"Puneeth Niwas" trailer released, showcasing the ideals of Puneeth Rajkumar

ಪುನೀತ್ ರಾಜ್ ಕುಮಾರ್ ಆದರ್ಶ ಪರಿಚಿಸುವ “ಪುನೀತ್ ನಿವಾಸ” ಟ್ರೈಲರ್ ಬಿಡುಗಡೆ - CineNewsKannada.com

ಪುನೀತ್ ರಾಜ್ ಕುಮಾರ್ ಆದರ್ಶ ಪರಿಚಿಸುವ “ಪುನೀತ್ ನಿವಾಸ” ಟ್ರೈಲರ್ ಬಿಡುಗಡೆ

ಶ್ರೀಪಂಚಮಿ ಸಿನಿ ಕ್ರಿಯೇಷನ್ಸ್ ಮೂಲಕ ಎಸ್.ಮೋಹನ್ ಚಿತ್ರ ನಿರ್ಮಿಸುತ್ತಿದ್ದು, ಕನ್ನಡ ರಾಜು ಇಡೀ ಚಿತ್ರತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. ಚಿತ್ರದ ಟ್ರೈಲರ್‍ನ್ನು ರಾಜ್ ಕುಟುಂಬದ ಆಪ್ತ ಗ್ರೀನ್ ಹೌಸ್ ವಾಸು ಬಿಡುಗಡೆಗೊಳಿಸಿ ಶುಭ ಹಾರೈಸಿದರು

ಪುನೀತ್ ರಾಜ್‍ಕುಮಾರ್ ಅಪ್ಪಟ ಅಭಿಮಾನಿ ಮಲ್ಲು ಎಂಬ ಹುಡುಗನ ಕಥೆಯಿದು. ಸಿನಿಮಾ ಮಾಡಬೇಕೆಂದು ಹೊರಟ ಆತ ಕೊನೆಗೂ ಆ ಸಿನಿಮಾ ಮಾಡಿದನೇ, ಇಲ್ಲವೇ, ಪುನೀತ್‍ರ ಆದರ್ಶಗಳನ್ನು ಆತ ಹೇಗೆ ಪಾಲಿಸುತ್ತಾನೆ ಎಂಬುದನ್ನು ಚಿತ್ರದ ಮೂಲಕ ನಿರ್ದೇಶಕ ನಾಗೇಂದ್ರ ಪ್ರಸಾದ್ ಹೇಳಹೊರಟಿದ್ದಾರೆ.

ನಿರ್ಮಾಪಕ ಎಸ್. ಮೋಹನ್ ಮಾತನಾಡಿ ಚಿಕ್ಕ ವಯಸಿನಿಂದಲೇ ಸಿನಿಮಾ ಹುಚ್ಚು, ಹಾಗೇ ಸಿನಿಮಾ ನೋಡ್ತಾ ರಾಜ್‍ಕುಮಾರ್, ಪುನೀತ್ ಆದರ್ಶಗಳೇ ನನಗೆ ಪ್ರೇರಣೆ 2021ರಲ್ಲಿ ಈ ಟೈಟಲ್ ರಿಜಿಸ್ಟರ್ ಮಾಡಿಸಿದೆ, ಇದಕ್ಕೆ ತಕ್ಕಂತೆ 50 ಕಥೆಗಳನ್ನು ಮಾಡಿದೆ, ಯಾವುದೂ ಸರಿಹೊಂದಲಿಲ್ಲ, ಕೊನೆಗೆ ಈ ಕಥೆ ಚಿತ್ರರೂಪಕ್ಕೆ ತಂದಿದ್ದೇವೆ, ಪುನೀತ್ ನಿವಾಸದ ಒಳಗೆ ಬಂದಾಗ ಅಲ್ಲಿ ಪುನೀತ್ ಅವರೇ ಕಾಣಿಸುತ್ತಾರೆ. ಸಿನಿಮಾ ಮಾಡಬೇಕೆಂದು ಹಣ ಕೂಡಿಟ್ಟುಕೊಂಡಿದ್ದ ಒಬ್ಬ ಬಡ ಹುಡುಗ ಕೊನೆಗೆ ತನ್ನ ಕನಸಿನ ಸಿನಿಮಾವನ್ನು ಹೇಗೆ ನಿರ್ಮಿಸುತ್ತಾನೆ ಅನ್ನೋದೇ ಚಿತ್ರದ ಕಥಾಹಂದರ, ಚಿತ್ರಕ್ಕಾಗಿ ಕೆಲವು ದೃಶ್ಯಗಳನ್ನು ನಾನು, ನಮ್ಮ ನಿರ್ದೇಶಕರು ಸೇರಿ ಶೂಟಿಂಗ್ ಸೆಟ್‍ನಲ್ಲೇ ರೆಡಿ ಮಾಡಿಕೊಂಡೆವು. ಇದಕ್ಕೆ ನಿರ್ದೇಶಕರೂ ಸಹ ಸಾಥ್ ಕೊಟ್ಟರು ಎಂದು ಹೇಳಿದ್ಧಾರೆ

ನಿರ್ದೇಶಕ ನಾಗೇಂದ್ರ ಪ್ರಸಾದ್ ಮಾತನಾಡಿ ಈ ಸಿನಿಮಾ ಮೋಹನ್ ಕನಸು, ಪುನೀತ್ ಅಭಿಮಾನಿಯೊಬ್ಬನ ಕಥೆಯಿದು. ಪುನೀತ್‍ನಿವಾಸದ ಒಳಗೆ ಬಂದಾಗ ಅಲ್ಲಿ ಪುನೀತ್ ಕಾಣಿಸ್ತಾರೆ. ಹೇಗೆ ಕಾಣಿಸುತ್ತಾರೆ ಅನ್ನೋದೇ ಕುತೂಹಲ. ಚಿತ್ರ ತುಂಬಾ ಚೆನ್ನಾಗಿ ಮೂಡಿಬರುತ್ತಿದೆ ಎಂದರು.

ಹಿರಿಯ ನಟ ಅಭಿಜಿತ್ ಮಾತನಾಡಿ ಈ ಟೈಟಲ್‍ಗೆ ದೊಡ್ಡ ಪವರ್ ಇದೆ, ಟೈಟಲ್ ಹೇಳಿದಾಗ ನನಗೂ ರೋಮಾಂಚನವಾಗಿ, ಮರುಮಾತಾಡದೆ ಒಪ್ಪಿಕೊಂಡೆ. ನಾನು ಪುನೀತ್ ಅವರ ಜತೆ ಆಕ್ಟ್ ಮಾಡಬೇಕೆಂದುಕೊಂಡಿದ್ದೆ. ಆಗಿರಲಿಲ್ಲ. ಈಗ ಅವರ ಹೆಸರಿನ ಚಿತ್ರದಲ್ಲಿ ಅಭಿನಯಿಸಿದ್ದೇನೆ, ನಿರ್ಮಾಪಕ ಮೋಹನ್ ಅವರು ಪುನೀತ್‍ರ ಆದರ್ಶಗಳನ್ನು ಮೈಗೂಡಿಸಿಕೊಂಡಿದ್ದಾರೆ. ಚಿತ್ರಕ್ಕಾಗಿ ಒಂದು ನಿಜವಾದ ಮನೆಯನ್ನೇ ಕಟ್ಟಿಸಿದ್ದಾರೆ ಎಂದರು

ಸಂಗೀತ ನಿರ್ದೇಶಕ ಎಂ.ಎನ್. ಕೃಪಾಕರ್ ಮಾತನಾಡಿ ಆರಂಭದಲ್ಲಿ ಒಂದೇ ಹಾಡು ಮಾಡಬೇಕೆಂದಿತ್ತು, ನಂತರ ಅದು ನಾಲ್ಕಾಯ್ತು, ತಾಯಿ ಸಾಂಗನ್ನು ಅಭಿಜಿತ್ ಅವರೇ ಹಾಡಿದ್ದಾರೆ ಎಂದು ಹೇಳಿದರು.

ಹಿರಿಯ ನಿರ್ಮಾಪಕ ಕರಿಸುಬ್ಬು ಮಾತನಾಡಿ ಮೋಹನ್ ಹಳೇ ಪರಿಚಯ, ಪುನೀತ್ ನಿವಾಸದ ಕಥೆ ಹೇಳುವ ನಿರ್ಮಾಪಕನ ಪಾತ್ರ ನನ್ನದು ಎಂದರು.

ಮಲ್ಲು ಪಾತ್ರದಲ್ಲಿ ಮಾಸ್ಟರ್ ವಿಠ್ಠಲ್ ಕಾಣಿಸಿಕೊಂಡಿದ್ದಾರೆ, ಹಿರಿಯನಟ ಶಂಕರ್ ಭಟ್, ಗಂಡಸಿ ಸದಾನಂದಸ್ವಾಮಿ, ಶ್ರೇಯಸ್, ಐಶ್ವರ್ಯ ತಮ್ಮ ಪಾತ್ರಗಳ ಬಗ್ಗೆ ಮಾತನಾಡಿದರು.

ಎಸ್, ಬಾಲು ಅವರ ಛಾಯಾಗ್ರಹಣ, ಜೆಮ್ ಶಿವು ಸಂಭಾಷಣೆ, ಮುತ್ತುರಾಜ್ ಸಂಕಲನ ಈ ಚಿತ್ರಕ್ಕಿದೆ. ಎಂ.ಎಸ್. ಉಮೇಶ್, ಡಿಂಗ್ರಿ ನಾಗರಾಜ್, ಟೆನ್ನಿಸ್ ಕೃಷ್ಣ, ರೇಖಾದಾಸ್, ಗಣೇಶ್‍ರಾವ್ ಕೇಸರಕರ್ ಹಾಗೂ ಇತರರು ಪುನೀತ್ ನಿವಾಸದ ಪ್ರಮುಖ ಪಾತ್ರಗಳಲ್ಲಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin