Promising actress Sushmita Bhatt joins the “Karavali” team

“ಕರಾವಳಿ” ತಂಡದ ಜೊತೆಯಾದ ಭರವಸೆಯ ನಟಿ ಸುಷ್ಮಿತಾ ಭಟ್ - CineNewsKannada.com

“ಕರಾವಳಿ” ತಂಡದ ಜೊತೆಯಾದ ಭರವಸೆಯ ನಟಿ ಸುಷ್ಮಿತಾ ಭಟ್

ಒಂದಲ್ಲ ಒಂದು ವಿಚಾರದಿಂದ ಸುದ್ದಿ ಮಾಡುತ್ತಿರುವ “ಕರಾವಳಿ” ಚಿತ್ರತಂಡಕ್ಕೆ ಹೊಸ ಸೇರ್ಪಡೆಯಾಗಿದೆ. ಮಹಾವೀರನಾಗಿ ರಾಜ್ ಬಿ ಶೆಟ್ಟಿ ಸೇರಿಕೊಂಡಿದ್ದ ಬೆನ್ನಲ್ಲೇ ಭರವಸೆಯ ನಟಿ ಸುಷ್ಮಿತಾ ಭಟ್ ಹೊಸ ಸೇರ್ಪಡೆಯಾಗಿದ್ದಾರೆ. ಅಂದಹಾಗೆ ಸುಷ್ಮಿಶಾ ಭಟ್ ಅವರದು ಕರಾವಳಿ ಮೂರನೇ ಚಿತ್ರ.

ಸೋಷಿಯಲ್ ಮಿಡಿಯಾದಲ್ಲಿ ಫೋಟೋ ಶೂಟ್ ಮೂಲಕವೇ ಸದ್ದು ಮಾಡ್ತಿದ್ದ ಸುಷ್ಮಿತಾ ಭಟ್ ಈಗ ಬೆಳ್ಳಿತೆರೆ ಮೇಲೆ ಮಿಂಚಲು ಸಜ್ಜಾಗಿದ್ದಾರೆ. ಸದ್ಯ ಸಿನಿಮಾತಂಡ ಸುಷ್ಮಿತಾ ಅವರ ಪಾತ್ರದ ಪೋಸ್ಟರ್ ರಿಲೀಸ್ ಮಾಡಿದ್ದಾರೆ .. ಪಕ್ಕ ಮಂಗಳೂರಿನ ಹುಡುಗಿ ಪಾತ್ರದಲ್ಲಿ ಕಾಣಿಸಿಕೊಳ್ತಿರೋ ಸುಷ್ಮಿತಾ ಕರಾವಳಿ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ..

ಕರಾವಳಿ ಚಿತ್ರತಂಡ ಸುಷ್ಮಿತಾ ಅವರನ್ನು ಪಾತ್ರಕ್ಕಾಗಿ ಅಪ್ರೋಚ್ ಮಾಡಿದಾಗ ಸುಷ್ಮಿತಾ ಖುಷಿಯಿಂದ ಒಪ್ಪಿಕೊಂಡಿದ್ದಾರೆ .. ಕರಾವಳಿ ಪಾತ್ರ ಒಪ್ಪಿಕೊಳ್ಳಲು ಮೊದಲ ಕಾರಣ ರಾಜ್ ಬಿ ಶೆಟ್ಟಿ ಅಂತಾರೆ ಸುಷ್ಮಿತಾ. ರಾಜ್ ಬಿ ಅವರಿಂದ ತುಂಬಾ ಕಲಿಯಬಹುದು ಅನ್ನೋ ಉದ್ದೇಶದಿಂದಲೇ ಸಿನಿಮಾ ಒಪ್ಪಿಕೊಂಡೆ ಚಿತ್ರೀಕರಣ ಮಾಡಿದ್ದು ಕಡಿಮೆ ದಿನಗಳು ಆದರೂ ಕೂಡ ಸಾಕಷ್ಟು ಕಲಿತಿದ್ದೇನೆ ಎಂದಿದ್ಧಾರೆ ಸುಶ್ಮಿತಾ ಭಟ್.

ರಾಜ್ ಬಿ ಶೆಟ್ಟಿ ಪವರ್ ಹೌಸ್ ಇದ್ದಂಗೆ ಅವರಿಗೆ ಸಖತ್ ಎನರ್ಜಿ ಇದೆ ಸೆಟ್ ನಲ್ಲಿ ಯಾವಾಗಲೂ ಆಕ್ಟಿವ್ ಆಗಿರ್ತಾರೆ ಅವರ ಜೊತೆ ಕೆಲಸ ಮಾಡಿದ್ದು ತುಂಬಾ ಖುಷಿ ಇದೆ ಎಂದಿದ್ದಾರೆ.ಕರಾವಳಿ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್ , ಸಂಪದಾ ಹಾಗೂ ರಾಜ್ ಬಿ ಶೆಟ್ಟಿ ಸೇರಿದಂತೆ ಸಿನಿಮಾದ ಪವರ್ ಫುಲ್ ಪಾತ್ರದಲ್ಲಿ ನಟ ಮಿತ್ರ, ರಮೇಶ್ ಇಂದಿರ, ಶ್ರೀಧರ್ ಕಾಣಿಸಿಕೊಂಡಿದ್ದಾರೆ.

ಕರಾವಳಿ ಗುರುದತ್ ಗಾಣಿಗ ನಿರ್ದೇಶನದ ಜೊತೆಗೆ ನಿರ್ಮಾಣ ಕೂಡ ಮಾಡುತ್ತಿದ್ದಾರೆ. ಕರಾವಳಿ ಮನುಷ್ಯ ಹಾಗೂ ಪ್ರಾಣಿ ಮಧ್ಯೆ ನಡೆಯುವ ಸಂಘರ್ಷದ ಕಥೆ. ಪಕ್ಕಾ ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಸಿನಿಮಾ ಮೂಡಿ ಬರಲಿದೆ. ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಭಿಮನ್ಯೂ ಸದಾನಂದನ್ ಕ್ಯಾಮರ ವರ್ಕ್ ಚಿತ್ರಕ್ಕಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin