ಮೂರು ಭಾಷೆಗಳಲ್ಲಿ ಮುಂದಿನವಾರ ‘ಪದ್ಮಗಂಧಿ’ ಚಿತ್ರ ತೆರೆಗೆ
ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಸುಚೇಂದ್ರ ಪ್ರಸಾದ್ ನಿರ್ದೇಶನ ಮಾಡಿರುವ “ಪದ್ಮಗಂಧಿ” ಚಿತ್ರ ಡಿಸೆಂಬರ್ 12 ರಂದು ಕನ್ನಡ, ಹಿಂದಿ ಮತ್ತು ಸಂಸ್ಕøತ ಭಾಷೆಯಲ್ಲಿ ಚಿತ್ರ ತೆರೆಗೆ ಬರಲು ಸಜ್ಜಾಗಿದೆ.

ಹಿರಿಯ ಸಾಹಿತಿ ಡಾ.ಎಸ್ ಆರ್ ಲೀಲಾ ಅವರು ಚಿತ್ರಕ್ಕೆ ಕಥೆ ಒದಗಿಸುವ ಜೊತೆಗೆ ಬಂಡವಾಳ ಹಾಕಿದ್ದಾರೆ. ಕನ್ನಡ ಸೇರಿದಂತೆ ಹಿಂದಿಮ ಸಂಸ್ಕøತ ಭಾಷೆಯಲ್ಲಿ ಏಕ ಕಾಲಕ್ಕೆ ಚಿತ್ರೀಕರಣ ಮಾಡಿದ ಚಿತ್ರ ಎನ್ನುವ ಹೆಗ್ಗಳಿಕೆಗೂ ಪದ್ಮಗಂಧಿ ಚಿತ್ರ ಪಾತ್ರವಾಗಿದೆ.
ಈಗಾಗಲೇ ದುಬೈ ಸೇರಿದಂತೆ ಹಲವು ಚಿತ್ರೋತ್ಸವಗಳಲ್ಲಿ ಚಿತ್ರ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ, ಇದು ಸಹಜವಾಗಿ ನಿರ್ದೇಶಕ ಸುಚೇಂದ್ರ ಪ್ರಸಾದ್ ಮತ್ತು ನಿರ್ಮಾಪಕಿ ಲೀಲಾ ಮುಖದಲ್ಲಿ ನಗುವಿನ ಮಂದಹಾಸ ಮೂಡಿಸುವಂತೆ ಮಾಡಿದೆ.
ಚಿತ್ರಕಥೆ-ಸಂಭಾಷಣೆ ಜತೆಗೆ ನಿರ್ದೇಶನ ಮಾಡಿರುವ ಸುಚೇಂದ್ರ ಪ್ರಸಾದ್ ಮಾತನಾಡಿ ಪದ್ಮಗಂಧಿ ಚಿತ್ರದ ಕನ್ನಡ, ಸಂಸ್ಕ್ರತ ಮತ್ತು ಹಿಂದಿ ಭಾಷೆಯ ಟ್ರೇಲರ್ ಹಾಗೂ ಹಾಡುಗಳು ಬಿಡುಗಡೆಗೊಂಡು ಪ್ರಶಂಸೆಯ ಸುರಿಮಳೆಗಳು ಬರುತ್ತಿದೆ. ಮಾಜಿ ವಿಧಾನ ಪರಿಷತ್ ಸದಸ್ಯೆ ಅಂಕಣಕಾರ್ತಿ, ಸಂಸ್ಕ್ರತ ಭೂಮಿಕೆಯಲ್ಲಿ ನಾನಾ ದಿಕ್ಕಿನಲ್ಲಿ ಅಧ್ಯಯನ ಮಾಡಿರುವ ಕೃತಿ ಇದಾಗಿದೆ ಎಂದು ಮಾಹಿತಿ ನೀಡಿದರು

ನಿರ್ಮಾಪಕಿ ಎಸ್.ಆರ್.ಲೀಲಾ ಮಾತನಾಡಿ ಸಿನಿಮಾ ಹಾದಿಯಿಂದ ಅಂತ್ಯದವರೆಗೂ ಪದ್ಮಗಂಧಿಯ ಪರಿಮಳ ಪಸರಿಸುತ್ತದೆ. ದೈವೀಕ ಗಂಧ ಮೆತ್ತಿಕೊಂಡಿರುವ ಕಮಲದ ಹೂವಿನ ಬಗ್ಗೆಯೇ ಕಥೆ ಇರುವುದು ವಿಶೇಷ. ನಮ್ಮಲ್ಲಿ ದೈವೀಕ ಅನುಭೂತಿ ಸ್ಪುರಿಸುವ ಕಮಲ ಪುಷ್ಪದ ಬಗ್ಗೆ ಆಳವಾಗಿ ಅರಿವಿನ ಪರಧಿಯನ್ನು ವಿಸ್ತಿರಿಸಿಕೊಳ್ಳುತ್ತಾ, ಅದರ ಅಗಾದತೆ ಮೊಗೆದರೂ ಮುಗಿಯದ ಅಕ್ಷಯ ಪಾತ್ರಯಂತೆ ಭಾಸವಾಗಲಾರಂಭಿಸಿದೆ. ಇದೆಲ್ಲಾವನ್ನು ಸಂಶೋಧಿಸಿ ವಿಷಯಗಳನ್ನು ಸನ್ನಿವೇಶಗಳಲ್ಲಿ ಕಟ್ಟಿಕೊಡಲಾಗಿದೆ. ನಿರ್ದೇಶಕರು ನನ್ನ ಮನಸ್ಸಿನಲ್ಲಿರುವಂತೆ ತೆರೆ ಮೇಲೆ ತೋರಿಸಿದ್ದಾರೆ. ನೀವುಗಳು ವ್ಯಾಪಕ ಪ್ರಚಾರ ಮಾಡಿದರೆ, ನಮ್ಮ ಶ್ರಮ ಸಾರ್ಥಕವಾದಂತೆ ಎಂದು ಮಾಹಿತಿ ಬಿಚ್ಚಿಟ್ಟರು.

ವಿದ್ಯಾರ್ಥಿಯಾಗಿ ಮಹಾಪದ್ಮ, ಗುರುಮಾತೆ ಪಾತ್ರದಲ್ಲಿ ಉಡುಪಿಯ ಪರಿಪೂರ್ಣ ಚಂದ್ರಶೇಖರ್ ಇವರೊಂದಿಗೆ ರಿಯಲ್‍ದಲ್ಲಿ ಹೆಸರು ಮಾಡಿರುವ ಶತಾವಧಾನಿ ಡಾ.ಆರ್.ಗಣೇಶ್,ಮುಕ್ತಿನಾಗ ದೇವಸ್ಥಾನದ ಧರ್ಮಾಧಿಕಾರಿ ಡಾ.ಗೌರಿ ಸುಬ್ರಹ್ಮಣ್ಯ ಡಾ.ಪ್ರೇಮಾ, ಡಾ.ಹೇಮಂತ್‍ಕುಮಾರ್, ಆಚಾರ್ಯ ಮೃತ್ಯುಂಜಯಶಾಸ್ತ್ರಿ, ಜಿ.ಎಲ್.ಭಟ್(ಶಿಲ್ಪಜ್ಞ), ಮೃತ್ಯುಂಜಯಶಾಸ್ತ್ರಿ, ಪಂಡಿತ ಪ್ರಸನ್ನವೈದ್ಯ, ಡಾ.ದೀಪಕ್‍ಪರಮಶಿವನ್, ಹೇಮಂತಕುಮಾರ.ಜಿ ಬಣ್ಣ ಹಚ್ಚಿರುವುದು ಚಿತ್ರಕ್ಕೆ ಹಿರಿಮೆ ತಂದುಕೊಟ್ಟಿದೆ. ಡಾ.ದೀಪಕ್ ಪರಮಶಿವನ್ ಸಂಗೀತ, ಮನುಯಪ್ಲಾರ್-ನಾಗರಾಜ್ ಅದ್ವಾನಿ-ಗಿರಿಧರ್‍ದಿವಾನ್ ಛಾಯಾಗ್ರಹಣ, ಎನ್.ನಾಗೇಶ್ ನಾರಾಯಣಪ್ಪ ಸಂಕಲನವಿದೆ.
ಸಿನಿಮಾ ಇದೇ ತಿಂಗಳು 12ರಂದು ಸುಚಿತ್ ಫಿಲಂಸ್‍ನ ವೆಂಕಟ್‍ಗೌಡ ರಾಜ್ಯಾದ್ಯಂತ 25 ರಿಂದ 30 ಚಿತ್ರ ಮಂದಿರಗಳಲ್ಲಿ ಬಿಡುಗಡೆ ಮಾಡಲು ಸಿದ್ದತೆ ಮಾಡಿಕೊಂಡಿದ್ದಾರೆ.

