ಹ್ಯಾಟ್ರಿಕ್ ಚಿತ್ರಗಳಿಗೆ ಜೊತೆಯಾದ ಪ್ರಿಯಾಂಕ ಉಪೇಂದ್ರ- ಲೋಹಿತ್ :ರವಿರಾಜ್ ಪೂರ್ಣ ಪ್ರಮಾಣದ ನಿರ್ಮಾಪಕ

ಹಿರಿಯ ನಟಿ ರಾಧಿಕಾ ಕುಮಾರ ಸ್ವಾಮಿ ಅವರ ಸಹೋದರ ರವಿರಾಜ್ ಪೂರ್ಣ ಪ್ರಮಾಣದ ನಿರ್ಮಾಪಕರಾಗಿ ಚಿತ್ರರಂಗದಲ್ಲಿ ಅದೃಷ್ಠ ಕಂಡುಕೊಳ್ಳಲು ಮುಂದಾಗಿದ್ದಾರೆ. ಇದಕ್ಕಾಗಿ ಈ ಹಿಂದೆ ಎರಡು ಚಿತ್ರಗಳಲ್ಲಿ ಜೊತೆಯಾಗಿ ಕೆಲಸ ಮಾಡಿದ್ದ ಹಿರಿಯ ನಟಿ ಪ್ರಿಯಾಂಕ ಉಪೇಂದ್ರ , ನಿರ್ದೇಶಕ ಲೋಹಿತ್ ಜೋಡಿಗೆ ಸಾಥ್ ನೀಡಿದ್ದಾರೆ

ಮಮ್ಮಿ, ದೇವಕಿ ಸಿನಿಮಾಗಳ ಬಳಿಕ ನಿರ್ದೇಶಕ ಲೋಹಿತ್ ಮತ್ತು ನಟಿ ಪ್ರಿಯಾಂಕಾ ಉಪೇಂದ್ರ ಮೂರನೇ ಬಾರಿಗೆ ಒಂದಾಗಿದ್ದಾರೆ. ಇವರಿಬ್ಬರ ಕಾಂಬಿನೇಷನ್ ಸಿನಿಮಾಗೆ ರಾಧಿಕಾ ಕುಮಾರ ಸ್ವಾಮಿ ಅವರ ಸಹೋದರ ರವಿರಾಜ್ ಅವರು ತಮ್ಮ ಶ್ರೀ ದುರ್ಗಾಪರಮೇಶ್ವರಿ ಬ್ಯಾನರ್ ಬಂಡವಾಳ ಹೂಡಿದ್ದಾರೆ. ಈ ಬ್ಯಾನರ್‍ನಲ್ಲಿ ಮೂಡಿ ಬರುತ್ತಿರುವ ಮೊದಲ ಸಿನಿಮಾ ಇದಾಗಿದೆ.
ನಟಿ ಪ್ರಿಯಾಂಕಾ ಉಪೇಂದ್ರ ಅವರು ಮಮ್ಮಿ ಬಳಿಕ ಮತ್ತೆ ಹಾರರ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಈಗಾಗಲೇ ಸಿನಿಮಾದ ಶೂಟಿಂಗ್ ಸಂಪೂರ್ಣವಾಗಿ ಮುಗಿಸಿದ್ದು ಬಿಡುಗಡೆಗೆ ಸಜ್ಜಾಗಿದೆ. ನಿರ್ದೇಶಕ ಲೋಹಿತ್ ಸದ್ದುಗದ್ದಲವಿಲ್ಲದೆ ಚಿತ್ರೀಕರಣ ಪೂರ್ಣಗೊಳಿಸಿ ಚಿತ್ರವನ್ನು ಚಿತ್ರಮಂದಿರದ ಅಂಗಳಕ್ಕೆ ಬರಲು ಎದುರು ನೋಡುತ್ತಿದ್ದಾರೆ. ಪ್ರಿಯಾಂಕಾ ಮತ್ತು ಲೋಹಿತ್ ಕಾಂಬಿನೇಷನ್‍ನ ಹ್ಯಾಟ್ರಿಕ್ ಸಿನಿಮಾ ಇದಾಗಿದ್ದು ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಾಗಿದೆ.

ಸಿನಿಮಾಗೆ ಇನ್ನೂ ಟೈಟಲ್ ಫೈನಲ್ ಆಗಿಲ್ಲ. ಸದ್ಯದಲ್ಲೇ ಟೈಟಲ್ ಮೂಲಕ ಅಭಿಮಾನಿಗಳ ಮುಂದೆ ಬರಲಿದೆ ಸಿನಿಮಾ. ಹಾರರ್ ಸಿನಿಮಾ ಅಂದಮೇಲೆ ಭಯ, ಕುತೂಹಲ, ಟ್ವಿಸ್ಟ್‍ಗಳು ಇದ್ದೇ ಇರುತ್ತೆ. ಇದೆಲ್ಲದರ ಜೊತೆಗೆ ಈ ಸಿನಿಮಾ ಒಂದು ವಿಭಿನ್ನ ಅನುಭವ ನೀಡಲಿದೆ. ಯಾಕೆಂದ್ರೆ ಸಂಪೂರ್ಣ ಸಿನಿಮಾ ಸಿಸಿ ಟಿವಿ ಕಾನ್ಸೆಪ್ಟ್‍ನಲ್ಲಿ ಚಿತ್ರೀಕರಣ ಮಾಡಲಾಗಿದೆ. ಈ ರೀತಿಯ ಪ್ರಯತ್ನ ಮಾಡಿದ್ದು ವಿಶ್ವದಲ್ಲಿಯೇ ಮೊದಲ ಬಾರಿಗೆ ಎನ್ನುವುದು ವಿಶೇಷ.

ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ಅವರ ಸಹೋದರ ರವಿರಾಜ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಮೊದಲ ಸಿನಿಮಾ ಇದಾಗಿದೆ. ಈ ಮೊದಲು ರವಿರಾಜ್ ತಮ್ಮ ಸಹೋದರಿ ರಾಧಿಕಾ ಜೊತೆ ಶಮಿಕಾ ಎಂಟರ್ ಪ್ರೈಸಸ್ ನಲ್ಲಿ ಸಹ ನಿರ್ಮಾಪಕರಾಗಿ ಕೆಲಸ ಮಾಡಿದ್ದರು. ‘ಲಕ್ಕಿ’, ‘ಸ್ವೀಟಿ ನನ್ನ ಜೋಡಿ’, ಭೈರಾದೇವಿ ಸಿನಿಮಾಗಳಲ್ಲಿ ರವಿರಾಜ್ ಸಹ ನಿರ್ಮಾಪಕರಾಗಿ ಕೆಲಸ ಮಾಡಿದ್ದರು. ಆದರೀಗ ಹಾರರ್ ಸಿನಿಮಾ ಮೂಲಕ ಸ್ವತಂತ್ರ ನಿರ್ಮಾಪಕರಾಗಿ ಚಂದನವನಕ್ಕೆ ಪದಾರ್ಪಣೆ ಮಾಡತ್ತಿದ್ದಾರೆ.
ಸೈಲೆಂಟ್ ಆಗಿ ಶೂಟಿಂಗ್ ಮುಗಿಸಿರುವ ನಿರ್ದೇಶಕ ಲೋಹಿತ್ ಸದ್ಯದಲ್ಲೇ ಚಿತ್ರಮಂದಿರದ ಅಂಗಳಕ್ಕೆ ಬರುವ ಪ್ರಯತ್ನದಲ್ಲಿದ್ದಾರೆ. ಚಿತ್ರದಲ್ಲಿ ಪ್ರಿಯಾಂಕಾ ಉಪೇಂದ್ರ ಜೊತೆಗೆ ಇನ್ನು ಯಾರೆಲ್ಲ ಕಲಾವಿದರು ನಟಿಸಿದ್ದಾರೆ, ಟೈಟಲ್ ಹಾಗೂ ರಿಲೀಸ್ ಡೇಟ್ ಬಗ್ಗೆ ಸದ್ಯದಲ್ಲೇ ಮಾಹಿತಿ ಬಹಿರಂಗವಾಲಿದೆ.