Parishuddam is all set to hit the screens

ಪರಿಶುದ್ದಂ ಚಿತ್ರ ತೆರೆಗೆ ಬರಲು ಸಿದ್ದತೆ - CineNewsKannada.com

ಪರಿಶುದ್ದಂ ಚಿತ್ರ ತೆರೆಗೆ ಬರಲು ಸಿದ್ದತೆ

ವಿಭಿನ್ನ ಕಥಾಹಂದರ ಹೊಂದಿರುವ ‘ಪರಿಶುದ್ಧಂ’ ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು ಎಲ್ಲಾ ಅಂದುಕೊಂಡಂತೆ ಆದರೆ ಈ ತಿಂಗಳಲ್ಲಿಯೇ ಚಿತ್ರ ಪ್ರೇಕ್ಷಕರ ಮುಂದೆ ಬರಲಿದೆ.

ಆರೋನ್ ಕಾರ್ತಿಕ್ ವೆಂಕಟೇಶ್ ಕಥೆ, ಸಾಹಿತ್ಯ, ಸಂಗೀತ ಜತೆಗೆ ನಿರ್ದೇಶನದ ಜವಬ್ದಾರಿ ಹೊತ್ತುಕೊಂಡಿದ್ದಾರೆ, ನಿರ್ಮಾಣದಲ್ಲಿ ಪಾಲುದಾರನಾಗಿದ್ದಾರೆ.

ಮದುವೆ ಅನ್ನುವ ಪದ್ದತಿ ಪರಿಶುದ್ದವಾದದು. ಗಂಡಹೆಂಡತಿ ಸಂಬಂಧದಲ್ಲಿ ಮೂರನೇ ವ್ಯಕ್ತಿ ಪ್ರವೇಶ ಆಗಬಾರದೆಂದು ಸಂದೇಶದಲ್ಲಿ ಹೇಳಲಾಗಿದೆ. ಇದನ್ನು ಕಮರ್ಷಿಯಲ್ ರೀತಿಯಲ್ಲಿ ತೋರಿಸಲಾಗಿದೆ. ನಟಿ ಕಲ್ಪನಾರಂತೆ ಸ್ಪರ್ಶಾರೇಖಾ ತೂಕದ ಪಾತ್ರವನ್ನು ನಿರ್ವಹಿಸಿದ್ದಾರೆ.

ಅತಿಥಿಯಾಗಿ ಎಂ.ಡಿ.ಕೌಶಿಕ್ ಕೊನೆ ದೃಶ್ಯದಲ್ಲಿ ಬರಲಿದ್ದು, ಭಾಗ-2ರಲ್ಲಿ ಇವರಿಂದಲೇ ಸಿನಿಮಾ ಶುರುವಾಗುತ್ತದೆ. ಬೆಂಗಳೂರು, ಮಂಗಳೂರು, ತುಮಕೂರು, ಬ್ಯಾಂಕಾಕ್ ಕಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಚಿತ್ರದಲ್ಲಿ ಇಂಗ್ಲೀಷ್ ಗೀತೆಯೊಂದು ಇರಲಿದ್ದು, ಇದನ್ನು ಗ್ರ್ಯಾಮಿ ಪ್ರಶಸ್ತಿಗೆ ಕಳುಹಿಸಲಾಗಿದೆ. ಎರಡೇ ಸ್ವರದಲ್ಲಿ ‘ಕ’ ಅಕ್ಷರದೊಂದಿಗೆ ಹಾಡನ್ನು ಬರೆಯಲಾಗಿದ್ದು ಎಂ.ಡಿ.ಪಲ್ಲವಿ ಧ್ವನಿಯಾಗಿದ್ದಾರೆ.

ರೋಹನ್ ಕಿಡಿಯಾರ್ ಬಂಡವಾಳ ಹೂಡುವ ಜತೆಗೆ ಸ್ವರ್ಶಾರೇಖಾ ಅವರಿಗೆ ಜೋಡಿಯಾಗಿ ನಟಿಸಿದ್ದಾರೆ. ಕುಮಾರ್‍ರಾಥೋಡ್ ನಿರ್ಮಾಪಕರಲ್ಲಿ ಒಬ್ಬರಾಗಿದ್ದಾರೆ.

ಮತ್ತೋಂದು ಮುಖ್ಯ ಪಾತ್ರದಲ್ಲಿ ದಿಶಾಪೂವಯ್ಯ ಉಳಿದಂತೆ ಯತಿರಾಜ್,ಭಾರ್ಗವ್, ಅರ್ಚನಾ, ವಿಕ್ಟರಿವಾಸು, ಕುರಿರಂಗ, ಮೈಸೂರುರಮಾನಂದ್, ರಾಜ್‍ಚರಣ್, ದುಬೈ ರಫೀಕ್ ಮುಂತಾದವರು ಅಭಿನಯಿಸಿದ್ದಾರೆ. ಸಂಕಲನ ನಿಖಿಲ್, ಸಂಭಾಷಣೆ ವಿನಯ್‍ಮೂರ್ತಿ, ಸಾಹಸ ರಾಮ್‍ದೇವ್, ನೃತ್ಯ ಕಿಶೋರ್ ಅವರದಾಗಿದೆ. ಸಿನಿಮಾವು ಸೆಪ್ಟಂಬರ್ ತಿಂಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin