುತೂಹಲವಿತ್ತು.ಒಂದು ಸಿನಿಮಾಗೆ ಹಾಡೇ ಆಹ್ವಾನ ಇದ್ದಹಾಗೆ ಎಂದು ಹೇಳಿದರು.

ಸಧ್ಯ ನಾಯಕಿ ರಾಶಿಕಾ ಶೆಟ್ಟಿ ಬಿಗ್ ಬಾಸ್ ಮನೆಯಲ್ಲಿದ್ದಾರೆ.

ಸಂಗೀತ ಸಂಯೋಜಕ ಪಳನಿ ಡಿ.ಸೇನಾಪತಿ ಮಾತನಾಡಿ
ಒಂದೇ ಮಾತಲಿ ಲೈನ್ ಕೊಟ್ಟಿದ್ದೇ ನಿರ್ದೇಶಕರು.ಇದನ್ನು ನಾಗೇಂದ್ರ ಪ್ರಸಾದ್ ಕೈಲಿ ಬರೆಸಿದರೆ ಚೆನ್ನಾಗಿರತ್ತೆ ಅಂತ ಬರೆಸಿದೆವು. ಮ್ಯೂಸಿಕ್ ಲವರ್ಸ್ ಗೆ ಹಾಡು ತುಂಬಾ ಇಷ್ಟವಾಗಿದೆ. ಹಂಸಲೇಖಾ ಹಾಡನ್ನು ಕೇಳಿ ವ್ಹಾವ್ ಎಂದು ಪ್ರತಿಕ್ರಯಿಸಿದರು. ಉಳಿದ ಹಾಡುಗಳು ಇದಕ್ಕಿಂತ ಚೆನ್ನಾಗಿ ಬಂದಿವೆ ಎಂದು ಹೇಳಿದರು.

ಚಿತ್ರಕ್ಕಿದೆ. ಈ ಚಿತ್ರದ ಒಂದೇ ಮಾತಲ್ಲಿ ಹೇಳೋದಾದರೆ ಎಂಬ ಹಾಡಿಗೆ ಬಾಲಿವುಡ್ ಗಾಯಕಿ ಶ್ರೇಯಾ ಘೋಷಾಲ್ ದನಿಯಾಗಿದ್ದಾರೆ. ಸೋನು ನಿಗಮ್, ಕುನಾಲ್ ಗಾಂಜಾವಾಲ, ವಿಜಯಪ್ರಕಾಶ್, ರಾಜೇಶ್ ಕೃಷ್ಣನ್ ಹಾಗೂ ಪಲಕ್ ಮಚ್ಚಲ್ ಕೂಡ ಚಿತ್ರದಲ್ಲಿ ಹಾಡಿದ್ದಾರೆ.

ಚಿತ್ರದಲ್ಲಿ ಹಿರಿಯನಟ ಶ್ರೀನಿವಾಸ ಮೂರ್ತಿ, ವಿಜಯ ಸೂರ್ಯ, ಶಂಕರ್ ಅಶ್ವಥ್ ಉಳಿದ ಪಾತ್ರವರ್ಗದಲ್ಲಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin