Producer Nivedita Shivaraj Kumar's 'Fire Fly' audio rights sold for record amount

ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ‘ಫೈರ್ ಫ್ಲೈ ಆಡಿಯೋ ಹಕ್ಕು ದಾಖಲೆ ಮೊತ್ತಕ್ಕೆ ಮಾರಾಟ - CineNewsKannada.com

ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ‘ಫೈರ್ ಫ್ಲೈ  ಆಡಿಯೋ ಹಕ್ಕು ದಾಖಲೆ ಮೊತ್ತಕ್ಕೆ ಮಾರಾಟ

ಕನ್ನಡದ ಬಹುನಿರೀಕ್ಷಿತ ಸಿನಿಮಾ “ಫೈರ್‌ಫ್ಲೆöÊ” ಬಹಳ ವಿಶೇಷವಾಗಿದೆ. ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಚೊಚ್ಚಲ ಚಿತ್ರದಲ್ಲಿ ಅಚ್ಯುತ್ ಕುಮಾರ್ ಹಾಗೂ ಸುಧಾರಾಣಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ನವ ನಾಯಕ ಮತ್ತು ನಿರ್ದೇಶಕ ವಂಶಿ ಸಾರಥ್ಯದಲ್ಲಿ ಮೂಡಿ ಬರ್ತಿರುವ ‘ಫೈರ್ ಫ್ಲೈ ಸಿನಿಮಾದ ಆಡಿಯೋ ಹಕ್ಕು ದಾಖಲೆ ಮೊತ್ತಕ್ಕೆ ಮಾರಾಟವಾಗಿದೆ.

ವಂಶಿ ಚೊಚ್ಚಲ ಬಾರಿಗೆ ನಿರ್ದೇಶಿಸಿ ನಟಿಸುತ್ತಿರುವ “’ಫೈರ್ ಫ್ಲೈ ಸಿನಿಮಾಗೆ ಚರಣ್ ರಾಜ್ ಅದ್ಭುತ ಸಂಗೀತ ಒದಗಿಸಿದ್ದಾರೆ. ಶೀಘ್ರದಲ್ಲಿಯೇ ಚರಣ್ ಟ್ಯೂನ್ ಹಾಕಿರುವ ಹಾಡುಗಳ ಹಬ್ಬ ಆನಂದ್ ಆಡಿಯೋ ಯೂಟ್ಯೂಬ್‌ನಲ್ಲಿ ಶುರುವಾಗಲಿದೆ. ಆನಂದ್ ಆಡಿಯೋ ಸಂಸ್ಥೆ ಒಂದೊಳ್ಳೆ ಮೊತ್ತಕ್ಕೆ ‘ಫೈರ್ ಫ್ಲೈ ಆಡಿಯೋ ಹಕ್ಕನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ.

‘ಫೈರ್ ಫ್ಲೈ ಸಿನಿಮಾದಲ್ಲಿ ವಂಶಿ ಅವರು ಹೀರೋ ಆಗಿ ಅಭಿನಯಿಸುತ್ತಿದ್ದಾರೆ. ಅಲ್ಲದೇ, ಅವರೇ ನಿರ್ದೇಶನ ಕೂಡ ಮಾಡುತ್ತಿದ್ದಾರೆ. `ಹ್ಯಾಟ್ರಿಕ್ ಹೀರೋ’ ಶಿವರಾಜ್ ಕುಮಾರ್ ಅವರ ಪುತ್ರಿ ನಿವೇದಿತಾ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಮೂಲಕ ವಂಶಿ ಅವರು ಸ್ವತಂತ್ರ ನಿರ್ದೇಶಕರಾಗಿ ಹಾಗೂ ಪೂರ್ಣಪ್ರಮಾಣದ ಹೀರೋ ಆಗಿ ಪ್ರೇಕ್ಷಕರರ ಮುಂದೆ ಬರಲಿದ್ದಾರೆ.

ಈ ಚಿತ್ರಕ್ಕೆ ಜಯ್ ರಾಮ್ ಅವರು ಸಹ ನಿರ್ದೇಶಕನ ಮಾಡುತ್ತಿದ್ದಾರೆ. ಅಭಿಲಾಷ್ ಕಳತ್ತಿ ಅವರ ಛಾಯಾಗ್ರಹಣ, ಚರಣ್ ರಾಜ್ ಅವರ ಸಂಗೀತ ನಿರ್ದೇಶನ, ರಘು ನಿಡುವಳ್ಳಿ ಅವರ ಸಂಭಾಷಣೆ ಈ ಸಿನಿಮಾಗಿದೆ. ಬೆಳಕಿನ ಹಬ್ಬ ದೀಪಾವಳಿಗೆ ಫೈರ್ ಫ್ಲೆöÊ ಸಿನಿಮಾ ಥಿಯೇಟರ್ ಬೆಳಗಲಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin