ಸೈಕಾಲಜಿಕಲ್ ಥ್ರಿಲ್ಲರ್ “ವಿಕಲ್ಪ” ಜನವರಿ 30 ರಂದು ತೆರೆಗೆ
ಮಾನಸಿಕ ವ್ಯಾಧಿ ಕುರಿತು ಕಥೆ ಆಧರಿಸಿದ ಸೈಕಾಲಜಿಕಲ್-ಥ್ರಿಲ್ಲರ್ ಕಥಾಹಂದರದ “ವಿಕಲ್ಪ” ಚಿತ್ರ ಜನವರಿ 30ರಂದು ರಾಜ್ಯಾದ್ಯಂತ ತೆರೆಗೆ ಬರಲು ಸಜ್ಜಾಗಿದೆ.

ಚಿತ್ರ ಬಿಡುಗಡೆಗೆ ಸಜ್ಜಾಗಿರುವ ಹಿನ್ನೆಲೆಯಲ್ಲಿ ಟ್ರೈಲರ್ ಬಿಡುಗಡೆ ಹಮ್ಮಿಕೊಳ್ಳಲಾಗಿತ್ತು. ನಿರ್ದೇಶಕ ಜಯತೀರ್ಥ ಹೊಸ ತಂಡದ ಪ್ರಯತ್ನಕ್ಕೆ ಬೆನ್ನುತಟ್ಟಿ ಕಥಾಹಂದರ, ಮೇಕಿಂಗ್, ಟೀಸರ್, ಹಾಡುಗಳು ಎಲ್ಲವೂ ಚಿತ್ರದ ಬಗ್ಗೆ ಒಂದಷ್ಟು ಭರವಸೆ ಮೂಡಿಸುವಂತಿದೆ. ಚಿತ್ರ ಬಿಡುಗಡೆಯಾಗಿ ಯಶಸ್ವಿಯಾಗಲಿ’ ಎಂದು ಎಂದು ಹಾರೈಸಿದರು
ಇಂದಿರಾ ಶಿವಸ್ವಾಮಿ ಚಿತ್ರ ನಿರ್ಮಾಣ ಮಾಡಿದ್ದು ಯುವ ಪ್ರತಿಭೆ ಪೃಥ್ವಿರಾಜ್ ಪಾಟೀಲ್, ನಿರ್ದೇಶನದ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಚಿತ್ರವನ್ನು ಬೆಂಗಳೂರು, ತೀರ್ಥಹಳ್ಳಿ, ಸಾಗರ, ಶಿರಸಿ, ಕುಂದಾಪುರ, ಯಲ್ಲಾಪುರ ಸುತ್ತಮುತ್ತ ಚಿತ್ರದ ಬಹುತೇಕ ಚಿತ್ರೀಕರಣ ನಡಸಲಾಗಿದ್ದು, ಸಿಂಗಪುರ, ನೆದರ್ಲ್ಯಾಂಡ್ ಸೇರಿದಂತೆ ವಿದೇಶಗಳಲ್ಲೂ ‘ವಿಕಲ್ಪ’ದ ಚಿತ್ರೀಕರಣ ಮಾಡಲಾಗಿದೆ.
ನಾಯಕ,ನಿರ್ದೇಶಕ ಪೃಥ್ವಿರಾಜ್ ಪಾಟೀಲ್ ಮಾತನಾಡಿ ‘ಸೈಕಾಲಜಿಕಲ್-ಥ್ರಿಲ್ಲರ್ ಶೈಲಿಯ ಸಿನಿಮಾ. ‘ಪೆÇೀಸ್ಟ್ ಟ್ರಾಮಾಟಿಕ್ ಸ್ಟ್ರೆಸ್ ಡಿಸಾರ್ಡರ್’ ಎಂಬ ಮಾನಸಿಕ ರೋಗದ ಎಳೆ ಆಧರಿಸಿ ‘ವಿಕಲ್ಪ’ ಸಿನಿಮಾ ಮಾಡಲಾಗಿದೆ.ವ್ಯಕ್ತಿಯ ಮನಸ್ಸಿನಲ್ಲಿರುವ ಭ್ರಮೆ ಮತ್ತು ವಾಸ್ತವದ ನಡುವಿಣ ಚಿತ್ರಣ ಚಿತ್ರದಲ್ಲಿದೆ. ವೈಜ್ಞಾನಿಕ ಅಂಶಗಳನ್ನು ಆಧರಿಸಿ, ತಜ್ಞರ ಸಲಹೆಯ ಮೇರೆಗೆ ಈ ಚಿತ್ರದ ಪಾತ್ರಗಳನ್ನು ಹೆಣೆದು, ಸನ್ನಿವೇಶಗಳನ್ನು ಚಿತ್ರಿಸಿದ್ದೇವೆ. ಮನುಷ್ಯನ ಮನಸ್ಸಿನ ಸುಪ್ತ ಭಾವನೆಗಳು, ತುಮುಲ-ತಲ್ಲಣಗಳನ್ನು ಈ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ತರುತ್ತಿದ್ದೇವೆ’ ಎಂದರು.

ಸೈಕಾಲಜಿಕಲ್-ಥ್ರಿಲ್ಲರ್ ಅಂಶಗಳ ಜೊತೆಗೆ ನವಿರಾದ ಹಾಸ್ಯ ಮತ್ತು ಮನೋರಂಜನೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು ಇಡೀ ಚಿತ್ರದ ಕಥೆಂ ಹೆಣೆಯಲಾಗಿದೆ. ಈ ಚಿತ್ರಕ್ಕೆ ಚಿತ್ರದ ಕಥೆಯೇ ನಾಯಕ ಪ್ರತಿ ಪಾತ್ರಗಳೂ ಮಾತನಾಡುತ್ತವೆ. ಪ್ರತಿ ಪಾತ್ರಗಳೂ ನೋಡುಗರ ಮನಮುಟ್ಟುತ್ತವೆ ಎನ್ನುವ ಭರವಸೆ ನೀಡಿದರು
ನಾಯಕಿ ನಾಗಶ್ರೀ ಹೆಬ್ಬಾರ್ ಮಾತನಾಡಿ, ಚಿತ್ರದಲ್ಲಿ ಸಮುದ್ಯತಾ ಪಾತ್ರ ಮಾಡಿದ್ದೇನೆ ಮನಸ್ಸಿನೊಳಗೆ ಸಾಕಷ್ಟು ತಲ್ಲಣಗಳನ್ನು ಹೊತ್ತುಕೊಂಡಿದ್ದರೂ, ಎಲ್ಲೂ ಅತಿಯಾಗಿ ತೋರಿಸಿಕೊಳ್ಳದೆ ಗಂಭೀರವಾಗಿ ಇರುವ ಪಾತ್ರ. ‘ಈಗಾಗಲೇ ಎಲ್ಲ ಕಡೆಗಳಿಂದಲೂ ‘ವಿಕಲ್ಪ’ಕ್ಕೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದ್ದು, ಚಿತ್ರ ಪ್ರೇಕ್ಷಕರಿಗೆ ಇಷ್ಟವಾಗಲಿದೆ ಎಂದರು
ನಟಿ ಹರಿಣಿ ಶ್ರೀಕಾಂತ್ ಮಾತನಾಡಿ ಮನಶಾಸ್ತ್ರಜ್ಞೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಹೊಸಥರದ ಅನುಭವ ಕೊಟ್ಟ ಸಿನಿಮಾ ನಿರ್ದೇಶಕರು ವೃತ್ತಿಪರವಾಗಿ ‘ವಿಕಲ್ಪ’ ಚಿತ್ರವನ್ನು ತೆರೆಗೆ ತರುತ್ತಿದ್ದಾರೆ. ಪ್ರತಿ ದೃಶ್ಯವನ್ನೂ ತುಂಬ ಸೂಕ್ಷ್ಮವಾಗಿ ಕಟ್ಟಿಕೊಟ್ಟಿದ್ದಾರೆ ಎಂದು ಮೆಚ್ಚುಗೆಯ ಮಾತನಾಡಿದರು

ಮಿಥುನ್ ತೀರ್ಥಹಳ್ಳಿ ಸಹ ನಿರ್ದೇಶನ,ಅಭಿರಾಮ್ ಗೌಡ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನ ಸಂವತ್ಸರ ಸಂಗೀತ, ಪೃಥ್ವಿರಾಜ್ ಪಾಟಿಲ್ ಮತ್ತು ಕೌಂಡಿನ್ಯ ಕುಡ್ಲುತೋಟ ಹಾಡುಗಳಿಗೆ ಸಾಹಿತ್ಯ ರಚಿಸಿದ್ದಾರೆ. ಸಿದ್ದಾರ್ಥ್ ಬೆಳ್ಮಣ್ಣು, ಸಂವತ್ಸರ, ಶ್ರೀರಂಜಿನಿ, ಇಂಚರ ಹಾಡುಗಳಿಗೆ ಧ್ವನಿಯಾಗಿದ್ದಾರೆ.
ಚಿತ್ರದಲ್ಲಿ ನಾಗಶ್ರೀ ಹೆಬ್ಬಾರ್, ಹರಿಣಿ ಶ್ರೀಕಾಂತ್, ಸಂಧ್ಯಾ ವಿನಾಯಕ್, ಗಣಪತಿ ವಡ್ಡಿನಗದ್ದೆ, ಸ್ವರೂಪ್ ಬಚ್ಚ್, ಪೂಜಾ ಬಚ್ಚ್, ಜಯಂತ್ ಡೇವಿಡ್, ಡಾ. ಪ್ರಕೃತಿ, ಮಾಸ್ಟರ್ ಆಯುಷ್ ಸಂತೋಷ್, ಗಿರೀಶ್ ಹೆಗಡೆ ಮುಂತಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ..

