ಡಿಜಿಟಲ್ ಮನರಂಜನೆ ಕ್ಷೇತ್ರಕ್ಕೆ ಹೊಸದಾದ ಒಟಿಟಿ ಆಗಮನ

ಡಿಜಿಟಲ್ ಒಟಿಟಿ ವೇದಿಕೆಗೆ ಇದೀಗ ಹೊಸದೊಂದು ಒಟಿಟಿಯ ಆಗಮನವಾಗುತ್ತಿದೆ. ಅದುವೆ”ಗ್ಲೋಪಿಕ್ಸ್”. ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಹಾಗೂ ಸೆನ್ಸಾರ್ ಬೋರ್ಡ್ ಸದಸ್ಯ ಶ್ರೀವತ್ಸ ಶಾಂಡಿಲ್ಯ ಲೋಗೊ ಅನಾವರಣ ಮಾಡಿ ಶುಭ ಕೋರಿದರು.
ಕನ್ನಡ ವಿಭಾಗದ ಕ್ರಿಯೇಟಿವ್ ಹೆಡ್ ಪ್ರತಿಭಾ ಪಟವರ್ಧನ್ ಹಾಗೂ ಮುಖ್ಯ ಹಣಕಾಸು ಸಲಹೆಗಾರ ಮಂಜುನಾಥ್ ಪಟವರ್ಧನ್ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರತಿಭಾ ಪಟವರ್ಧನ್ ಮಾತನಾಡಿ ಇದೇ ವರ್ಷದ ಮೇ ತಿಂಗಳಿಂದ ಅಧಿಕೃತವಾಗಿ ಬಿಡುಗಡೆ ಆಗಲಿದೆ. Glopixs Mnn ಒಟಿಟಿಯಲ್ಲಿ 360-ಡಿಗ್ರಿ ಮನರಂಜನೆ ನೀಡಲು ಉದ್ದೇಶಿಸಲಾಗಿದೆ. ಸಿನಿಮಾ, ವೆಬ್‍ಸಿರೀಸ್‍ಗಳು, ಸುದ್ದಿಗಳು, ಶೋಗಳು. ಹೀಗೆ ಇನ್ನೂ ಹಲವು ಆಯಾಮಗಳಲ್ಲಿ ನೋಡುಗರಿಗೆ ಮನರಂಜನೆಯ ಹೂರಣ ಬಡಿಸಲಿದೆ.
ವೈವಿಧ್ಯಮಯ ಕಂಟೆಂಟ್ ನೀಡಲಿದೆ. ಈ ಒಟಿಟಿ ವೇದಿಕೆಯಲ್ಲಿ ಸಿನಿಮಾಗಳು, ವೆಬ್ ಸರಣಿಗಳು, ಸಾಕ್ಷ್ಯಚಿತ್ರಗಳು, ಸುದ್ದಿಗಳು ಮತ್ತು ರಿಯಾಲಿಟಿ ಶೋಗಳ ಕಂಟೆಂಟ್‍ಗಳು ಸಿಗಲಿದೆ. ಪ್ರಾದೇಶಿಕತೆಗೂ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿದ್ದು, ಭೋಜ್‍ಪುರಿ, ತಮಿಳು, ಇಂಗ್ಲಿಷ್, ಕನ್ನಡ, ಗುಜರಾತಿ, ಬಂಗಾಳಿ ಮತ್ತು ಮಲಯಾಳಂ ಕಂಟೆಂಟ್‍ಗಳು ವೀಕ್ಷಣೆಗೆ ಸಿಗಲಿವೆ. ವೆಬ್, ಮೊಬೈಲ್ ಮತ್ತು ಟ್ಯಾಬ್ಲೆಟ್ ಬಳಕೆದಾರರಿಗೆ ಇದು ಯೂಸರ್ ಫ್ರೆಂಡ್ಲಿ ವೇದಿಕೆ ಆಗಿರಲಿದೆ ಎಂದು ಹೇಳಿದರು