Police officer actor Rishi again: "Rudra Garuda Purana" teaser released

ಮತ್ತೊಮ್ಮೆ ಪೊಲೀಸ್ ಅಧಿಕಾರಿಯಾದ ನಟ ರಿಷಿ: “ರುದ್ರ ಗರುಡ ಪುರಾಣ” ಟೀಸರ್ ಬಿಡುಗಡೆ - CineNewsKannada.com

ಮತ್ತೊಮ್ಮೆ ಪೊಲೀಸ್ ಅಧಿಕಾರಿಯಾದ ನಟ ರಿಷಿ: “ರುದ್ರ ಗರುಡ ಪುರಾಣ” ಟೀಸರ್ ಬಿಡುಗಡೆ

ಕನ್ನಡದ ಪ್ರತಿಭಾನ್ವಿತ ನಟ ರಿಷಿ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ “ರುದ್ರ ಗರುಡ ಪುರಾಣ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಟೀಸರ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ. ಇದು ಚಿತ್ರತಂಡದ ಮುಖದಲ್ಲಿ ಮಂದಹಾಸ ಹೆಚ್ಚಿಸಿದೆ.

ಟೀಸರ್ ಬಿಡುಗಡೆ ಬಳಿಕ ಮಾಹಿತಿ ನೀಡಿದ ನಟ ರಿಷಿ, ಸುತ್ತಮುತ್ತ ನಡೆಯುವ ಅನೇಕ ಸಮಸ್ಯೆಗಳನ್ನಿಟ್ಟುಕೊಂಡು ನಿರ್ದೆಶಕ ನಂದೀಶ್ ಚಿತ್ರದ ಕಥೆ ಮಾಡಿದ್ದಾರೆ. ಪುನೀತ್ ರಾಜಕುಮಾರ್ ನಿರ್ಮಾಣದ “ಕವಲುದಾರಿ” ಚಿತ್ರದ ನಂತರ ಈ ಚಿತ್ರದಲ್ಲಿ ಪೆÇಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ರುದ್ರ ನನ್ನ ಪಾತ್ರದ ಹೆಸರು ಎಂದರು

ನಿರ್ದೇಶಕ ನಂದೀಶ್ ಮಾತನಾಡಿ,ವಿಮಾನ ಅಪಹರಣದ ಬಳಿಕ 30 ವರ್ಷಗಳ ಬಳಿಕ ವಾಪಸ್ ಬರುವುದು,ಇಡೀ ಭೂಮಂಡಲ ಗೆಲ್ಲಬೇಕು ಎಂದು ಕನಸು ಕಟ್ಟಿಕೊಂಡ ರಾಜ ಲಕ್ಷಾಂತರ ಮಂದಿ ಕೊಲ್ಲುವ ಕಥೆ, ಯುದ್ದ ಮುಗಿದ ಮೇಲೆ ರಣರಂಗಕ್ಕೆ ಹೋದಾಗ ಅಲ್ಲಿನ ಸಾಲು ಸಾಲು ಹೆಣದ ರಾಶಿ. ಸತ್ತಿದ್ದ ಸೈನಿಕನೊಬ್ಬನ ಮಾಂಸವನ್ನು ಮನುಷ್ಯನೊಬ್ಬ ತಿನ್ನುತ್ತಿರುತ್ತಾನೆ. ಆ ಸಮಯಕ್ಕೆ ರಾಜ ಅಲ್ಲಿಗೆ ಬರುತ್ತಾನೆ. ಆ ಮನುಷ್ಯ ರಾಜನನ್ನು ಕುರಿತು, ಕ್ಷಮಿಸು ರಾಜ ನಾನು ನಿನ್ನ ಆಹಾರವನ್ನು ತಿನ್ನುತ್ತಿದ್ದೇನೆ ಎನ್ನುತ್ತಾನೆ. ಆಗ ರಾಜ ನಾನು ನಿನ್ನ ಹಾಗೆ ನರಭಕ್ಷಕ ಅಲ್ಲ ಏನುತ್ತಾನೆ. ಆಗ ಆ ಮನುಷ್ಯ ಹಾಗಾದರೆ ಇಷ್ಟು ಜನರನ್ನು ಏಕೆ ಸಾಯಿಸಿದಿಯಾ ಎಂದು ರಾಜನನ್ನು ಕೇಳುತ್ತಾನೆ ಈ ಎರಡು ಉಪಕಥೆಗಳೇ ನಮ್ಮ ಚಿತ್ರದ ಕಥೆಗೆ ಸ್ಪೂರ್ತಿ ಎಂದು ಮಾಹಿತಿ ನೀಡಿದರು

ನಾಯಕಿ ಪ್ರಿಯಾಂಕ ಕುಮಾರ್ ಮತಾನಾಡಿ ಅಭಿನಯದ ಎರಡನೇ ಚಿತ್ರ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದು ತಿಳಿಸಿದರು.

ಹಿರಿಯ ನಟ ನಟ ವಿನೋದ್ ಆಳ್ವಾ ಮಾತನಾಡಿ ಜೇಕಬ್ ವರ್ಗೀಸ್ ಹಾಗೂ ನಾನು ಸ್ನೇಹಿತರು. ಜೇಕಬ್ ಅವರ ಜೊತೆಗೆ ಕೆಲಸ ಮಾಡುತ್ತಿದಾಗಿನಿಂದಲೂ ನನಗೆ ನಂದೀಶ್ ಪರಿಚಯ. ನಂದೀಶ್ ಈ ಚಿತ್ರದ ಕಥೆ ಹೇಳಿದಾಗ ಇಷ್ಟವಾಯಿತು. ಅಭಿನಯಿಸಿದ್ದೇನೆ ಎಂದರು

ಕೆ.ಎಸ್ ಶ್ರೀಧರ್, ಗಿರೀಶ್ ಶಿವಣ್ಣ, ಶಿವರಾಜ ಕೆ.ಆರ್ ಪೇಟೆ, ಸಂಗೀತ ನಿರ್ದೇಶಕ ಕೆಪಿ, ಛಾಯಾಗ್ರಾಹಕ ಸಂದೀಪ್ ಕುಮಾರ್ ಹಾಗೂ ಸಂಭಾಷಣೆ ಬರೆದಿರುವ ರಘು ನಿಡವಳ್ಳಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

ಅಶ್ವಿನಿ ಲೋಹಿತ್ ಚಿತ್ರ ನಿರ್ಮಾಣ ಮಾಡಿದ್ದು ಪತಿ ಲೋಹಿತ್ ಚಿತ್ರ ಚೆನ್ನಾಗಿ ಮೂಡಿಬರಲು ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin