ಪ್ಯಾನ್ ಇಂಡಿಯಾ ಚಿತ್ರ “1990ರ” ಪ್ರೇಮಕಥೆ ಟೀಸರ್ ಬಿಡುಗಡೆ : ಕುತೂಹಲ ಹೆಚ್ಚಳ

ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ ಸಿ.ಎಂ ನಿರ್ದೇಶಿಸಿರುವ ಹಾಗೂ ಅರುಣ್ – ರಾಣಿ ವರದ್ ಅಭಿನಯದ “1990ರ” ಚಿತ್ರದ ಟೀಸರ್ ಬಿಡುಗಡೆ ಆಗಿದ್ದು ಗಮನ ಸೆಳೆದಿದೆ.

ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗು ಹಿಂದಿ ಭಾಷೆಯಲ್ಲಿ 1990ರ ಪ್ರೇಮಕಥೆ ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ತಾಂತ್ರಿಕ ಕಾರಣದಿಂದ ಹಿಂದಿ ಟೀಸರ್ ಹೊರತು ಪಡಿಸಿ ಉಳಿದೆಲ್ಲಾ ಭಾಷೆಯ ಟೀಸರ್ ಬಿಡುಗಡೆಯಾಗಿದ್ದು ಕುತೂಹಲ ಹೆಚ್ಚಿಸಿದೆ.

ಲಹರಿ ವೇಲು ಸೇರಿದಂತೆ ಅನೇಕ ಗಣ್ಯರು ನಾಲ್ಕು ಭಾಷೆಗಳ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು.

ಈ ವೇಳೆ ಮಾತಿಗಿಳಿದ ನಿರ್ದೇಶಕ ನಂದಕುಮಾರ್ ಇಪ್ಪತ್ತು ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ನಿರ್ದೇಶಕನಾಗಿ ಇದು ಚೊಚ್ಚಲ ಚಿತ್ರ. ಚಿತ್ರ ಆಗಲು ಪ್ರಮುಖ ಕಾರಣ ಚಿತ್ರದ ಛಾಯಾಗ್ರಹಕ ಹಾಲೇಶ್, ಸಂಗೀತ ನಿರ್ದೇಶಕ ಮಹಾರಾಜ, ಸಂಕಲನಕಾರ ಕೃಷ್ಣ ಹಾಗೂ ನೃತ್ಯ ನಿರ್ದೇಶಕ ಸಾದಿಕ್ ಸರ್ದಾರ್ ಹಾಗೂ ಚಿತ್ರದ ನಾಯಕ ಅರುಣ್ ಸೇರಿ ಎಲ್ಲರೂ ಜೊತೆಗೆ ಕೈಜೋಡಿಸಿದ್ದರಿಂದ ಚಿತ್ರ ನಿರ್ದೇಶನ ಮಾಡಲು ಕಾರಣವಾಯಿತು ಎಂದಿದ್ದಾರೆ.

ನಿರ್ಮಾಣ ಸಂಸ್ಥೆ ಮನಸ್ಸು ಮಲ್ಲಿಗೆ ಕಂಬೈನ್ಸ್ ಗೆ ಆಬಾರಿ. ಇನ್ನು “1990ರ” ತೊಂಭತ್ತರ ದಶಕದಲ್ಲಿ ನಡೆಯುವ ಪ್ರೇಮಕಥೆ. ಅರುಣ್ ಹಾಗೂ ರಾಣಿ ವರದ್ ನಾಯಕ – ನಾಯಕಿಯಾಗಿ ಅಭಿನಯಿಸಿದ್ದಾರೆ. ಸಾಕಷ್ಟು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ. ಚಿತ್ರೀಕರಣ ಹಾಗೂ ನಂತರದ ಚಟುವಟಿಕೆಗಳು ಪೂರ್ಣವಾಗಿದ್ದು, ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದು ಭಾಷೆಗಳಲ್ಲಿ ಈ ಚಿತ್ರ ಬರಲಿದೆ. ಪ್ಯಾನ್ ಇಂಡಿಯಾ ಚಿತ್ರವಾಗಿರುವುದರಿಂದ ಚಿತ್ರದ ಶೀರ್ಷಿಕೆಯನ್ನು “1990ರ” ಎಂದು ಇಡಲಾಗಿದೆ ಎಂದರು

ನಾಯಕ ಅರುಣ್ ಮಾತನಾಡಿ, ರಂಗಭೂಮಿ ಕಲಾವಿದನಾಗಿ ಹತ್ತುವರ್ಷಗಳ ಅನುಭವವಿರುವ ನನಗೆ ಹಿರಿತೆರೆತಲ್ಲಿ ಇದು ಮೊದಲ ಚಿತ್ರ. ನಂದಕುಮಾರ್ ಅವರು ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ಎಲ್ಲರಿಗೂ ಚಿತ್ರ ಹಿಡಿಸುವ ನಂಬಿಕೆ ಇದೆ‌. ಈ ಚಿತ್ರದಲ್ಲಿ ನನ್ನದು ಮುಗ್ದ ಪ್ರೇಮಿಯ ಪಾತ್ರ. ಹಿರಿಯ ಸಂಕಲನಕಾರ ಜನಾರ್ದನ್ ಅವರ ಪುತ್ರ ಎಂದು ಮಾಹಿತಿ ಹಂಚಿಕೊಂಡರು.

ಛಾಯಾಗ್ರಾಹಕ ಹಾಲೇಶ್, ಸಂಗೀತ ನಿರ್ದೇಶಕ ಮಹಾರಾಜ, ಸಂಕಲಕಾರ ಕೃಷ್ಣ, ನೃತ್ಯ ನಿರ್ದೇಶಕ ಸಾದಿಕ್ ಸರ್ದಾರ್ ಮುಂತಾದ ತಂತ್ರಜ್ಞರು ಹಾಗೂ ಕಲಾವಿದರು “1990ರ ಚಿತ್ರದ ಕುರಿತು ಸಮಗ್ರ ಮಾಹಿತಿ ನೀಡಿದರು.

Related Posts

ಕಣ್ಣಿಗೆ ಬಟ್ಟೆ ಕಟ್ಟಿಕೊಂಡು `ಪರಾಕ್’ ಚಿತ್ರದ ಪೋಸ್ಟರ್ ಬಿಡಿಸಿದ ದಾವಣಗೆರೆ ವಿದ್ಯಾರ್ಥಿಗಳು

‘ಪರಾಕ್’ ಚಿತ್ರದ ಚಿತ್ರರಂಗದಲ್ಲಿ ಸದ್ದು ಮಾಡುತ್ತಿದೆ. ಮಕ್ಕಳ ದಿನಾಚರಣೆಯ ವಿಶೇಷ ಸಂದರ್ಭದಲ್ಲಿ ದಾವಣಗೆರೆಯ ಶ್ರೀ ಸಿದ್ದಗಂಗಾ ವಿದ್ಯಾ ಸಂಸ್ಥೆಯ ಶಾಲಾ ಮಕ್ಕಳು ವಿನೂತನ ರೀತಿಯಲ್ಲಿ ಚಿತ್ರತಂಡಕ್ಕೆ ಶುಭ ಹಾರೈಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಚಿತ್ರದ ನಿರ್ದೇಶಕ ಹಾಲೇಶ್ ಕೋಗುಂಡಿ ವ್ಯಾಸಂಗ…

`ಹನುಮಾನ್ 2 ದಿ ರೈಸ್ ಆಫ್ ವಾನರಾಸ್’ ಅಧಿಕೃತ ಘೋಷಣೆ

ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದು ದೇಶಾದ್ಯಂತ ಪ್ರೇಕ್ಷಕರ ಮನಗೆದ್ದ ಬ್ಲಾಕ್‍ಬಸ್ಟರ್ ಸಿನಿಮಾ ಹನು-ಮಾನ್’ ಅಭೂತಪೂರ್ವ ಯಶಸ್ಸಿನ ಬೆನ್ನಲ್ಲೇ, ಸಿನಿಮಾ ಜಗತ್ತನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ಸಜ್ಜಾಗಿದೆ. ಹನುಮಾನ್ 2 – ದಿ ರೈಸ್ ಆಫ್ ವಾನರಾಸ್’ ಚಿತ್ರವನ್ನು ಅಧಿಕೃತವಾಗಿ ಘೋಷಿಸಿದ್ದು,…

Leave a Reply

Your email address will not be published. Required fields are marked *


Notice: ob_end_flush(): Failed to send buffer of zlib output compression (0) in /home/alydqcdn/public_html/wp-includes/functions.php on line 5581