” ರಾಮ” ಚಿತ್ರದ ಪೋಸ್ಟರ್ ಸಾಲುಮರದ ತಿಮ್ಮಕ್ಕ ಬಿಡುಗಡೆ

ಕಾಡು, ಕಾಡಿನ ಪರಿಸರ, ಸಂಪತ್ತನ್ನು ಉಳಿಸುವ ಕಾನ್ಸೆಪ್ಟ್ ಇಟ್ಟುಕೊಂಡು ಅನೇಕ ಚಲನಚಿತ್ರಗಳು ನಿರ್ಮಾಣವಾಗಿವೆ. ಕಾಡಿನ ಹಿನ್ನೆಲೆಯಲ್ಲಿ ಮಕ್ಕಳ ಸಾಹಸದ ಕಥೆಯೊಂದನ್ನು ಹೇಳುವ ಚಿತ್ರವೊಂದು ಇದೀಗ ತಯಾರಾಗಿದೆ. ಆ ಚಿತ್ರದ ಹೆಸರು ” ರಾಮ ” ವೆಸ್ಲಿ ಬ್ರೌನ್ ಅವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರದ ಪೋಸ್ಟರ್ ಇತ್ತೀಚೆಗೆ ಬಿಡುಗಡೆಯಾಗಿದೆ.

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ರಾಮ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿ,ಪರಿಸರ ಹಾಗೂ ಅದರ ಉಳಿವು ಮತ್ತು ಅದರ ಬಗ್ಗೆ ಜಾಗೃತಿ ಮೂಡಿಸುವ ಉತ್ತಮ ಸಿನಿಮಾ ನಿರ್ಮಾಣ ಮಾಡಿದ್ದೀರಿ ಚಿತ್ರತಂಡಕ್ಕೆ, ನಿರ್ದೇಶಕ, ನಿರ್ಮಾಪಕರಿಗೆ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು.

ಕಾಡು ಮತ್ತು ಪರಿಸರ ಉಳಿಸುವ ಸಂದೇಶ ಹೇಳುವ ಉತ್ತಮ ಕಥಾಹಂದರವನ್ನು ಈ ಚಿತ್ರ ಒಳಗೊಂಡಿದೆ. ಮರಗಳನ್ನು ಕಡಿಯಲು ಬಂದವರನ್ನು ಶಾಲೆಯ ಮಕ್ಕಳು ತಡೆಯುವ ಕಾನ್ಸೆಪ್ಟ್ ಇಟ್ಟುಕೊಂಡು ನಿರ್ದೇಶಕರು ಈ ಚಿತ್ರವನ್ನು ನಿರೂಪಿಸಿದ್ದಾರೆ.

ನಿಕ್ಕಿನಾಶ್ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿಶ್ಚಲ್ ಬಿ.ಎಂ. ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು,ಸುಷ್ಮಾ ವೆಸ್ಲಿ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.ಸಹ ನಿರ್ಮಾಪಕರಾಗಿ ನೆ.ಲ.ಮಹೇಶ್-ನೇವಿ ಮಂಜು-ವೆಸ್ಲಿ ಬ್ರೌನ್ ಕೈಜೋಡಿಸಿದ್ದಾರೆ.

ವೆಸ್ಲಿ ಬ್ರೌನ್ ಕಥೆ, ಚಿತ್ರಕಥೆ, ನಿರ್ದೇಶನ, ಛಾಯಾಗ್ರಹಣ ಹಾಗೂ ಸಂಕಲನ ಈ ಚಿತ್ರಕ್ಕಿದ್ದು, ಡಾ. ವಿ.ನಾಗೇಂದ್ರಪ್ರಸಾದ್ ಅವರ ಸಾಹಿತ್ಯ, ನವೀನ್ ಕೃಷ್ಣ ಅವರ ಸಂಭಾಷಣೆ, ಅಭಿಲಾಷ್ ಲಾಕ್ರಾ-ಜುವೆಲ್ ದುಬಾ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.

ಈಗಾಗಲೇ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು,ಪೋಸ್ಟ್ ಪ್ರೊಡಕ್ಷನ್ಸ್ ಕಾರ್ಯ ನಡೆಯುತ್ತಿದೆ. ಮರಗಳು ಮತ್ತು ಅದರ ಬೇರುಗಳು ಮಾತನಾಡಿಕೊಳ್ಳುವುದನ್ನು ವಿನೂತನ ಗ್ರಾಫಿಕ್ಸ್ ಬಳಸಿ ತಯಾರಿಸಲಾಗಿದೆ.

ಚಿತ್ರದ ಪ್ರಮುಖ ತಾರಾಗಣದಲ್ಲಿ ಮಾಸ್ಟರ್ ದನಾಶ, ಮಾಸ್ಟರ್ ವಿಹಾನ್, ಬೇಬಿ ಶರೋನ್, ಬೇಬಿ ಸುಧೀಕ್ಷಾ, ಮಾಸ್ಟರ್ ಅಭಿನವ್, ಮಾಸ್ಟರ್ ಶಾ ಅಬ್ದುಲ್ ಅಜೀಜ್, ಮಾಸ್ಟರ್ ದರ್ಶ ಮತ್ತಿತರಿದ್ದಾರೆ.ವಿಶೇಷ ಪಾತ್ರದಲ್ಲಿ ನೆಲ ನರೇಂದ್ರಬಾಬು, ದೇವಿ ಮಂಜು, ಭಾವನಾ ಚಂದ್ರಶೇಖರ್, ರೋಹಿಣಿ ಅಭಿನಯಿಸಿದ್ದಾರೆ.

Related Posts

ಸತ್ಯ ಸನ್ ಆಫ್ ಹರಿಶ್ಚಂದ್ರ’ ಚಿತ್ರದ ಗಾ ಗರಗ’ ಹಾಡು ಬಿಡುಗಡೆ

ನಟ ನಿರೂಪ್ ಭಂಡಾರಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ಸತ್ಯ ಸನ್ ಆಫ್ ಹರಿಶ್ಚಂದ್ರ’ ಚಿತ್ರದ ಗಾ ಗರಗ’ ಭಾವನಾತ್ಮಕ ಹಾಗೂ ಅರ್ಥಪೂರ್ಣ ಗೀತೆ ಅಧಿಕೃತವಾಗಿ ಬಿಡುಗಡೆಯಾಗಿದೆ. ಸಂಗೀತ ನಿರ್ದೇಶಕ ಸಚಿನ್ ಬಸ್ರೂರ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಹಾಡಿಗೆ ಬಾಲಿವುಡ್‍ನ ಜನಪ್ರಿಯ ಗಾಯಕ…

57ನೇ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ಭಾರತೀಯ ಪನೋರಮಾಗೆ ತುಳು ಚಿತ್ರ `ಪಿಲಿ ಚನ್ನೆ’ ಆಯ್ಕೆ

`ನಡುಬೆಟ್ಟು ಅಪ್ಪಣ್ಣ’ ನಂತರ ಅನುಪಮ ಶರಧಿ ನಿರ್ದೇಶನದ ಎರಡನೇ ಚಿತ್ರಕ್ಕೆ ರಾಷ್ಟ್ರಮಟ್ಟದ ಗೌರವ ಒಂದೇ ಚಿತ್ರದಲ್ಲಿ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿದ ಬಹುಮುಖ ಪ್ರತಿಭೆ ಎನ್ನುವ ಹಿರಿಮೆಗೆ ಪಾತ್ರರಾಗಿದ್ಧಾರೆ ಭಾರತೀಯ ಚಿತ್ರರಂಗದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಒಂದಾದ 57ನೇ ಭಾರತೀಯ ಅಂತರಾಷ್ಟ್ರೀಯ ಚಿತ್ರೀತ್ಸೋತ್ಸ ಗೋವಾದಲ್ಲಿ…

Leave a Reply

Your email address will not be published. Required fields are marked *


Notice: ob_end_flush(): Failed to send buffer of zlib output compression (0) in /home/alydqcdn/public_html/wp-includes/functions.php on line 5581