"Raju James Bond" movie "Kanmani" song released: The movie will hit the screens on Valentine's Day

“ರಾಜು ಜೇಮ್ಸ್ ಬಾಂಡ್” ಚಿತ್ರ ದ ‘ಕಣ್ಮಣಿ ” ಹಾಡು ಬಿಡುಗಡೆ : ಪ್ರೇಮಿಗಳ ದಿನದಂದು ಸಿನಿಮಾ ತೆರೆಗೆ - CineNewsKannada.com

“ರಾಜು ಜೇಮ್ಸ್ ಬಾಂಡ್” ಚಿತ್ರ ದ ‘ಕಣ್ಮಣಿ ” ಹಾಡು ಬಿಡುಗಡೆ : ಪ್ರೇಮಿಗಳ ದಿನದಂದು ಸಿನಿಮಾ ತೆರೆಗೆ

ರಾಜು ಸರಣಿಯ ಖ್ಯಾತಿಯ ನಟ ಗುರುನಂದನ್ ನಟಿಸಿರುವ ಮತ್ತೊಂದು ಅದೇ ಸರಣಿಯ ಚಿತ್ರ “ ರಾಜು ಜೇಮ್ಸ್ ಬಾಂಡ್” ಚಿತ್ರದ ಕಣ್ಮಣಿ” ಹಾಡು ಬಿಡುಗಡೆಯಾಗಿದ್ದು ಗಮನ ಸೆಳೆದಿದೆ. ಇದೇ ಖುಷಿಯಲ್ಲಿ ಚಿತ್ರವನ್ನು ಪ್ರೇಮಿಗಳ ದಿನದಂದು ತೆರೆಗೆ ತರಲು ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ.

ಕರ್ಮ ಬ್ರೋಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ದೀಪಕ್ ಮಧುವನಹಳ್ಳಿ ನಿರ್ದೇಶನದಲ್ಲಿ ಮೂಡಿ ಬಂದಿರುವ “ರಾಜು ಜೇಮ್ಸ್ ಬಾಂಡ್ ” ಚಿತ್ರಕ್ಕಾಗಿ ಜ್ಯೋತಿ ವ್ಯಾಸರಾಜ್ ಬರೆದಿರುವ “ಕಣ್ಮಣಿ” ಎಂಬ ಹಾಡು ಬಿಡುಗಡೆಯಾಗಿದೆ.ಮುರುಳಿ ಮಾಸ್ಟರ್ ನೃತ್ಯ ಸಂಯೋಜನೆ ಮಾಡಿದ್ದು ಅನೂಪ್ ಸೀಳಿನ್ ಸಂಗೀತ ನೀಡಿರುವ ಹಾಡನ್ನು ಖ್ಯಾತ ಗಾಯಕ ಸಂಜಿತ್ ಹೆಗ್ಡೆ ಹಾಡಿದ್ದಾರೆ.

ನಿರ್ದೇಶಕ ದೀಪಕ್ ಮಧುವನಹಳ್ಳಿ ಮಾತನಾಡಿ ಅಣ್ಣವ್ರು ಅಭಿನಯಿಸಿದ್ದ ಜೇಮ್ಸ್ ಬಾಂಡ್ ಚಿತ್ರದ ಕಥೆಯೇ ಬೇರೆ. “ರಾಜು ಜೇಮ್ಸ್ ಬಾಂಡ್” ಚಿತ್ರದ ಕಥೆಯೇ ಬೇರೆ ಆರಂಭದಲ್ಲಿ ಸ್ಪಷ್ಟಪಡಿಸಿದರು, ಚಿತ್ರದಿಂದ “ಕಣ್ಮಣಿ” ಎಂಬ ರೊಮ್ಯಾಂಟಿಕ್ ಸಾಂಗ್ ಬಿಡುಗಡೆಯಾಗಿದೆ. ಗುರುನಂದನ್ ಹಾಗೂ ಮೃದುಲ ಲಂಡನ್ ಸುತ್ತಮುತ್ತಲಿನ ಸುಂದರ ಪರಿಸರದಲ್ಲಿ ಚಿತ್ರೀಕರಣವಾಗಿರುವ ಈ ಗೀತೆಯಲ್ಲಿ ಅಭಿನಯಿಸಿದ್ದಾರೆ ಎಂದರು.

ನಾಯಕ ಗುರು ನಂದನ್ ಮಾತನಾಡಿ “ಕಣ್ಮಣಿ” ಹಾಡಿನಲ್ಲಿ ಚೆನ್ನಾಗಿ ನೃತ್ಯ ಮಾಡಿದ್ದೀನಿ ಅಂದರೆ ಅದಕ್ಕೆ ಮುರಳಿ ಮಾಸ್ಟರ್ ಕಾರಣ. ಅವರಿಗೆ ನನ್ನ ಕಡೆಯಿಂದ ಧನ್ಯವಾದ. ನಮ್ಮ ಚಿತ್ರ ಡಿಸೆಂಬರ್ ಕೊನೆಯಲ್ಲೇ ಬಿಡುಗಡೆಯಾಗಬೇಕಿತ್ತು. ಆದರೆ ಎರಡು ದೊಡ್ಡ ಚಿತ್ರಗಳು ಅದೇ ಸಮಯಕ್ಕೆ ಬಿಡುಗಡೆಯಾದ್ದುದ್ದರಿಂದ ನಮ್ಮ ಚಿತ್ರದ ಬಿಡುಗಡೆ ಸ್ವಲ್ಪ ಮುಂದೆ ಹೋಯಿತು. ಫೆಬ್ರವರಿ 14 ನಮ್ಮ ಚಿತ್ರ ಬಿಡುಗಡೆಯಾಗಲಿದೆ ನೋಡಿ ಹಾರೈಸಿ ಎಂದು ಹೇಳಿದರು

ನಿರ್ಮಾಪಕರಾದ ಮಂಜುನಾಥ್ ವಿಶ್ವಕರ್ಮ ಹಾಗೂ ಕಿರಣ್ ಭರ್ತೂರು ಮಾತನಾಡಿ ಫೆಬ್ರವರಿ 14 ರಂದು ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ನೇಪಾಳಿ ಭಾಷೆಗೂ ನಮ್ಮ ಚಿತ್ರದ ರೈಟ್ಸ್ ಮಾರಾಟವಾಗಿದೆ. ಇಂದು ಬಿಡುಗಡೆಯಾಗಿರುವ ಹಾಡು ಲಂಡನ್ ನ ಸುಂದರ ಪರಿಸರದಲ್ಲಿ ಚಿತ್ರೀಕರಣವಾಗಿದೆ. ಫೆಬ್ರವರಿ 14ರಂದು ನಮ್ಮ ಚಿತ್ರ ಕರ್ನಾಟಕದಲ್ಲಿ ಸತ್ಯ ಪಿಕ್ಚರ್ಸ್ ಮೂಲಕ ಬಿಡುಗಡೆಯಾಗುತ್ತಿದೆ ಎಂದರು

ನಾಯಕಿ ಮೃದುಲ, ನೃತ್ಯ ನಿರ್ದೇಶಕ ಮುರಳಿ ಹಾಗೂ ವಿತರಕ ಸತ್ಯಪ್ರಕಾಶ್ “ಕಣ್ಮಣಿ” ಹಾಡು ಹಾಗೂ ಚಿತ್ರದ ಬಗ್ಗೆ ಮಾತನಾಡಿದರು.

ಗುರುನಂದನ್ ಚಿತ್ರದ ನಾಯಕರಾಗಿ ನಟಿಸಿದ್ದಾರೆ. ಮೃದುಲಾ, ಸಾಧು ಕೋಕಿಲ, ಅಚ್ಯುತ್ ಕುಮಾರ್, ಚಿಕ್ಕಣ್ಣ, ರವಿಶಂಕರ್, ಜೈ ಜಗದೀಶ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin