“ಬೃಂದಾವಿಹಾರಿ” ಚಿತ್ರದ “ರಾಧಾ ರಾಧಾ” ಹಾಡು ಬಿಡುಗಡೆ : ಕುತೂಹಲ ಹೆಚ್ಚಳ
ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ನಿರ್ದೇಶಕ ಶ್ರೀನಿವಾಸ ರಾಜ್ ಕಾಂಬಿನೇಷನ್‍ನಲ್ಲಿ ಮೂಡಿಬಂದ “ ಕೃಷ್ಣಂ ಪ್ರಯಣ ಸಖಿ: ಚಿತ್ರದ ಭರ್ಜರಿ ಯಶಸ್ಸಿನ ನಂತರ ಈ ಜೋಡಿ ಮತ್ತೊಮ್ಮೆ “ಬೃಂದಾ ವಿಹಾರಿ”ಚಿತ್ರದಲ್ಲಿ ಜೊತೆಯಾಗಿದ್ದು ಈ ಚಿತ್ರ ಮೇಲೆ ನಿರೀಕ್ಷೆ ಹೆಚ್ಚು ಮಾಡಿದೆ.

ನಾಯಕನಾಗಿ ಎರಡು ದಶಕಗಳನ್ನು ಪೂರೈಸಿರುವ ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ, ಸಮೃದ್ಧಿ ವಿ ಮಂಜುನಾಥ್ ನಿರ್ಮಾಣದ ಹಾಗೂ ಶ್ರೀನಿವಾಸರಾಜು ನಿರ್ದೇಶನದ “ಬೃಂದಾ ವಿಹಾರಿ” ಚಿತ್ರದ ಎರಡನೇ ಹಾಡು “ರಾಧಾ ರಾಧಾ” ಅದ್ದೂರಿಯಾಗಿ ಬಿಡುಗಡೆಯಾಗಿದೆ
ನಿರ್ಮಾಪಕ ಸಮೃದ್ಧಿ ಮಂಜುನಾಥ್ ಅವರೆ “ರಾಧಾ ರಾಧಾ” ಹಾಡನ್ನು ಸಹಸ್ರಾರು ಜನರ ಸಮ್ಮುಖದಲ್ಲಿ ಅನಾವರಣ ಮಾಡಿದರು. ಡಾ. ವಿ.ನಾಗೇಂದ್ರ ಪ್ರಸಾದ್ ಬರೆದಿರುವ, ಹೇಶಮ್ ಅಬ್ದುಲ್ ವಹಾಬ್ ಸಂಗೀತ ನೀಡಿರುವ, ಸಿದ್ ಶ್ರೀರಾಮ್ ಮತ್ತು ಚಿನ್ಮಯಿ ಹಾಡಿರುವ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ – ದೇವಿಕಾ ಭಟ್ ಅಭಿನಯಿಸಿರುವ ಈ ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ಈ ವೇಳೆ ಮಾತನಾಡಿದ ಗಣೇಶ್ , ನನಗೂ ಹಾಗೂ ತುಮಕೂರಿಗೂ ಹತ್ತಿರದ ನಂಟು. ಓದಿದ್ದು ನೆಲಮಂಗಲದಲ್ಲಿ. ಆಗಾಗ ತುಮಕೂರಿಗೆ ಬರುತ್ತಿದ್ದೆ. ನನ್ನ ಅಭಿನಯದ “ಬೃಂದಾವಿಹಾರಿ” ಚಿತ್ರದ ಹಾಡು ತುಮಕೂರಿನಲ್ಲಿ ಬಿಡುಗಡೆಯಾಗಿದ್ದು ಬಹಳ ಖುಷಿಯಾಗಿದೆ. ನಾಯಕನಾಗಿ ಇಪ್ಪತ್ತು ವರ್ಷಗಳಾಗಿದೆ. ಸಂದರ್ಭದಲ್ಲಿ ನನ್ನ ಯಶಸ್ಸನ್ನು ಅಭಿಮಾನಿಗಳಿಗೆ ಅರ್ಪಿಸುತ್ತೇನೆ. ಅವರಿಂದಲೇ ಸಾಧ್ಯವಾಗಿದ್ದು. ಇದೇ ಸಂದರ್ಭದಲ್ಲಿ ಎಲ್ಲಾ ಚಿತ್ರದ ನಿರ್ಮಾಪಕರಿಗೆ, ನಿರ್ದೇಶಕರಿಗೆ ಹಾಗೂ ತಂತ್ರಜ್ಞರಿಗೆ ಧನ್ಯವಾದ ತಿಳಿಸುತ್ತೇನೆ. ವಿಶೇಷವಾಗಿ ಉದಯ ವಾಹಿನಿ “ಕಾಮಿಡಿ ಟೈಮ್” ಕಾರ್ಯಕ್ರಮವೇ ಚಿತ್ರರಂಗಕ್ಕೆ ಕರೆತಂದಿದ್ದು. “ಬೃಂದಾ ವಿಹಾರಿ” ಚಿತ್ರದ ಮೊದಲ ಹಾಡು “ರಾಮ ರಾಮ” ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ. ಈಗ ಬಿಡುಗಡೆಯಾಗಿರುವ “ರಾಧಾ ರಾಧಾ” ಹಾಡು ಸಹ ಎಲ್ಲರಿಗೂ ಮೆಚ್ಚುಗೆಯಾಗಲಿದೆ. ನಿಮ್ಮೆಲ್ಲರ ಪೆÇ್ರೀತ್ಸಾಹ ಸದಾ ಇರಲಿ ಎಂದರು
ನಿರ್ದೇಶಕ ಶ್ರೀನಿವಾಸರಾಜು ಮಾತನಾಡಿ “ಬೃಂದಾ ವಿಹಾರಿ” ಚಿತ್ರದಲ್ಲಿ ಏಳು ಹಾಡುಗಳಿದೆ. ಎರಡನೇ ಹಾಡು ಅನಾವರಣವಾಗಿದೆ. ಸಂದರ್ಭದಲ್ಲಿ ನಿರ್ಮಾಪಕ ಸಮೃದ್ಧಿ ಮಂಜುನಾಥ್, ನಾಯಕ ಗಣೇಶ್ ಹಾಗೂ ಸಂಗೀತ ನಿರ್ದೇಶಕ ಹೇಶಮ್ ಅಬ್ದುಲ್ ನವಾಬ್ ಧನ್ಯವಾದ ಹೇಳುತ್ತೇನೆ. ಉಳಿದ ಹಾಡುಗಳು ಸಹ ಸುಮಧುರವಾಗಿದೆ. ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದರು
ನಿರ್ಮಾಪಕ ಸಮೃದ್ಧಿ ಮಂಜುನಾಥ್ ಮಾತನಾಡಿ “ಬೃಂದಾ ವಿಹಾರಿ” ನಮ್ಮ ಸಂಸ್ಥೆಯ ನಿರ್ಮಾಣದ ನಾಲ್ಕನೇ ಚಿತ್ರ. ತುಮಕೂರಿನಲ್ಲಿ ಸಹಸ್ರಾರು ಜನರ ಉಪಸ್ಥಿತಿಯಲ್ಲಿ ನಮ್ಮ ಚಿತ್ರದ ಹಾಡು ಬಿಡುಗಡೆಯಾಗಿದ್ದು ಬಹಳ ಸಂತೋಷವಾಗಿದೆ ಎಂದು ತಿಳಿಸಿದರು.

ನಾಯಕಿ ದೇವಿಕಾ ಭಟ್ ಮಾತನಾಡಿ ಇದು ನನ್ನ ಮೊದಲ ಚಿತ್ರ. ಗಣೇಶ್ ಅವರ ಜೊತೆಗೆ ನಟಿಸಿದ್ದು ಖುಷಿಯಾಗಿದೆ. ಅವಕಾಶ ನೀಡಿದ ನಿರ್ಮಾಪಕರಿಗೆ ಹಾಗೂ ನಿರ್ದೇಶಕರಿಗೆ ಧನ್ಯವಾದ ಎಂದರು
ಸಂಗೀತ ನಿರ್ದೇಶಕ ಹೇಶಮ್ ಅಬ್ದುಲ್ ವಹಾಬ್ ಅವರು ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು.ವೆಂಕಟ್ ಪ್ರಸಾದ್ ಛಾಯಾಗ್ರಹಣ ಚಿತ್ರಕ್ಕಿದೆ. ಗಣೇಶ್ ಅವರಿಗೆ ನಾಯಕಿಯರಾಗಿ ದೇವಿಕಾ ಭಟ್ ಹಾಗೂ ಮಾಳವಿಕ ಶರ್ಮ ಅಭಿನಯಿಸಿದ್ದಾರೆ.

