“ರಾಜು ಜೇಮ್ಸ್ ಬಾಂಡ್” ಚಿತ್ರ ಬಿಡುಗಡೆ ದಿನಾಂಕ ಮುಂದೂಡಿಕೆ
ರಾಜು ಸರಣಿಯ ಚಿತ್ರಗಳ ಮೂಲಕ ಗಮನ ಸೆಳೆದಿರುವ ಗುರುನಂದನ್ ನಟನೆಯ “ರಾಜು ಜೇಮ್ಸ್ ಬಾಂಡ್” ಚಿತ್ರ ಎಲ್ಲಾ ಅಮದುಕೊಂಡಂತೆ ಆಗಿದ್ದರೆ ಡಿಸೆಂಬರ್ 27ಕ್ಕೆ ರಾಜ್ಯಾದ್ಯಂತ ತೆರೆಗೆ ಬರಬೇಕಾಗಿತ್ತು. ಇದೀಗ ಬಿಡುಗಡೆ ಮುಂದೂಡಿಕೆ ಆಗಿದೆ.

ಕರ್ಮ ಬ್ರೋಸ್ ಪ್ರೊಡಕ್ಷನ್ಸ್ ನ ಬಹು ನಿರೀಕ್ಷಿತ “ರಾಜು ಜೇಮ್ಸ್ ಬಾಂಡ್ ” ಚಿತ್ರದ ಹಾಡೊಂದನ್ನು ನೂತನ ವರ್ಷದ ಆರಂಭದಲ್ಲಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ವಿಶೇಷವೆಂದರೆ ಹಾಡಿನ ಜೊತೆಗೆ ಚಿತ್ರದ ಬಿಡುಗಡೆ ದಿನಾಂಕ ಕೂಡ ಘೋಷಣೆಯಾಗಲಿದೆ.
ಮೊದಲೇ ತಿಳಿಸಿದಂತೆ ಡಿಸೆಂಬರ್ 27 ರಂದು ಈ ಚಿತ್ರ ತೆರೆಗೆ ಬರಬೇಕಿತ್ತು. ಆದರೆ “ಯುಐ ಹಾಗೂ “ಮ್ಯಾಕ್ಸ್” ಚಿತ್ರಗಳು ಡಿಸೆಂಬರ್ ಅಂತ್ಯದಲ್ಲಿ ಬಿಡುಗಡೆಯಾದ ಕಾರಣ ನಮ್ಮ ಚಿತ್ರದ ಬಿಡುಗಡೆಯನ್ನು ಸ್ವಲ್ಪ ಮುಂದೆ ಹಾಕಿರುವುದಾಗಿ ನಿರ್ಮಾಪಕರಾದ ಮಂಜುನಾಥ್ ವಿಶ್ವಕರ್ಮ (ಲಂಡನ್) ಹಾಗೂ ಕಿರಣ್ ಭರ್ತೂರು(ಕೆನಡಾ) ತಿಳಿಸಿದ್ದಾರೆ.

ಶೀಘ್ರದಲ್ಲೇ ಚಿತ್ರ ಬಿಡುಗಡೆ ಮಾಡುವ ಸಿದ್ದತೆ ನಡೆಯುತ್ತಿದೆ ಎಂದು ತಿಳಿಸಿರುವ ನಿರ್ದೇಶಕ ದೀಪಕ್ ಮಧುವನಹಳ್ಳಿ, ಚಿತ್ರ ತನ್ನ ಮನಮೋಹಕ ಕಥೆ, ಹಾಸ್ಯ, ಲಂಡನ್‍ನ ಅದ್ಭುತ ದೃಶ್ಯಗಳು ಮತ್ತು ಮಧುರವಾದ ಸಂಗೀತದೊಂದಿಗೆ ಪ್ರೇಕ್ಷಕರನ್ನು ಆಕರ್ಷಿಸುವ ಭರವಸೆಯನ್ನು ನೀಡುತ್ತಿದೆ. “ರಾಜು ಜೇಮ್ಸ್ ಬಾಂಡ್ ” ಹಾಸ್ಯ ಮತ್ತು ಹೈಸ್ಟ್ ಡ್ರಾಮಾದ ಸಂಯೋಜನೆಯನ್ನು ತೋರಿಸುತ್ತದೆ.

