"Paisa Paisa Paisa" song from the movie "Forest" released

“ಫಾರೆಸ್ಟ್” ಚಿತ್ರದ “ಪೈಸಾ ಪೈಸಾ ಪೈಸಾ” ಹಾಡು ಬಿಡುಗಡೆ - CineNewsKannada.com

“ಫಾರೆಸ್ಟ್” ಚಿತ್ರದ “ಪೈಸಾ ಪೈಸಾ ಪೈಸಾ” ಹಾಡು ಬಿಡುಗಡೆ

ಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ, ಮಲ್ಟಿ ಸ್ಟಾರರ್ ಸಿನಿಮಾ “ಫಾರೆಸ್ಟ್” ಚಿತ್ರಕ್ಕಾಗಿ “ಬಹದ್ದೂರ್” ಚೇತನ್ ಕುಮಾರ್ ಬರೆದಿರುವ “ಪೈಸಾ ಪೈಸಾ ಪೈಸಾ” ಹಾಡು ಇತ್ತೀಚಿಗೆ ಬಿಡುಗಡೆಯಾಗಿದೆ.

ಚಂದನ್ ಶೆಟ್ಟಿ ಕಂಠಸಿರಿಯಲ್ಲಿ ಮೂಡಿಬಂದಿರುವ ಈಹಾಡಿಗೆ ಧರ್ಮವಿಶ್ ಸಂಗೀತ ನೀಡಿದ್ದಾರೆ. ಅಜಯ್ ಶಿವಶಂಕರ್ ನೃತ್ಯ ಸಂಯೋಜಿಸಿರುವ ಹಾಡಿಗೆ ಚಿಕ್ಕಣ್ಣ, ಗುರುನಂದನ್, ಅನೀಶ್ ತೇಜೇಶ್ವರ್, ರಂಗಾಯಣ ರಘು, ಶರಣ್ಯ ಶೆಟ್ಟಿ ಹಾಗೂ ಅರ್ಚನಾ ಕೊಟ್ಟಿಗೆ ಹೆಜ್ಜೆ ಹಾಕಿದ್ದಾರೆ.

ರಾಪ್ ಶೈಲಿಯಲ್ಲಿರುವ ಈ ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ.

#ForestMovietill

ಶೀರ್ಷಿಕೆ, ತಾರಾಬಳಗ, ಕಾನ್ಸೆಪ್ಟ್, ಟೀಸರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಜನರ ಮನಸ್ಸಿಗೆ ಹತ್ತಿರವಾಗಿರುವ ಬಹು ನಿರೀಕ್ಷಿತ “ಫಾರೆಸ್ಟ್” ಚಿತ್ರದ ಜನವರಿ 24 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

#ArchanaKottige

ಸದಭಿರುಚಿ ಚಿತ್ರಗಳನ್ನು ನೀಡುವ ಹಂಬಲ ಹೊಂದಿರುವ ಎನ್ ಎಂ ಕಾಂತರಾಜ್ ಅವರು ಎನ್ ಎಂ ಕೆ ಸಿನಿಮಾಸ್ ಬ್ಯಾನರ್ ನಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕಾಡಿನಲ್ಲೇ ನಡೆಯುವ ಅಡ್ವೆಂಚರಸ್ ಕಾಮಿಡಿ ಕಥೆ ಹೊಂದಿರುವ ಈ ಚಿತ್ರವನ್ನು ಚಂದ್ರಮೋಹನ್ ನಿರ್ದೇಶಿಸಿದ್ದಾರೆ. .

#RangayanaRaghu #chikkanna

ಸತ್ಯಶೌರ್ಯ ಸಾಗರ್ ಹಾಗೂ ಚಂದ್ರಮೋಹನ್ ಚಿತ್ರಕ್ಕೆ ಕಥೆ, ಚಿತ್ರಕಥೆ ರಚಿಸಿದ್ದಾರೆ. ಸತ್ಯಶೌರ್ಯ ಸಾಗರ್ ಅವರೆ ಸಂಭಾಷಣೆ ಬರೆದಿದ್ದಾರೆ. ಧರ್ಮವಿಶ್ ಸಂಗೀತ ನಿರ್ದೇಶನ, ಆನಂದ್‍ರಾಜಾ ವಿಕ್ರಮ್ ಹಿನ್ನೆಲೆ ಸಂಗೀತ, ರವಿಕುಮಾರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಅಮರ್ ಕಲಾ ನಿರ್ದೇಶನ ಹಾಗೂ ಡಾ.ರವಿವರ್ಮ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

#guruNanndan #chikkanna

ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು ಪ್ರಮುಖಪಾತ್ರದಲ್ಲಿ ನಟಿಸಿರುವ ತಾರಾಬಳಗದಲ್ಲಿ ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ಅವಿನಾಶ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಾಣಂಜೆ, ಸೂರಜ್ ಪಾಪ್ಸ್, ಸುನೀಲ್‍ಕುಮಾರ್ ಮುಂತಾದವರಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin